Get Updates
Get notified of breaking news, exclusive insights, and must-see stories!

ಈಶ್ವರಪ್ಪಗೆ ತಲೆ ಕೆಟ್ಟಿದೆ ಅನ್ಸತ್ತೆ: ಎಚ್‌.ವಿಶ್ವನಾಥ್‌ ಹೀಗೆ ಗರಂ ಆಗಿದ್ದೇಕೆ?, ಇಲ್ಲಿದೆ ವಿವರ

ಹುಬ್ಬಳ್ಳಿ, ಸೆಪ್ಟೆಂಬರ್‌, 05: ಕೆ.ಎಸ್‌.ಈಶ್ವರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಟರಿ ಮೂಲಕ ಮುಖ್ಯಮಂತ್ರಿ ಆಗಿದ್ದವರು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಎಚ್‌.ವಿಶ್ವನಾಥ್‌, ಭಾರತೀಯ ಜನತಾ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಅವರಿಗೆ ತೆಲೆ ಕೆಟ್ಟಿದೆಯಾ ಅಥವಾ ಏನಾಗಿದೆ ಅಂತಾ ತಿಳಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸ್ಪಷ್ಟವಾದ ಬಹುಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ. ಜನರ ನಿರ್ಣಯದ ಅನ್ವಯ ಅವರು ಮುಖ್ಯಮಂತ್ರಿ ಆವದವರು. ಆದರೆ ಭಾರತೀಯ ಜನತಾ ಪಕ್ಷದವರಿಗೆ ಏನಾಗಿದೆ ಗೊತಿಲ್ಲ ಎಂದು ವಾಗ್ದಾಳಿ ನಡೆಸಿದರು.

Siddaramaiah is the CM on peoples decision: H.Vishwanath says to K.S.Eshwarappa

ಇನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್‌.ವಿಶ್ವನಾಥ್ ಹೇಳಿದರು.

ಮೈಸೂರಿನಿಂದ ಲೋಕಸಭೆಗೆ ಸ್ಪರ್ಧಿಸುವಿರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್‌ನಿಂದ ಸಂಸದನಾಗಿದ್ದೇನೆ. 40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ರಾಜಕೀಯ ಜೀವನದ ಅತಿ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿದ್ದೆ. ಜೆಡಿಎಸ್‌ ಪಕ್ಷದ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ನನ್ನ ಬಾವುಟ ಬದಲಾಗುತ್ತದೆ. ಆದರೆ, ಅಜೆಂಡಾ ಬದಲಾಗುವುದಿಲ್ಲ. ಯಾವುದೋ ಗಳಿಗೆಯಲ್ಲಿ ಕಾಂಗ್ರೆಸ್ ಬಿಟ್ಟಿದ್ದೆ. ಈಗ ಮತ್ತೊಮ್ಮೆ ಏಕೆ ಕಾಂಗ್ರೆಸ್‌ನಿಂದ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದರು.

Siddaramaiah is the CM on peoples decision: H.Vishwanath says to K.S.Eshwarappa

ಅಕ್ಟೋಬರ್ 3ರಂದು ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಕುರುಬ ಸಮಾವೇಶ ನಡೆಯಲಿದೆ ಎಂದ ಅವರು, ರಾಷ್ಟ್ರದಲ್ಲಿ 12 ಕೋಟಿ ಜನ ಕುರುಬ ಸಮಾಜದಲ್ಲಿದ್ದಾರೆ. ದೇಶದ ಎಲ್ಲ ರಾಜ್ಯದಲ್ಲಿ ಇರುವ ಕುರುಬ ಸಮಾಜದವರನ್ನು ಒಗ್ಗೂಡಿಸುವ ಕಾರ್ಯವನ್ನು 'ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್' ಸಂಘಟನೆಯಿಂದ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಷ್ಟ್ರಮಟ್ಟದ 9ನೇ ಸಮ್ಮೇಳನವನ್ನು ಬೆಳಗಾವಿಯಲ್ಲಿ ನಡೆಸಲಾಗುತ್ತಿದೆ. ದೇಶದ ಎಲ್ಲ ರಾಜ್ಯದ ಕುರುಬ ಸಮಾಜದ ಶಾಸಕರು, ಸಂಸದರು ಈ ಸಮಾವೇಶಕ್ಕೆ ಬರಲಿದ್ದಾರೆ. ಅಕ್ಟೋಬರ್ 2, 3ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸಮಾವೇಶ ನಡೆಯಲಿದೆ ಎಂದು ವಿಶ್ವನಾಥ್ ಮಾಹಿತಿ ನೀಡಿದರು.

ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ದೇಶದ ಎಲ್ಲ ರಾಜ್ಯದಿಂದ ಸಮಾಜದ ಬಾಂಧವರು ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇದೇ ಸಂದರ್ಭದಲ್ಲಿ ಕುರುಬ ಸಮಾಜದಿಂದ ಸನ್ಮಾನಿಸಲಾಗುತ್ತಿದೆ. ಸಮಾವೇಶಕ್ಕೆ 1 ಲಕ್ಷ ಜನರು ಸೇರಲಿದ್ದಾರೆ ಎಂದು ಕುರುಬ ಸಮಾಜದ ಮತ್ತೋರ್ವ ನಾಯಕ ಎಚ್.ಎಂ.ರೇವಣ್ಣ ಹೇಳಿದರು.

ಪಕ್ಷಾತೀತವಾಗಿ ರಾಷ್ಟ್ರಮಟ್ಟದ ಕುರುಬ ಸಮಾಜದ ಸಮಾವೇಶ ನಡೆಸುತ್ತಿದ್ದೇವೆ. ಎಲ್ಲ ಸಮುದಾಯದ ನಾಯಕರು ನಮಗೆ ಸಹಕಾರ ಕೊಡುತ್ತಿದ್ದಾರೆ. ವಿಶೇಷವಾಗಿ ಗೋವಾ, ಮಹಾರಾಷ್ಟ್ರ ಸಮಾಜದ ಮುಖಂಡರು ಸಾಥ್ ಕೊಡುತ್ತಿದ್ದಾರೆ. ನಾವು ಈ ದೇಶದ ಮೂಲನಿವಾಸಿಗಳು. ಶೆಫರ್ಡ್ಸ ಇಂಡಿಯನ್ ಇಂಟರ್‌ನ್ಯಾಷನಲ್ ಮೂಲಕ ನಮ್ಮ ಸಮಾಜ ರಾಜಕೀಯವಾಗಿ, ಶೈಕ್ಷಣಿಕ ವಾಗಿ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ಎಂದರು.

ಕ್ರಾಂತಿಯ ನೆಲವಾದ ಬೆಳಗಾವಿ ಜಿಲ್ಲೆಯಲ್ಲಿ ನಾವು ಈ ರಾಷ್ಟ್ರೀಯ ಕುರುಬ ಸಮಾವೇಶ ಮಾಡುತ್ತಿದ್ದೇವೆ. ಈ ಸಮಾವೇಶಕ್ಕೂ ಲೋಕಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ವಿಶ್ವನಾಥ್ ಸ್ಪಷ್ಟನೆ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+