Get Updates
Get notified of breaking news, exclusive insights, and must-see stories!

South Western Railway: ಜುಲೈನಿಂದ ಹಲವು ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆಯ ಮಾಹಿತಿ

ಹುಬ್ಬಳ್ಳಿ, ಜೂನ್ 25: ನೈಋತ್ಯ ರೈಲ್ವೆ ವಲಯ (South Western Railway) ವ್ಯಾಪ್ತಿಯಲ್ಲಿ ಕೆಲವು ವಿವಿಧ ರೈಲುಗಳ ಸಂಚಾರ ರದ್ದಾಗಿವೆ. ಕೆಲವು ರೈಲುಗಳು ಭಾಗಶಃ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಜೊತೆಗೆ ಒಂದಷ್ಟು ರೈಲುಗಳ ನಿಯಂತ್ರಣ ಮತ್ತು ರೈಲುಗಳ ಮಾರ್ಗಗಳ ಬದಲಾವಣ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಮಾಹಿತಿ ನೀಡಿದ್ದಾರೆ.

ಕೆಂಗೇರಿ-ಹೆಜ್ಜಾಲ ನಿಲ್ದಾಣಗಳ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ (ರೈಲ್ವೆ ಗೇಟ್) ನಂ. 15 ಮತ್ತು ಕೆಎಸ್‌ಆರ್ ಬೆಂಗಳೂರು-ಬೆಂಗಳೂರು ಕ್ಯಾಂಟ್ ನಿಲ್ದಾಣಗಳ ನಡುವಿನ ಸೇತುವೆ ಸಂಖ್ಯೆ 855ರಲ್ಲಿ ತಾತ್ಕಾಲಿಕ ಗರ್ಡರ್‌ಗಳನ್ನು ಅಳವಡಿಸುವ ಮತ್ತು ತೆರವುಗೊಳಿಸುವ ಕಾರ್ಯ ನಡೆಯಲಿದೆ.

South Western Railway Announces Train Cancellations and Route Changes in July know more

ಈ ಕಾರಣದಿಂದ ರೈಲ್ವೆ ಲೈನ್ ಬ್ಲಾಕ್ / ಪವರ್ ಬ್ಲಾಕ್ ಇರುವುದರಿಂದ ಈ ಕೆಳಗಿನ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಹಾಗಾದರೆ ಯಾವ ದಿನಾಂಕ, ಸಮಯದಲ್ಲಿ ರೈಲ್ವೆ ರದ್ದಾಗಲಿವೆ ಎಂಬ ಮಾಹಿತಿ ಇಲ್ಲಿದೆ.

ಜುಲೈನಿಂದ ವಿವಿಧ ರೈಲುಗಳ ಸಂಚಾರ ರದ್ದು

* ಜುಲೈ 1, 2, 8 ಮತ್ತು 9, 2024 ರಂದು (ಸಂಖ್ಯೆ 16021) ಡಾ. ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ದೈನಂದಿನ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದಾಗಲಿದೆ.

* ಜುಲೈ 2, 3, 9 ಮತ್ತು 10, 2024 ರಂದು (ಸಂಖ್ಯೆ 16022) ಮೈಸೂರು-ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 20623/20624 ಮೈಸೂರು-ಕೆಎಸ್‌ಆರ್ ಬೆಂಗಳೂರು-ಮೈಸೂರು ಮಾಲ್ಗುಡಿ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ರದ್ದಗೊಳಿಸಲಾಗಿದೆ.

South Western Railway Announces Train Cancellations and Route Changes in July know more

* ಜುಲೈ 1 ಮತ್ತು 8, 2024 ರಂದು (ಸಂಖ್ಯೆ 16219) ಚಾಮರಾಜನಗರ-ತಿರುಪತಿ ದೈನಂದಿನ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದಗೊಳಿಸಲಾಗಿದೆ.

* ಜುಲೈ 2 ಮತ್ತು 9, 2024 ರಂದು (ಸಂಖ್ಯೆ 16203/16204) ಡಾ.ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ತಿರುಪತಿ-ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಎಕ್ಸ್‌ಪ್ರೆಸ್, ತಿರುಪತಿ-ಚಾಮರಾಜನಗರ ದೈನಂದಿನ ಎಕ್ಸ್‌ಪ್ರೆಸ್ (ಸಂಖ್ಯೆ 16220) ರೈಲು, ಅರಸೀಕೆರೆ-ಮೈಸೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ (ಸಂಖ್ಯೆ 06267) ರೈಲು, ಮೈಸೂರು-ಎಸ್‌ಎಂವಿಟಿ ಬೆಂಗಳೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ (ಸಂಖ್ಯೆ 06269) ರೈಲುಗಳು ರದ್ದಾಗಿವೆ.

