• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking News: ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ

|
Google Oneindia Kannada News

ಹುಬ್ಬಳ್ಳಿ, ಜುಲೈ 29: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಸಣ್ಣ ಅಪಘಾತವಾಗಿದೆ.

   ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ | Oneindia Kannada

   ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

   ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಇದ್ದ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಶಿವರಾಮ್ ಹೆಬ್ಬಾರ್ ಹಾಗೂ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ.

   ಸದ್ಯದ ವರದಿಯ ಪ್ರಕಾರ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅಧಿಕಾರಿಗಳು ಕಾರವಾರಕ್ಕೆ ಯಲ್ಲಾಪುರ, ಅಂಕೋಲಾ ಮೂಲಕ ತೆರಳಿದ್ದಾರೆ.

   English summary
   Former Minister Shivaram Hebbar suffers minor injuries as his Vehicle hit CM Basavaraj Bommai's convoy Vehicle at Hubballi International Airport.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X