ಮತ್ತೆ ಅಹಿಂದ ಸಮಾವೇಶದ ಕುರಿತು ಸಿದ್ದರಾಮಯ್ಯರ ಮಹತ್ವದ ಹೇಳಿಕೆ
ಹುಬ್ಬಳ್ಳಿ, ಫೆಬ್ರವರಿ 11: ತಾವು ಸದ್ಯ ಯಾವುದೇ ಅಹಿಂದ ಸಮಾವೇಶ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದುಳಿದವರ ಪರವಾಗಿದ್ದು, ಹೋರಾಟದ ಅವಶ್ಯಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ವಕ್ಷೇತ್ರ ಬಾದಾಮಿಗೆ ಹೋಗುವ ವೇಳೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕುರುಬರಿಗೆ ಎಸ್ಟಿ ಮೀಸಲು ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಲಶಾಸ್ತ್ರ ಅಧ್ಯಯನದ ವರದಿ ಬಂದಿಲ್ಲ. ವರದಿ ಬರುವ ಮುನ್ನವೇ ಹೋರಾಟ ಬೇಡ ಅಂದಿದ್ದೆ ಎಂದು ತಿಳಿಸಿದರು.
ನಾನು ಸಿಎಂ ಆಗಿದ್ದ ವೇಳೆ ನಾಲ್ಕು ಜಿಲ್ಲೆಗಳಲ್ಲಿ ಕುರುಬರನ್ನು ಎಸ್ಟಿಗೆ ಸೇರಿಸಬೇಕು ಎಂದು ಆದೇಶ ಮಾಡಿದ್ದೆ. ಎಸ್ಟಿ ಮೀಸಲು ಹೋರಾಟದಲ್ಲಿ ನಾನು ರಾಜಕೀಯ ಮಾಡಲ್ಲ. ಇದು ಆರ್ಎಸ್ಎಸ್ ಪ್ರೇರಿತ ಹೋರಾಟವಾಗಿದ್ದು, ಈಶ್ವರಪ್ಪರನ್ನು ಆರ್ಎಸ್ಎಸ್ನವರು ಎತ್ತಿಕಟ್ಟಿ ಹೋರಾಟ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಯಾವ ಸಾಧನೆ ಮಾಡಿಲ್ಲ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನಾನು ಸಿಎಂ ಆಗಿದ್ದಾಗ ಏನು ಅಭಿವೃದ್ಧಿ ಮಾಡಿದ್ದೇನೆಂದು ರಾಜ್ಯದ ಜನರಿಗೆ ಗೊತ್ತಿದೆ. ಈಶ್ವರಪ್ಪ ಯಾರು? ನನಗೆ ಈಶ್ವರಪ್ಪ ಸರ್ಟಿಫಿಕೇಟ್ ಬೇಕಾಗಿಲ್ಲ. ಐ ಡೋಂಟ್ ಕೇರ್ ಈಶ್ವರಪ್ಪ ಎಂದು ತಿರುಗೇಟು ನೀಡಿದರು.
ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲ್ಲ ಅನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ಜೆಡಿಎಎಸ್ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಜೆಡಿಎಸ್ನವರು ಬಿಜೆಪಿಗೆ ಸಹಾಯ ಮಾಡಲು ಹೊರಟ್ಟಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಕೊರೆತೆಯಿಲ್ಲ. ಚುನಾವಣೆ ಘೋಷಣೆಯಾದ ಕೂಡಲೇ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದರು.












Click it and Unblock the Notifications