ಇದರೊಂದಿಗೆ ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್ (ಸಂಖ್ಯೆ 06560), ಎಸ್‌ಎಂವಿಟಿ ಬೆಂಗಳೂರು-ಮೈಸೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ (ಸಂಖ್ಯೆ 06270) ಹಾಗೂ ಕೆಎಸ್‌ಆರ್ ಬೆಂಗಳೂರು-ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ಸಂಖ್ಯೆ 12658) ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

* ಜುಲೈ 3 ಮತ್ತು 10, 2024 ರಂದು ಮೈಸೂರು-ಅರಸೀಕೆರೆ ದೈನಂದಿನ ಪ್ಯಾಸೆಂಜರ್ ಸ್ಪೆಷಲ್ (ಸಂಖ್ಯೆ 06268), ಕೆಎಸ್‌ಆರ್ ಬೆಂಗಳೂರು-ಮೈಸೂರು ಮೆಮು ಸ್ಪೆಷಲ್ (ಸಂಖ್ಯೆ 06559), ಕೆಎಸ್‌ಆರ್ ಬೆಂಗಳೂರು-ಚನ್ನಪಟ್ಟಣ ಮೆಮು ಸ್ಪೆಷಲ್ (ಸಂಖ್ಯೆ 01763), ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ಸಂಖ್ಯೆ 12657) ರೈಲುಗಳ ಸಂಚಾರ ರದ್ದಾಗಲಿವೆ.

ಭಾಗಶಃ ರದ್ದಾದ ರೈಲುಗಳ ವಿವರ

* ಜುಲೈ 2 ಮತ್ತು 9 ರಂದು ಮೈಸೂರು ನಿಲ್ದಾಣದಿಂದ ಹೊರಡುವ (ಸಂಖ್ಯೆ 06526) ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್ ರೈಲು ಅನ್ನು ಚನ್ನಪಟ್ಟಣ - ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.

* ಜುಲೈ 2 ಮತ್ತು 9 ರಂದು ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಡುವ (ಸಂಖ್ಯೆ 12657) ಡಾ ಎಮ್‌ಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು ದೈನಂದಿನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು ವೈಟ್‌ಫೀಲ್ಡ್ - ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತದೆ.

* ಜುಲೈ 2 ಮತ್ತು 9 ರಂದು ಹಜೂರ್ ಸಾಹಿಬ್ ನಾಂದೇಡ್ ನಿಲ್ದಾಣದಿಂದ ಹೊರಡುವ (ಸಂಖ್ಯೆ 16594) ಹಜೂರ್ ಸಾಹಿಬ್ ನಾಂದೇಡ್-ಕೆಎಸ್‌ಆರ್ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್‌ ರೈಲು ಯಲಹಂಕ-ಕೆಎಸ್‌ಆರ್ ಬೆಂಗಳೂರುನಿಲ್ದಾಣಗಳ ನಡುವಿನ ಸಂಚಾರ ಭಾಗಶಃ ರದ್ದುಗೊಳ್ಳಲಿದೆ.

* ಜುಲೈ 2 ಮತ್ತು 9 ರಂದು ಹೊಸಪೇಟೆ ನಿಲ್ದಾಣದಿಂದ ಹೊರಡುವ (ಸಂಖ್ಯೆ 06244) ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ರೈಲು ಯಶವಂತಪುರ-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.

* ಜುಲೈ 2 ಮತ್ತು 9 ರಂದು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಡುವ (ಸಂಖ್ಯೆ17392) ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್‌ ರೈಲು ಯಶವಂತಪುರ-ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಪಡಿಸಲಾಗಿದೆ.

* ಜುಲೈ 2 ಮತ್ತು 9 ರಂದು ಬಂಗಾರಪೇಟೆ ನಿಲ್ದಾಣದಿಂದ ಹೊರಡುವ (ಸಂಖ್ಯೆ 16521) ಬಂಗಾರಪೇಟೆ-ಕೆಎಸ್‌ಆರ್ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್‌ ರೈಲು ಬಯ್ಯಪ್ಪನಹಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ.

* ಜುಲೈ 3 ಮತ್ತು 10 ರಂದು (ಸಂಖ್ಯೆ 17391) ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಕೆಎಸ್‌ಆರ್ ಬೆಂಗಳೂರು - ಯಶವಂತಪುರ ನಡುವೆ ಭಾಗಶಃ ರದ್ದಗೊಂಡಿದೆ.

* ಜುಲೈ 3 ಮತ್ತು 10 ರಂದು (ಸಂಖ್ಯೆ 06243) ಕೆಎಸ್‌ಆರ್ ಬೆಂಗಳೂರು-ಹೊಸಪೇಟೆ ದೈನಂದಿನ ಪ್ಯಾಸೆಂಜರ್ ಸ್ಪೆಷಲ್ ರೈಲು ಕೆಎಸ್‌ಆರ್ ಬೆಂಗಳೂರು - ಯಶವಂತಪುರ ನಡುವೆ ಭಾಗಶಃ ರದ್ದುಪಡಿಸಲಾಗುತ್ತದೆ.

