ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೈಋತ್ಯ ರೈಲ್ವೆಯಲ್ಲಿ ಶೀಘ್ರವೇ 2,500 ಹುದ್ದೆ ಭರ್ತಿ

By Gururaj
|
Google Oneindia Kannada News

ಹುಬ್ಬಳ್ಳಿ, ಜುಲೈ 04 : ನೈಋತ್ಯ ರೈಲ್ವೆ ಶೀಘ್ರದಲ್ಲಿಯೇ 2,500 'ಡಿ' ಗ್ರೂಪ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈಗಾಗಲೇ ರೈಲ್ವೆ ಇಲಾಖೆಯಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿದ್ದು, ನೇಮಕಾತಿ ಅಧಿಸೂಚನೆ ಶೀಘ್ರದಲ್ಲಿಯೇ ಪ್ರಕಟವಾಗುವ ನಿರೀಕ್ಷೆ ಇದೆ.

ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಅಶೋಕ್ ಗುಪ್ತಾ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಹುದ್ದೆಗಳನ್ನು ಭರ್ತಿ ಮಾಡಲು ಚಿಂತನೆ ನಡೆಸಿರುವ ಬಗ್ಗೆ ಮಾಹಿತಿ ನೀಡಲಾಯಿತು.

ಕೆಎಸ್ಆರ್‌ಟಿಸಿ 200 ಹುದ್ದೆ ನೇಮಕಾತಿ : ಅರ್ಜಿ ಸಲ್ಲಿಸುವುದು ಹೇಗೆ?ಕೆಎಸ್ಆರ್‌ಟಿಸಿ 200 ಹುದ್ದೆ ನೇಮಕಾತಿ : ಅರ್ಜಿ ಸಲ್ಲಿಸುವುದು ಹೇಗೆ?

ಧಾರವಾಡ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. 16 ಕೋಟಿ ವೆಚ್ಚದಲ್ಲಿ ನಿಲ್ದಾಣವನ್ನು ಅಭಿವೃದ್ಧಿ ಮಾಡಲು ಯೋಜನೆ ರೂಪಿಸಲಾಗಿದೆ. ಮೊದಲ ಹಂತದಲ್ಲಿ ನಿಲ್ದಾಣದ ಕಟ್ಟಡವನ್ನು ನಿರ್ಮಿಸಲಾಗುತ್ತದೆ.

South Western Railway to fill 2500 D group post

ಎರಡನೇ ಹಂತದಲ್ಲಿ ಧಾರವಾಡ ರೈಲ್ವೆ ನಿಲ್ದಾಣದ ಫ್ಲಾಟ್‌ ಫಾರ್ಮ್‌, ಓವರ್ ಬ್ರಿಡ್ಜ್, ಅಂಡರ್ ಬ್ರಿಡ್ಜ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ. ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಶ್ರೀಘ್ರದಲ್ಲಿಯೇ ಆರಂಭವಾಗಲಿದೆ.

ಅಧಿಕಾರಿಗಳ ಸಭೆಯಲ್ಲಿ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಮಾರ್ಗ, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಬಗ್ಗೆಯೂ ಚರ್ಚೆ ನಡೆಯಿತು. ಹುಬ್ಬಳ್ಳಿ-ಚಿಕ್ಕಜಾಜೂರು ಸೇರಿದಂತೆ ವಿವಿಧ ಜೋಡಿ ಮಾರ್ಗ ನಿರ್ಮಾಣ ಕಾಮಾಗಾರಿಯ ಬಗ್ಗೆ ಚರ್ಚೆ ಆಯಿತು.

English summary
South Western Railway general manager Ashok Gupta said that railways likely to fill 2,500 'D' group post soon. The process of filling post on discussion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X