'ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಕ್ಕೆ ಸಿದ್ದರಾಮಯ್ಯ ಕುಮ್ಮಕ್ಕು'

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ನವೆಂಬರ್ 10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರೇರಣೆಯಿಂದಲೇ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ನಡೆದಿದೆ ಎಂದು ರಂಭಾಪುರಿ ಶ್ರೀಗಳು ಗಂಭೀರ ಆರೋಪ ಮಾಡಿದ್ದಾರೆ.

ಸ್ವತಂತ್ರ ಲಿಂಗಾಯತ ಧರ್ಮ : ಮಂತ್ರಿಗಳಿಗೆ ನೋಟೀಸ್

ಇಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಐದಾರು ತಿಂಗಳವರೆಗೆ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮುಂದುವರಿಯಲಿದೆ. ವೀರಶೈವ ಲಿಂಗಾಯತರಿಗೆ ಮುಖ್ಯಮಂತ್ರಿ ಆದ್ಯತೆ ನೀಡಬೇಕು. ಅವರ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಧರ್ಮ ಒಡೆಯುವ ಕೆಲಸವನ್ನು ಸಿದ್ದರಾಮಯ್ಯ ಮಾಡಬಾರದು ಎಂದಿದ್ದಾರೆ.

Siddaramaiah provoking Lingayat separate religion movement

ಕೇಂದ್ರಕ್ಕೆ ವೀರಶೈವ ಲಿಂಗಾಯತ ಧರ್ಮ ಒಂದೇ ಎಂಬ ಶಿಫಾರಸು ಕಳುಹಿಸಿಕೊಡಬೇಕು. ಇಲ್ಲವಾದರೆ ಜನತೆಯೇ ಅವರಿಗೆ ಉತ್ತರ ನೀಡುತ್ತಾರೆ. ಸ್ವತಂತ್ರ ಧರ್ಮಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲವೇ ಇಲ್ಲ. ಕೆಲವು ತಾತ್ವಿಕವಿಲ್ಲದ ಸ್ವಾಮಿಗಳು ಹಾಗೂ ಕೆಲವು ರಾಜಕಾರಣಿಗಳು ಸಮಾಜದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಸವಣ್ಣನವರ ಹೆಸರಿಗೆ ಕಳಂಕ ತರುವ ರೀತಿಯಲ್ಲಿ ಕೆಲವು ಸ್ವಾಮಿಗಳು ನಡೆದುಕೊಳ್ಳುತ್ತಿದ್ದಾರೆ. ಹುಬ್ಬಳ್ಳಿ ಸಮಾವೇಶದಲ್ಲಿ ಕಾವಿ ಹಾಕಿಕೊಂಡವರು ಸ್ವಾಮೀಜಿಗಳ ವಲಯಕ್ಕೆ ಕಳಂಕದ ಮಾತುಗಳನ್ನಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chief minister Siddaramaiah provoking Lingayat separate religion movement, alleged by Rambhapuri seer in Hubballi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