ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತಾಂತರ ನಿಷೇಧ ಕಾನೂನು ಜಾರಿಗೆ ವಿಶೇಷ ಟಾಸ್ಕ್ ಫೋರ್ಸ್; ಬೊಮ್ಮಾಯಿ

|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್ 29; ಕರ್ನಾಟಕದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಬಗ್ಗೆ ಚರ್ಚೆ ನಡೆಯುತ್ತಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಈ ಕಾಯ್ದೆಯನ್ನು ವಿರೋಧಿಸುತ್ತಿವೆ. ವಿಧಾನಸಭೆಯಲ್ಲಿ ಮಾತ್ರ ಇದಕ್ಕೆ ಅನುಮೋದನೆ ಸಿಕ್ಕಿದೆ. ಪರಿಷತ್‌ನಲ್ಲಿ ಒಪ್ಪಿಗೆ ಸಿಗುವುದು ಬಾಕಿ ಇದೆ.

ಹುಬ್ಬಳ್ಳಿಯಲ್ಲಿ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಬುಧವಾರ ತೆರೆಬಿದ್ದಿದೆ. ಕಾರ್ಯಕಾರಣಿ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.

Highlights: ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯಿದೆ-2021ವಿಧೇಯಕHighlights: ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯಿದೆ-2021ವಿಧೇಯಕ

"ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021 ಜಾರಿಗೊಳಿಸಲು ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ" ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದರು. ಈ ಮೂಲಕ ಪ್ರತಿಪ್ಷಕಗಳ ವಿರೋಧದ ನಡುವೆಯೂ ಜಾರಿಗೆ ತರಲಾಗುತ್ತಿರುವ ಕಾಯ್ದೆಯನ್ನು ಸಮರ್ಥಿಸಿಕೊಂಡರು.

ಅಂಜನಾದ್ರಿ ಬೆಟ್ಟದ ಅಭಿವೃದ್ಧಿ; 50 ಕೋಟಿ ಕಾಮಗಾರಿಗೆ ಶೀಘ್ರವೇ ಒಪ್ಪಿಗೆ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ; 50 ಕೋಟಿ ಕಾಮಗಾರಿಗೆ ಶೀಘ್ರವೇ ಒಪ್ಪಿಗೆ

Special Task Force To Implement Right To Freedom Of Religion Bill

"ಕೊಪ್ಪಳದ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಮಾಡಿಸುತ್ತೇವೆ. ಹಿಂದೂ ದೇವಾಲಯಗಳನ್ನು ಸ್ವತಂತ್ರ ಮಾಡುತ್ತೇವೆ. ಬಜೆಟ್ ಅಧಿವೇಶನದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡಲಾಗುತ್ತದೆ. ಇದು ನಮ್ಮ ಸರ್ಕಾರದ ಸಂಕಲ್ಪವಾಗಿದೆ" ಎಂದರು.

ಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳ ಅಲ್ವಂತೆ, ತಿರುಮಲ ಅಂತೆ: ಟಿಟಿಡಿ ಹೊಸ ಕ್ಯಾತೆಅಂಜನಾದ್ರಿ ಬೆಟ್ಟ ಆಂಜನೇಯನ ಜನ್ಮಸ್ಥಳ ಅಲ್ವಂತೆ, ತಿರುಮಲ ಅಂತೆ: ಟಿಟಿಡಿ ಹೊಸ ಕ್ಯಾತೆ

"ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಸರ್ವ ಸ್ವತಂತ್ರವಾಗಿ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡುತ್ತೇವೆ. ಇವುಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೆ ಬೇರೆ ಏನೂ ಇರುವುದಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲೇ ಇದನ್ನು ಮಾಡುತ್ತೇವೆ" ಎಂದು ಮುಖ್ಯಮಂತ್ರಿಗಳು ಹೇಳಿದರು.

"ದೇವಾಲಯಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ. ದೇವಾಲಯದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ. ಇದು ನಮ್ಮ ಸಂಕಲ್ಪವಾಗಿದ್ದು, ಜಾರಿಗೊಳಿಸುತ್ತೇವೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ನೂತನ ಶಿಕ್ಷಣ ನೀತಿ; "ನಮ್ಮ ಸರ್ಕಾರ ಗುರಿ, ಹೊಣೆಗಾರಿಕೆ ಅರಿತು ಕೆಲಸ ಮಾಡುತ್ತಿದೆ. ನರೇಂದ್ರ ಮೋದಿ ಅವರು ನನಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಮುಂದಿನ ಏಪ್ರಿಲ್ ತಿಂಗಳಿನಲ್ಲಿ ನೂತನ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ" ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

"ನಿಮ್ಮ ಸರ್ಕಾರ ಇದ್ದಾಗ ಮೇಕೆದಾಟು ಯೋಜನೆ ಏಕೆ ಜಾರಿ ಮಾಡಲಿಲ್ಲ. ಒಂದೂವರೆ ವರ್ಷ ಮೈತ್ರಿ ಸರ್ಕಾರದಲ್ಲಿ ಇದ್ದರೂ ಯೋಜನೆ ಬಗ್ಗೆ ಏಕೆ ಆಲೋಚನೆ ಮಾಡಲಿಲ್ಲ. ಈಗ ರಾಜಕೀಯ ಪ್ರೇರಿತವಾಗಿ ಪಾದಯಾತ್ರೆ ಮಾಡುತ್ತಿದ್ದೀರಿ" ಎಂದು ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರ ಪಾದಯಾತ್ರೆಯನ್ನು ಟೀಕಿಸಿದರು.

ಕಾಂಗ್ರೆಸ್ ವಿರೋಧ; ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ 2021ಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಟ್ವೀಟ್ ಮಾಡಿದ್ದು, "2015 ರಲ್ಲಿ ಮತಾಂತರ ನಿಷೇಧ ಕಾಯ್ದೆಯ ಕಡತ ಸಂಪುಟ ಚರ್ಚೆಗೆ ಬರದಂತೆ ತಡೆಯಲು ಅಂದಿನ ಸಮಾಜ ಕಲ್ಯಾಣ ಸಚಿವರಾಗಿದ್ದ ಹೆಚ್. ಆಂಜನೇಯ ಅವರಿಗೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಷರಾ ಬರೆಯುವಂತೆ ಹೇಳಿದ್ದೇ ನಾನು" ಎಂದು ಹೇಳಿದ್ದಾರೆ.

"ಮೂಲ ಮತಾಂತರ ನಿಷೇಧ ಕಾಯ್ದೆಯ ಕರಡು ರೂಪಿಸಲು ತಮ್ಮದೇ ಸರ್ಕಾರ ಕಾರಣ ಎಂದು ಯಡಿಯೂರಪ್ಪ ಮತ್ತು ಮತಾಂತರ ನಿಷೇಧ ಕಾಯ್ದೆ ಜಾರಿ ಆರ್.ಎಸ್.ಎಸ್ ನ ಉದ್ದೇಶವಾಗಿತ್ತು ಎಂದು ಈಶ್ವರಪ್ಪ ಅವರು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಕಾಯ್ದೆ ಆರ್.ಎಸ್.ಎಸ್ ನ ಕೂಸು ಎಂಬುದಕ್ಕೆ ಇದಕ್ಕಿಂತ ಇನ್ನೇನು ಸಾಕ್ಷಿ ಬೇಕು?" ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

"ಜನಾಕ್ರೋಶಕ್ಕೆ ಮಣಿಯದೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದರೂ ಮುಂದೆ ನಾವು ಅಧಿಕಾರಕ್ಕೆ ಬಂದ ಒಂದೇ ವಾರದೊಳಗೆ ಅಥವಾ ಪ್ರಥಮ‌ ಅಧಿವೇಶನದಲ್ಲೇ ಕಾಯ್ದೆಯನ್ನು ರದ್ದುಗೊಳಿಸುತ್ತೇವೆ. ಇದರಲ್ಲಿ ಅನುಮಾನವೇ ಇಲ್ಲ"ಎಂದು ಘೋಷಣೆ ಮಾಡಿದ್ದಾರೆ.

Recommended Video

Rishabh Pant ಅತಿ ವೇಗವಾಗಿ Dhoni ರೆಕಾರ್ಡ್ ಬ್ರೇಕ್ ಮಾಡಿದ್ದು ಹೇಗೆ? | Oneindia Kannada

English summary
Government to form special task force to implement Right to Freedom of Religion Bill, 2021 said Karnataka chief minister Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X