• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಾಲು ಕುಡಿದವರೇ ಬದುಕಲ್ಲ, ಇನ್ನು ವಿಷ ಕುಡಿದೋರು ಬದುಕ್ತಾರಾ: ಸಿದ್ದರಾಮಯ್ಯ

|

ಹುಬ್ಬಳ್ಳಿ, ಆಗಸ್ಟ್ 26: ಹಾಲು ಕುಡಿದವರೇ ಬದುಕುವುದಿಲ್ಲ ಇನ್ನು ವಿಷ ಕುಡಿದವರು ಬದುಕುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಸೋಮವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಶಾಸಕರನ್ನೇ ಇಟ್ಟುಕೊಂಡು ಸರ್ಕಾರ ನಡೆಸಲು ಸಾಧ್ಯವಿಲ್ಲ ಅಂತಹ ಸಮಯದಲ್ಲಿ ಅತೃಪ್ತರನ್ನಿಟ್ಟುಕೊಂಡು ಪಕ್ಷವನ್ನು ನಡೆಸಲು ಸಾಧ್ಯವಿದೆಯಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

   ಅಧಿಕಾರ ನಡೆಸಲು ಬಾರದೇ ಇರುವವರು ಕುಮಾರಸ್ವಾಮಿ ತರ ಮಾತಾಡ್ತಾರೆ..? | siddaramaiah

   ಅಧಿಕಾರ ನಡೆಸಲು ಬಾರದವರು ಕುಮಾರಸ್ವಾಮಿ ಥರ ಮಾತನಾಡುತ್ತಾರೆ: ಸಿದ್ದರಾಮಯ್ಯ

   ಸಿಎಂ ಬಿಎಸ್‍ವೈ ಸರ್ಕಾರ ಬಹಳ ದಿನ ಇರುತ್ತೆ ಎಂದು ಯಾರಿಗೂ ನಂಬಿಕೆ ಇಲ್ಲ. ರೆಬಲ್ಸ್ ಗಳನ್ನಿಟ್ಟುಕೊಂಡು ಸರ್ಕಾರ ಮುನ್ನೆಡೆಸೋಕ್ಕಾಗುತ್ತಾ. ಹಾಲು ಕುಡಿದ ಮಕ್ಕಳೆ ಬದುಕಲ್ಲ. ಇನ್ನು ವಿಷ ಕುಡಿದವರು ಬದಕ್ತಾರಾ ಎಂದು ಹೇಳಿದರು.

   ಬಿಜೆಪಿ ಸರ್ಕಾರ ನೆರೆ ಪೀಡಿತ ಜಿಲ್ಲೆಗಳಲ್ಲಿರಬೇಕಿತ್ತು

   ಬಿಜೆಪಿ ಸರ್ಕಾರ ನೆರೆ ಪೀಡಿತ ಜಿಲ್ಲೆಗಳಲ್ಲಿರಬೇಕಿತ್ತು

   ಬಿಜೆಪಿ ಸರ್ಕಾರದ ಸಚಿವರು ನೆರೆಪಿಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದರೆ ದೆಹಲಿ ಟು ಬೆಂಗಳೂರು ಮಧ್ಯೆ ಪ್ರವಾಸ ಮಾಡುತ್ತಿದ್ದಾರೆ. ದೊಡ್ಡ ಪ್ರಮಾಣದಲ್ಲಿ ನೆರೆ ಹಾನಿಯಾದರೂ ಕೇಂದ್ರದಿಂದ ಸೂಕ್ತ ಪರಿಹಾರ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಾಮ ಮಾರ್ಗದಿಂದ ಸರ್ಕಾರ ರಚನೆ ಮಾಡಿದ್ದಾರೆ. ಈಗಲಾದರೂ ಬಿಜೆಪಿ ನಾಯಕರು ಜನರ ಕಡೆ ನೋಡಬೇಕು ಎಂದು ಬಿಜೆಪಿ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಆದರೆ ಯಡಿಯೂರಪ್ಪ ಅವರು ಕೂಡ ತಮ್ಮ ಸರ್ಕಾರವನ್ನು ಉಳಿಸಿಕೊಳ್ಳುವ ಪ್ರಯತ್ನವನ್ನೇ ಮಾಡುತ್ತಿದ್ದಾರೆ ಎಂದರು.

