ರಾಜ್ಯದ ಎಲ್ಲ ಜಾತಿಯ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌

Posted By:
Subscribe to Oneindia Kannada

ಹುಬ್ಬಳ್ಳಿ, ಆಗಸ್ಟ್ 14 : ಎಲ್ಲ ಜಾತಿಯ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ನೀಡುವ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಲಿದ್ದಾರೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸದಾನಂದ ಡಂಗನವರ ತಿಳಿಸಿದ್ದಾರೆ.

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಲೆಕ್ಕಪರಿಶೋಧಕರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು ಅವರು, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಉಚಿತ ಬಸ್‌ ಪಾಸ್‌ ಸೌಲಭ್ಯವನ್ನು ರಾಜ್ಯದ ಇತರ ಎಲ್ಲ ಜಾತಿಯ ವಿದ್ಯಾರ್ಥಿಗಳಿಗೆ ವಿಸ್ತರಿಸುವ ಉದ್ದೇಶ ಇದೆ. ಇದನ್ನು ಮುಖ್ಯಮಂತ್ರಿ ಪ್ರಕಟಿಸಲಿದ್ದಾರೆ ಎಂದು ಹೇಳಿದರು.

Siddaramaiah will soon announce a free bus pass for all Caste of students
VTU ( Visvesvaraya Tech University ) Decided To Introduce Kannada as compulsory subject

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ಎಸ್ಸಿ ಮತ್ತು ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ಎಂದು ಘೋಷಣೆ ಮಾಡಿದ್ದರು. ಇದಾದ ಬಳಿಕ ಇತರೆ ಸಮುದಾಯದ ವಿದ್ಯಾರ್ಥಿಗಳು ತಮಗೂ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka chief minister Siddaramaiah will soon announce a free bus pass for all Caste of students, said North Western Karnataka Road Transport Association Chairman Sadanand Danganavar in Hubballi.
Please Wait while comments are loading...