ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ-ಮುಂಬೈ ನಡುವೆ ಸ್ಪೈಸ್‌ ಜೆಟ್ ಹಾರಾಟ ಸ್ಥಗಿತವಿಲ್ಲ

|
Google Oneindia Kannada News

ಹುಬ್ಬಳ್ಳಿ, ಸೆಪ್ಟೆಂಬರ್ 17 : ಸ್ಪೈಟ್ ಜೆಟ್ ಹುಬ್ಬಳ್ಳಿ-ಮುಂಬೈ ವಿಮಾನ ಸೇವೆಯನ್ನು ಮುಂದುವರೆಸಲಿದೆ. ಅಕ್ಟೋಬರ್ 9ರಿಂದ ಸೇವೆ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ಹಬ್ಬಿತ್ತು.

ಹುಬ್ಬಳ್ಳಿ ಮತ್ತು ಮುಂಬೈ ನಡುವೆ ಸ್ಪೈಸ್‌ಜೆಟ್‌ನ ಎಸ್‍ಜಿ 2548 ಹಾಗೂ 2872 ವಿಮಾನಗಳು ಪ್ರತಿನಿತ್ಯ ಹಾರಾಟ ನಡೆಸುತ್ತಿವೆ. ಅಕ್ಟೋಬರ್ 9ರಿಂದ ಸೇವೆ ಸ್ಥಗಿತಗೊಳಿಸುವುದಾಗಿ ಹೇಳಿದ್ದ ಸ್ಪೈಟ್ ಜೆಟ್, ಬುಕ್ಕಿಂಗ್ ಸಹ ಸ್ಥಗಿತಗೊಳಿಸಿತ್ತು.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಗೋ ಸೇವೆ ಆರಂಭಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಗೋ ಸೇವೆ ಆರಂಭ

ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಈ ವಿಚಾರದ ಬಗ್ಗೆ ಕೇಂದ್ರ ವಿಮಾನಯಾನ ಸಚಿವ ಸುರೇಶ್ ಪ್ರಭು ಹಾಗೂ ಜಯಂತ್ ಸಿನ್ಹಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಮಾನ ಹಾರಾಟವನ್ನು ಸ್ಥಗಿತಗೊಳಿಸಬಾರದು ಎಂದು ಮನವಿ ಮಾಡಿದರು.

ಹುಬ್ಬಳ್ಳಿಯಿಂದ ಕೊಚ್ಚಿ-ಗೋವಾಗೆ ವಿಮಾನ ಸೇವೆಹುಬ್ಬಳ್ಳಿಯಿಂದ ಕೊಚ್ಚಿ-ಗೋವಾಗೆ ವಿಮಾನ ಸೇವೆ

Spicejet to continue Hubballi Mumbai daily flights

ಈಗ ಸ್ಪೈಸ್‌ ಜೆಟ್ ಸೇವೆಯನ್ನು ಮುಂದುವರೆಸುವುದಾಗಿ ಘೋಷಣೆ ಮಾಡಿದೆ ಮತ್ತು ಬುಕ್ಕಿಂಗ್ ಅನ್ನು ಸಹ ಪುನಃ ಆರಂಭಿಸಿದೆ. ಹುಬ್ಬಳ್ಳಿ-ಮುಂಬೈ ನಡುವೆ ಪ್ರಯಾಣ ಬೆಳೆಸುವವರು ಈ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲಾಗಿದೆ. ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣವನ್ನು ಸೇರ್ಪಡೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ದೇಶದ ವಿವಿಧ ನಗರಗಳಿಗೆ ಈಗ ವಿಮಾನ ಸೇವೆ ಆರಂಭಿಸಲಾಗಿದೆ.

ಹುಬ್ಬಳ್ಳಿ : ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಿಹುಬ್ಬಳ್ಳಿ : ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಿ

English summary
SpiceJet said that it would continue Hubballi-Mumbai daily flight service. Earlier SpiceJet wish to cancel flight service from October 9, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X