ಮತ್ತೊಮ್ಮೆ ಸಿದ್ದರಾಮಯ್ಯ ಕೂಗು : ಮೌನ ಮುರಿದ ಮಾಜಿ ಸಿಎಂ!
Recommended Video
ಹುಬ್ಬಳ್ಳಿ, ಮೇ 08 : 'ಈಗ ಸಿಎಂ ಕುರ್ಚಿ ಖಾಲಿ ಇಲ್ಲವಲ್ಲ, ಅಲ್ಲಿ ಕುಮಾರಸ್ವಾಮಿ ಇದ್ದಾರೆ. ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಮ್ಮ ಶಾಸಕರು ಅಭಿಯಾನದಿಂದ ಹೇಳುತ್ತಾರೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬುಧವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಖು ಎಂದು ಕಾಂಗ್ರೆಸ್ ಶಾಸಕರು ನೀಡಿದ ಹೇಳಿಕೆ ಬಗ್ಗೆ ಮೌನ ಮುರಿದು ಮಾತನಾಡಿದರು.
ಗೃಹ ಸಚಿವ ಎಂ.ಬಿ.ಪಾಟೀಲ್, ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್, ಸಚಿವ ಪರಮೇಶ್ವರ ನಾಯ್ಕ್ ಸೇರಿದಂತೆ ಹಲವು ಶಾಸಕರು ಮತ್ತೊಮ್ಮೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆಗಳನ್ನು ನೀಡಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರು ನೀಡಿದ ಹೇಳಿಕೆಗಳ ಬಗ್ಗೆ ಬಿಸಿ-ಬಿಸಿ ಚರ್ಚೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಮಾಧ್ಯಮಗಳಿಂದ ದೂರವಿದ್ದ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಈ ಬಗ್ಗೆ ಪ್ರತಿಕ್ರಿಯೆ ನೀಡಿದರು...

ಅಭಿಮಾನದಿಂದ ಹೇಳುತ್ತಾರೆ?
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ನಮ್ಮ ಶಾಸಕರು ಅಭಿಮಾನದಿಂದ ಮತ್ತೆ ಸಿಎಂ ಆಗುವಂತೆ ಅವರ ಅಭಿಪ್ರಾಯ ಹೇಳುತ್ತಾರೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕುಮಾರಸ್ವಾಮಿ ಪರ ಬ್ಯಾಟಿಂಗ್
'ಈಗ ಸಿಎಂ ಕುರ್ಚಿ ಖಾಲಿ ಇಲ್ಲವಲ್ಲ. ಅಲ್ಲಿ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರ ಅಧಿಕಾರಾವಧಿಯಲ್ಲಿ ಮೂರು ಜನ ಸಿಎಂ ಆಗಿದ್ದರು. ಆರು ಜನ ಸಚಿವರು ಜೈಲಿಗೆ ಹೋಗಿದ್ದರು' ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಅವರು, 'ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಧ್ರುವೀಕರಣವಾಗಲಿದೆ. ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾದರೆ ಒಳ್ಳೆಯದು' ಎಂದು ಹೇಳಿದ್ದರು.

ಸಿದ್ದರಾಮಯ್ಯ ಅವರಿಗೆ ಅರ್ಹತೆ ಇದೆ
ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, 'ಇನ್ನೊಂದು ಬಾರಿ ಮುಖ್ಯಮಂತ್ರಿಯಾಗುವ ಅರ್ಹತೆ ಸಿದ್ದರಾಮಯ್ಯ ಅವರಿಗೆ ಇದೆ. ಅವರು ಬಡವರ ಪರ ಉತ್ತಮ ಕೆಲಸ ಮಾಡಿದವರು. ಇನ್ನೊಂದು ಅವಧಿಗೆ ಮುಖ್ಯಮಂತ್ರಿ ಆಗುವುದಾದದರೆ ನಾನು ಕಾಯುತ್ತೇನೆ' ಎಂದು ಹೇಳಿದ್ದರು.












Click it and Unblock the Notifications