ಕುಮಾರಸ್ವಾಮಿ-ಸಿದ್ದರಾಮಯ್ಯ ಅಣ್ತಮ್ಮಂದಿರಂತೆ: ಬಂಡೆಪ್ಪ ಕಾಶೆಂಪೂರ್
Recommended Video
ಹುಬ್ಬಳ್ಳಿ, ಮೇ 14: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ನಡುವಿನ ಬಾಂಧವ್ಯ ಉತ್ತಮವಾಗಿದೆ. ಅವರು ಅಣ್ಣ ತಮ್ಮಂದಿರಿಗಿಂತ ಹೆಚ್ಚು ಚೆನ್ನಾಗಿದ್ದಾರೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಎಚ್ ವಿಶ್ವನಾಥ್ ಅವರ ನಡುವಿನ ಕಿತ್ತಾಟವು ಮುಗಿದು ಹೋದ ವಿಚಾರ ಎಂದರು. ನಮ್ಮ ನಾಯಕರು ವೈಯಕ್ತಿಕವಾಗಿ ಮಾತನಾಡಿದ್ದಾರೆ. ಇದು ಮುಗಿದುಹೋದ ಕಥೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಎಲ್ಲವೂ ಸುಗಮವಾಗಿ ನಡೆಯುತ್ತದೆ ಎಂದು ಹೇಳಿದರು.
ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರದ ಅಂಗಡಿ ಬಂದ್ ಆಗಲಿದೆ ಎಂಬ ಬಿಜೆಪಿಗರ ಹೇಳಿಕೆಗೆ ತಿರುಗೇಟು ನೀಡಿದ ಕಾಶೆಂಪೂರ್, ನಮ್ಮ ಅಂಗಡಿ ಬಂದ್ ಆಗುವುದಿಲ್ಲ. ಬದಲಾಗಿ ಬಿಜೆಪಿಯವರ ಅಂಗಡಿ ಬಂದ್ ಆಗಲಿದೆ ಎಂದರು.

ನಮ್ಮ ನಡುವೆ ಭಿನ್ನಾಭಿಪ್ರಾಯ ಮತ್ತು ಗೊಂದಲವಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಹೇಳಿದರು.
ಎಚ್ ಡಿ ಕುಮಾರಸ್ವಾಮಿ ಅವರು ಪ್ರಚಾರಕ್ಕೆ ಹೋಗಲು ಸಿದ್ಧರಾಗುತ್ತಿದ್ದರು. ಹೀಗಾಗಿ ಇಬ್ಬರೂ ಭೇಟಿ ಮಾಡಿ ಮಾತನಾಡಲು ಸಾಧ್ಯವಾಗಿರಲಿಲ್ಲ. ಆದರೆ, ಗೊಂದಲವಾದ ಕೂಡಲೇ ಇಬ್ಬರೂ ನಾಯಕರು ಫೋನ್‌ನಲ್ಲಿ ಕೂಲಂಕಷವಾಗಿ ಮಾತನಾಡಿದ್ದಾರೆ. ಪಕ್ಷದ ನಾಯಕರ ಹಿತದೃಷ್ಟಿಯಿಂದ ಚರ್ಚಿಸಿದ್ದಾರೆ. ಹಿರಿಯ ನಾಯರಕು ಯಾರೂ ಸಿಟ್ಟು ಮಾಡಿಕೊಂಡಿಲ್ಲ. ಎಲ್ಲರೂ ಸೇರಿ ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಬಂಡೆಪ್ಪ ಕಾಶೆಂಪೂರ್ ಹೇಳಿದರು.












Click it and Unblock the Notifications