ಮತಾಂತರ ನಿಷೇಧ ಕಾನೂನು ಜಾರಿಗೆ ವಿಶೇಷ ಟಾಸ್ಕ್ ಫೋರ್ಸ್; ಬೊಮ್ಮಾಯಿ
ಹುಬ್ಬಳ್ಳಿ, ಡಿಸೆಂಬರ್ 29; ಕರ್ನಾಟಕದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಬಗ್ಗೆ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಈ ಕಾಯ್ದೆಯನ್ನು ವಿರೋಧಿಸುತ್ತಿವೆ. ವಿಧಾನಸಭೆಯಲ್ಲಿ ಮಾತ್ರ ಇದಕ್ಕೆ ಅನುಮೋದನೆ ಸಿಕ್ಕಿದೆ. ಪರಿಷತ್‌ನಲ್ಲಿ ಒಪ್ಪಿಗೆ ಸಿಗುವುದು ಬಾಕಿ ಇದೆ.
ಹುಬ್ಬಳ್ಳಿಯಲ್ಲಿ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಬುಧವಾರ ತೆರೆಬಿದ್ದಿದೆ. ಕಾರ್ಯಕಾರಣಿ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
"ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಜಾರಿಗೊಳಿಸಲು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ" ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದರು. ಈ ಮೂಲಕ ಪ್ರತಿಪ್ಷಕಗಳ ವಿರೋಧದ ನಡುವೆಯೂ ಜಾರಿಗೆ ತರಲಾಗುತ್ತಿರುವ ಕಾಯ್ದೆಯನ್ನು ಸಮರ್ಥಿಸಿಕೊಂಡರು.

"ಕೊಪ್ಪಳದ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸುತ್ತೇವೆ. ಹಿಂದೂ ದೇವಾಲಯಗಳನ್ನು ಸ್ವತಂತ್ರ ಮಾಡುತ್ತೇವೆ. ಬಜೆಟ್ ಅಧಿವೇಶನದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡಲಾಗುತ್ತದೆ. ಇದು ನಮ್ಮ ಸರ್ಕಾರದ ಸಂಕಲ್ಪವಾಗಿದೆ" ಎಂದರು.
"ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡುತ್ತೇವೆ. ಇವುಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೆ ಬೇರೆ ಏನೂ ಇರುವುದಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲೇ ಇದನ್ನು ಮಾಡುತ್ತೇವೆ" ಎಂದು ಮುಖ್ಯಮಂತ್ರಿಗಳು ಹೇಳಿದರು.
"ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ. ದೇವಾಲಯದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ. ಇದು ನಮ್ಮ ಸಂಕಲ್ಪವಾಗಿದ್ದು, ಜಾರಿಗೊಳಿಸುತ್ತೇವೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
ನೂತನ ಶಿಕ್ಷಣ ನೀತಿ; "ನಮ್ಮ ಸರ್ಕಾರ ಗುರಿ, ಹೊಣೆಗಾರಿಕೆ ಅರಿತು ಕೆಲಸ ಮಾಡುತ್ತಿದೆ. ನರೇಂದ್ರ ಮೋದಿ ಅವರು ನನಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಮುಂದಿನ ಏಪ್ರಿಲ್ ತಿಂಗಳಿನಲ್ಲಿ ನೂತನ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ" ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
"ನಿಮ್ಮ ಸರ್ಕಾರ ಇದ್ದಾಗ ಮೇಕೆದಾಟು ಯೋಜನೆ ಏಕೆ ಜಾರಿ ಮಾಡಲಿಲ್ಲ. ಒಂದೂವರೆ ವರ್ಷ ಮೈತ್ರಿ ಸರ್ಕಾರದಲ್ಲಿ ಇದ್ದರೂ ಯೋಜನೆ ಬಗ್ಗೆ ಏಕೆ ಆಲೋಚನೆ ಮಾಡಲಿಲ್ಲ. ಈಗ ರಾಜಕೀಯ ಪ್ರೇರಿತವಾಗಿ ಪಾದಯಾತ್ರೆ ಮಾಡುತ್ತಿದ್ದೀರಿ" ಎಂದು ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಟೀಕಿಸಿದರು.
ಕಾಂಗ್ರೆಸ್ ವಿರೋಧ; ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021ಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದು, "2015 ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್. ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು" ಎಂದು ಹೇಳಿದ್ದಾರೆ.
"ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು?" ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
"ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ"ಎಂದು ಘೋಷಣೆ ಮಾಡಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications