ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗಾಯತ ಧರ್ಮದ ವಿಚಾರದಲ್ಲಿ ಸಿಎಂಗೆ ಭ್ರಮನಿರಸನ ಗ್ಯಾರಂಟಿ: ಎಚ್‌ಡಿಕೆ

By Basavaraj Maralihalli
|
Google Oneindia Kannada News

ಹುಬ್ಬಳ್ಳಿ, ಜುಲೈ 23: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಲವೊಂದು ಜಾತಿ, ಧರ್ಮಗಳನ್ನು ಹಿಡಿತಕ್ಕೆ ತೆಗೆದುಕೊಳ್ಳುತ್ತೇವೆ ಎಂಬ ಭಾವನೆ ಇದೆ. ಆದರೆ, ಇದರಿಂದ ಅವರು ಭ್ರಮನಿರಸನಕ್ಕೆ ಒಳಗಾಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲಿ : ಹೊರಟ್ಟಿಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಸಿಗಲಿ : ಹೊರಟ್ಟಿ

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಖ್ಯಮಂತ್ರಿಗಳಾದವರು ಜಾತಿ, ಧರ್ಮಗಳ ಕುರಿತು ನೇರವಾಗಿ ತಮ್ಮ ಅಭಿಪ್ರಾಯ ಮಂಡಿಸಬಾರದು. ಆದರೆ, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಅವರು ಇದನ್ನ ಮೀರಿದ್ದಾರೆ. ವೀರಶೈವರಲ್ಲಿ ಎಲ್ಲರೂ ಶ್ರೀಮಂತರಿಲ್ಲ. ಬಹುತೇಕರು ಕೃಷಿಯನ್ನೇ ನಂಬಿಕೊಂಡಿದ್ದಾರೆ. ಅವರಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಮೊದಲು ಆದ್ಯತೆ ನೀಡಬೇಕು," ಎಂದು ಅವರು ಅಭಿಪ್ರಾಯಪಟ್ಟರು.

 Siddaramaiah cant take control over Lingayat religion – HD Kumaraswamy

"ಮಹದಾಯಿ ವಿಷಯವಾಗಿ ರಾಜ್ಯ ಸರ್ಕಾರ ಬರೆದ ಪತ್ರಕ್ಕೆ ಗೋವಾ ನೀರಾವರಿ ಸಚಿವರ ಉತ್ತರ ಉದ್ಧಟತನದಿಂದ ಕೂಡಿದೆ. ಇದು ಅವರ ರೈತಪರ ಕಾಳಜಿಯನ್ನು ತೋರಿಸುತ್ತದೆ. ಬಿಜೆಪಿ ನಾಯಕರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮನವೊಲಿಸಿ ಮಹದಾಯಿ ವಿಷಯವನ್ನು ಮಾತುಕತೆ ಮೂಲಕ ಪರಿಹರಿಸಲು ಅವಕಾಶವಿದೆ. ಈ ಅವಕಾಶವನ್ನು ಅವರು ಸದುಪಯೋಗಪಡಿಸಿಕೊಳ್ಳಬೇಕು," ಎಂದು ಸಲಹೆ ನೀಡಿದರು.

ಚುನಾವಣಾ ಕಾಲದಲ್ಲಿ ಏನಿದು ಲಿಂಗಾಯಿತ ಸಮುದಾಯ ಇಬ್ಬಾಗದ ಕೂಗು?ಚುನಾವಣಾ ಕಾಲದಲ್ಲಿ ಏನಿದು ಲಿಂಗಾಯಿತ ಸಮುದಾಯ ಇಬ್ಬಾಗದ ಕೂಗು?

ಅಲ್ಲದೆ ದೇವೆಗೌಡರ ಕುಟುಂಬದಲ್ಲಿ ರೇವಣ್ಣ ನಾನು ಹೊರತುಪಡಿಸಿ ಯಾರೂ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

English summary
“Chief Minister Siddaramaiah thought that he will take control on some caste and religions. But that is not possible,” said JDS president and former chief minister HD Kumaraswamy here in Hubballi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X