ಡಿ.5ರಂದು ಸಂಪುಟ ವಿಸ್ತರಣೆ ದಿನಾಂಕ ಅಂತಿಮ : ಸಿದ್ದರಾಮಯ್ಯ

Recommended Video

      ಡಿ.5ರಂದು ಸಂಪುಟ ವಿಸ್ತರಣೆ ದಿನಾಂಕ ಅಂತಿಮ : ಸಿದ್ದರಾಮಯ್ಯ..!

      ಹುಬ್ಬಳ್ಳಿ, ಡಿಸೆಂಬರ್ 02 : 'ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ ಕರೆಯಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಸಚಿವ ಸಂಪುಟ ವಿಸ್ತರಣೆ ದಿನಾಂಕವನ್ನು ಅಂದು ಅಂತಿಮಗೊಳಿಸಲಾಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದರು.

      ಭಾನುವಾರ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು, 'ನಮ್ಮ ಶಾಸಕರು ಸಚಿವ ಸಂಪುಟ ವಿಸ್ತರಣೆಗೆ ಅವಸರ ಮಾಡುತ್ತಿಲ್ಲ' ಎಂದು ಸ್ಪಷ್ಟಪಡಿಸಿದರು.

      'ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ ನಡೆಯಲಿದೆ. ಅಂದು ಎಲ್ಲರೊಂದಿಗೆ ಚರ್ಚೆ ನಡೆಸಿ ಸಚಿವ ಸಂಪುಟ ವಿಸ್ತರಣೆ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ' ಎಂದು ತಿಳಿಸಿದರು.

      Siddaramaiah calls coordination committee meeting on December 5

      'ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಅವರು ಕನಸು ಕಾಣುತ್ತಿದ್ದಾರೆ. ಬಿಜೆಪಿಯವರಿಗೆ ಬಹುಮತವಿಲ್ಲ, ಈಶ್ವರಪ್ಪ ಆಸೆ ಈಡೇರುವುದಿಲ್ಲ' ಎಂದು ಸಿದ್ದರಾಮಯ್ಯ ಹೇಳಿದರು.

      'ಶಾಸಕರಲ್ಲಿ ಅಸಮಾಧಾನವಿದೆ ಎಂಬ ವಿಚಾರ ಸುಳ್ಳು. ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಾವು ಯಾವ ಶಾಸಕರನ್ನು ಕಡೆಗಣಿಸಿಲ್ಲ. ಶಾಸಕರು ಸಂಪುಟ ವಿಸ್ತರಣೆಗೆ ಅವಸರ ಮಾಡುತ್ತಿಲ್ಲ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

      ಸಮನ್ವಯ ಸಮಿತಿಗೆ ಸಿದ್ದರಾಮಯ್ಯ ಅಧ್ಯಕ್ಷರಾಗಿದ್ದು, ಎಚ್.ಡಿ.ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ, ಡ್ಯಾನಿಷ್ ಅಲಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಲ್ ಸಮಿತಿಯ ಸದಸ್ಯರಾಗಿದ್ದಾರೆ.

      ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಂಪುಟದಲ್ಲಿ 8 ಸಚಿವ ಸ್ಥಾನಗಳು ಖಾಲಿ ಇವೆ. ಇವುಗಳಲ್ಲಿ 6 ಸ್ಥಾನಗಳು ಕಾಂಗ್ರೆಸ್‌ಗೆ, 2 ಸ್ಥಾನಗಳು ಜೆಡಿಎಸ್‌ಗೆ ಸಿಗಲಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+