Get Updates
Get notified of breaking news, exclusive insights, and must-see stories!

Shiggaon By Election: ಶಿಗ್ಗಾವಿ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ

ಹುಬ್ಬಳ್ಳಿ, ನವೆಂಬರ್ 04: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಪ್ರಚಾರದಲ್ಲಿ ತೊಡಗಲಿದ್ದಾರೆ. ಈ ಸಂಬಂಧ ಸೋಮವಾರ ಹುಬ್ಬಳ್ಳಿಗೆ ಆಗಮಿಸಿರುವ ಅವರು, ಮುಂದಿನ ಮೂರು ದಿನ ಕ್ಷೇತ್ರದಲ್ಲಿ ತಂಗಲಿದ್ದಾರೆ. ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ನಾಯಕರ ಮೇಲೆ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಕೋಮುವಾದಿ ಎಂದು ಕಿಡಿ ಕಾರಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾನತಾಡಿದ ಅವರು, ಇಂದು ನವೆಂಬರ್ 04ರಿಂದ ಮೂರು ದಿನಗಳ ಕಾಲ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದೇನೆ.

Siddaramaiah 3 days Election Will Campaign in Shiggaon By Election against Ex CM Bommai s Son

ಕಳೆದ ಸಲ ಹಾವೇರಿ ಗದಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಮತಗಳು ಬಂದಿವೆ. ಇದೀಗ ಉಪಚುನಾವಣೆ ಹೊತ್ತಿನಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ನಮಗೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಇಲ್ಲಿ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಅವರು ತಿಳಿಸಿದ್ದಾರೆ.

ಇಂದಿನ ಬಿಜೆಪಿ ಹೋರಾಟದ ಬಗ್ಗೆ ಸಿಎಂ ಹೇಳಿದ್ದೇನು?

ವಕ್ಫ್ ಬೋಡ್‌ನಿಂದ ಭೂಮಿ ಕಬಳಿಕೆ ವಿಚಾರವಾಗಿ ಸೋಮವಾರ ರಾಜ್ಯಾಧಂತ ಬಿಜೆಪಿ ಮುಖಂಡರು ಹೋರಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ, ಇದೆಲ್ಲವು ಕೇವಲ ರಾಜಕೀಯಕ್ಕೆ ಮಾಡುತ್ತಾರೆ. ಒಂದು ಸಮಸ್ಯೆಯ ಮೇಲೆ ಅವರು ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರೇ ವಕ್ಪ್ ಆಸ್ತಿ ರಕ್ಷಣೆ ಕುರಿತು ಮಾತನಾಡಿದ್ದರು. ಇದೀಗ ಅವರೇ ಉಲ್ಟಾ ಹೊಡೆಯುತ್ತಿದ್ದಾರೆ. ಇನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಮಾತನಾಡಿದ ಅವರು ಪ್ರತಾಪ ಸಿಂಹ ಕೋಮುವಾದಿ ಎಂದು ಪುನರುಚ್ಚರಿಸಿದರು.

ಮುಖ್ಯಮಂತ್ರಿಗಳು ಕ್ಷೇತ್ರಕ್ಕೆ ಬರುವುದು ತಿಳಿದ ಕಾಂಗ್ರೆಸ್ ಸ್ಥಳೀಯ ನಾಯಕರು, ಮುಖಂಡರು, ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಂಯ್ಯ ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. ನಂತರ ಪೊಲೀಸ್ ಗೌರವ ವಂದನೆ ಸ್ವೀಕಾರ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಸಾರ್ವಜನಿಕ ಅಹವಾಲು ಸ್ವೀಕಾರ ಮಾಡಿದರು.

ಅಸಮಾಧಾನ ನಿಯಂತ್ರಿಸಿ ಉಭಯ ಪಕ್ಷಗಳಿಂದ ಸ್ಪರ್ಧೆ

ಶಿಗ್ಗಾವಿಯಲ್ಲಿ ಇತ್ತೀಚೆಗೆ ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ನಾಯಕರು ಪಕ್ಷದ ವಿರುದ್ಧ ಹಾಗೂ ಕಾಂಗ್ರೆಸ್ ಕೆಲವರು ತಮ್ಮ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು ಎನ್ನಲಾಗಿದೆ. ಬಂಡಾಯದ ಬಿಸಿ ಏಳದಂತೆ ರಾಜ್ಯನಾಯಕರು ಹಲವು ಸರ್ಕರ್ ಮಾಡಿ ತಡೆದಿದ್ದಾರೆ. ಎಲ್ಲರನ್ನು ಸಮಾಧಾನ ಪಡಿಸಿ ಚುನಾವಣೆ ಎದುರಿಸುತ್ತಿದ್ದಾರೆ. ಶಿಗ್ಗಾವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಜೆಪಿ ಮಧ್ಯೆ ಆರೋಪ ಪ್ರತ್ಯಾರೋಪಗಳು ಸುರಿಮಳೆ ಜೋರಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+