ನಿಯಂತ್ರಿಸಲಾಗುತ್ತಿರುವ ರೈಲುಗಳ ಮಾಹಿತಿ

1. ಜುಲೈ 2 ಮತ್ತು 9 ರಂದು ಮುಂಬೈಯಿಂದ ಹೊರಡುವ (ಸಂಖ್ಯೆ 11301) ಸಿಎಸ್ಎಂಟಿ ಮುಂಬೈ-ಕೆಎಸ್‌ಆರ್ ಬೆಂಗಳೂರು ಉದ್ಯಾನ್ ದೈನಂದಿನ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗ ಮಧ್ಯೆ 30 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.

2. ಜುಲೈ 2 ಮತ್ತು 9 ರಂದು ಮೈಲಾಡುತುರೈಯಿಂದ ಹೊರಡುವ (ಸಂಖ್ಯೆ 16231) ಮೈಲಾಡುತುರೈ-ಮೈಸೂರು ದೈನಂದಿನ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳವರೆಗೆ ನಿಯಂತ್ರಣಗೊಳ್ಳಲಿದೆ.

3. ಜುಲೈ 2 ಮತ್ತು 9 ರಂದು ಮುರುಡೇಶ್ವರ ನಿಲ್ದಾಣದಿಂದ ಹೊರಡುವ (ಸಂಖ್ಯೆ 16586) ಮುರುಡೇಶ್ವರ-ಎಸ್‌ಎಂವಿಟಿ ಬೆಂಗಳೂರು ದೈನಂದಿನ ಎಕ್ಸ್‌ಪ್ರೆಸ್‌ ರೈಲನ್ನು ಮಾರ್ಗ ಮಧ್ಯೆ 15 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ.

4. ಜುಲೈ 2 ಮತ್ತು 9 ರಂದು ತಾಳಗುಪ್ಪದಿಂದ ಪ್ರಾರಂಭವಾಗುವ (ಸಂಖ್ಯೆ 16228) ತಾಳಗುಪ್ಪ-ಮೈಸೂರು ದೈನಂದಿನ ಎಕ್ಸ್‌ಪ್ರೆಸ್‌ ರೈಲನ್ನು ನಾಯಂಡಹಳ್ಳಿ ನಿಲ್ದಾಣದಲ್ಲಿ 10 ನಿಮಿಷಗಳವರೆಗೆ ನಿಯಂತ್ರಿಸಲಾಗುತ್ತದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾರ್ಗ ಬದಲಾವಣೆಗೊಂಡ ರೈಲುಗಳ ವಿವರ

* ಜುಲೈ 2 ಮತ್ತು 9 ರಂದು (ಸಂಖ್ಯೆ 16593) ಕೆಎಸ್‌ಆರ್ ಬೆಂಗಳೂರು-ಹಜೂರ್ ಸಾಹಿಬ್ ನಾಂದೇಡ್ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಕೆಎಸ್‌ಆರ್ ಬೆಂಗಳೂರಿನಿಂದ 80 ನಿಮಿಷ ತಡವಾಗಿ ಪ್ರಾರಂಭವಾಗಲಿದೆ. ಈ ರೈಲು ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಯಲಹಂಕ ಮಾರ್ಗದ ಮೂಲಕ ಸಂಚರಿಸಲಿದೆ, ಹೀಗಾಗಿ ಬೆಂಗಳೂರಿನ ಕ್ಯಾನ್ಟೋನ್‌ಮೆಂಟ್‌ನಲ್ಲಿ ನಿಲುಗಡೆ ಇರುವುದಿಲ್ಲ.

* ಜುಲೈ 2 ಮತ್ತು 9 ರಂದು ಲೋಕಮಾನ್ಯ ತಿಲಕ್ ಟರ್ಮಿನಸ್ ದಿಂದ ಹೊರಡುವ (ಸಂಖ್ಯೆ 11013) ಲೋಕಮಾನ್ಯ ತಿಲಕ್ ಟರ್ಮಿನಸ್-ಕೊಯಮತ್ತೂರು ದೈನಂದಿನ ಎಕ್ಸ್‌ಪ್ರೆಸ್‌ ರೈಲು ಗೌರಿಬಿದನೂರು, ಬಯ್ಯಪ್ಪನಹಳ್ಳಿ, ಎಸ್‌ಎಂವಿಟಿ ಬೆಂಗಳೂರು, ಬಯ್ಯಪ್ಪನಹಳ್ಳಿ ಮತ್ತು ಹೊಸೂರು ಮಾರ್ಗದ ಮೂಲಕ ಸಂಚರಿಸಲಿದೆ.

ಹೀಗಾಗಿ ಬೆಂಗಳೂರು ಪೂರ್ವ, ಬೆಂಗಳೂರು ಕ್ಯಾನ್ಟೋನ್‌ಮೆಂಟ್ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. ಈ ರೈಲು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ಹೊಂದಿರಲಿದೆ ಎಂದು ರೈಲ್ವೆ ಅಧಿಕಾರಿ ಕನಮಡಿ ಅವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+