   ಅತೃಪ್ತ ಶಾಸಕರನ್ನಿಟ್ಟುಕೊಂಡು ಸರ್ಕಾರ ಕಟ್ಟೋಕಾಗುತ್ತಾ?

   ಅತೃಪ್ತ ಶಾಸಕರನ್ನಿಟ್ಟುಕೊಂಡು ಸರ್ಕಾರ ಕಟ್ಟೋಕಾಗುತ್ತಾ?

   ಪಕ್ಷದ ಶಾಸಕರನ್ನಿಟ್ಟುಕೊಂಡು ಸರ್ಕಾರ ರಚಿಸಿದಾಗಲೇ ಸರ್ಕಾರ ಉಳಿಯಲಿಲ್ಲ ಇನ್ನು ಅತೃಪ್ತ ಶಾಸಕರ ಜೊತೆಗೆ ಸರ್ಕಾರ ನಿರ್ಮಾಣ ಮಾಡಿದರೆ ಉಳಿದೀತೇ? ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

   ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಮನ್ಸ್ ಜಾರಿ, ಏನಿದು ಪ್ರಕರಣ?

   ದೇವೇಗೌಡರ ಕುಟುಂಬ ಮಾಡಿದ ಆರೋಪಕ್ಕೆ ತಕ್ಕ ಉತ್ತರ

   ದೇವೇಗೌಡರ ಕುಟುಂಬ ಮಾಡಿದ ಆರೋಪಕ್ಕೆ ತಕ್ಕ ಉತ್ತರ

   ದೇವೇಗೌಡರ ಕುಟುಂಬದವರು ಮಾಡಿದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಬೈರತಿ ಬಸವರಾಜು ಮತ್ತು ಸೋಮಶೇಖರ್‍ ರನ್ನು ನಾನು ಮುಂಬೈಗೆ ಕಳುಸಿದ್ದೇನೆ ಎಂದು ಅವರು ಹೇಳುತ್ತಾರೆ. ಹಾಗಾದರೆ ವಿಶ್ವನಾಥ್, ನಾರಾಯಣಗೌಡ ಮತ್ತು ಗೋಪಾಲಯ್ಯರನ್ನು ಯಾರು ಕಳುಹಿಸಿದ್ದು, ಅವರು ಜೆಡಿಎಸ್‍ನವರು ಅಲ್ಲವೆ. ಹೆಚ್‍ಡಿಕೆ ಮತ್ತು ಹೆಚ್‍ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಆರೋಪಿಸಿದರು.

   ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಬಗ್ಗೆ ಗೊತ್ತಿಲ್ಲ

   ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಬಗ್ಗೆ ಗೊತ್ತಿಲ್ಲ

   ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಕೇಳಿದಾಗ, ಆ ಬಗ್ಗೆ ನನಗೇನು ಗೊತ್ತಿಲ್ಲ. ಇವತ್ತು ಗುಲಾಮ್ ನಬಿ ಅಜಾದ್ ಬರುತ್ತಾರೆ ಎಂದು ಕೇಳಿದ್ದೇನೆ. ಆದರೆ ನಾನು ನೆರೆ ಪೀಡಿತ ಪ್ರದೇಶಗಳ ಪ್ರವಾಸದಲ್ಲಿದ್ದೇನೆ ಎಂದು ಹೇಳಿದರು.

   ದೇವೇಗೌಡರು ಸ್ವಜಾತಿಯವರನ್ನೇ ಬೆಳೆಸುವುದಿಲ್ಲ: ಸಿದ್ದರಾಮಯ್ಯ

   English summary
   Former chief minister Siddaramaiah loses his cool shouts at Cheif minister Yeddyurappa about Present situation of the government.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X