ನನ್ನ ಯಡಿಯೂರಪ್ಪ ಭೇಟಿ ಆಕಸ್ಮಿಕವಷ್ಟೇ ಎಂದ ಸಿದ್ದರಾಮಯ್ಯ
Recommended Video

ಹುಬ್ಬಳ್ಳಿ, ಫೆಬ್ರವರಿ 25: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಬೇಟಿಯನ್ನು ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಭೇಟಿ ಮಾಡಿದ್ದಾರೆ ಬಳಿಕ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯ ಹಿಂದಿರುವ ಕಾರಣ ಕೆದುಕಲು ಹೊರಟಾಗ ನಮ್ಮ ಭೇಟಿ ಆಕಸ್ಮಿಕ ಎಂದು ಹೇಳಿದ್ದಾರೆ.
ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ.
— Siddaramaiah (@siddaramaiah) February 25, 2019
ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಮುಖ್ಯಮಂತ್ರಿ @BSYBJP ಅವರನ್ನು ಭೇಟಿಯಾದ ಕ್ಷಣ. pic.twitter.com/VF6PdkVEZI
ಸಿದ್ದರಾಮಯ್ಯ ಹೇಳಿದ್ದಿಷ್ಟು 'ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು. ಇಲ್ಲಿ ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ, ಕೊನೆಗೊಂದು ದಿನ ಗೆಲ್ಲುವುದು ನಮ್ಮ ನಡುವಿನ ಮಾನವೀಯ ಸಂಬಂಧಗಳು ಮಾತ್ರ. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಕ್ಷಣ'. ಎಂದು ಟ್ವೀಟ್ ಮಾಡಿದ್ದಾರೆ.

ನಾವು ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ, ಹುಬ್ಬಳ್ಳಿ ವಿಮಾನದಲ್ಲಿ ಆಕಸ್ಮಿಕವಾಗಿ ಅವರನ್ನು ಭೇಟಿ ಮಾಡಿ ಮಾತನಾಡಿದೆ ಇದಕ್ಕೆ ಮತ್ತೊಂದು ರಾಜಕೀಯ ಬಣ್ಣ ಎರಚುವುದು ಬೇಡ ಎಂದು ಹೇಳಿದ್ದಾರೆ.












Click it and Unblock the Notifications