• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವೈಲ್ಡ್ ಕರ್ನಾಟಕ: ಕೋಟ್ಯಾಂತರ ರೂಪಾಯಿ ಅವ್ಯವಹಾರ ಆರೋಪ

|

ಹುಬ್ಬಳ್ಳಿ, ಜೂನ್ 16: ವೈಲ್ಡ್‌ ಕರ್ನಾಟಕ ಸಾಕ್ಷ್ಯಚಿತ್ರ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್‌ ಆರ್ ಹಿರೇಮಠ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ವೈಲ್ಡ್‌ ಕರ್ನಾಟಕ ಸಾಕ್ಷ್ಯಚಿತ್ರ ನಿರ್ಮಾಣ ಹಾಗೂ ಪ್ರಸರಣ ಹಕ್ಕಿನಲ್ಲಿ ಅವ್ಯವಹಾರ ಮಾಡಲಾಗಿದೆ. ಇದರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ ಎಂದಿದ್ದಾರೆ. ವೈಲ್ಡ್‌ ಕರ್ನಾಟಕ ನಿರ್ಮಾಣದಿಂದ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಎಸ್‌ ಆರ್ ಹಿರೇಮಠ ಅಸಮಾಧಾನ ಹೊರ ಹಾಕಿದ್ದಾರೆ.

ವೈಲ್ಡ್ ಕರ್ನಾಟಕ ಕಿರುಚಿತ್ರ ನೋಡಿದ ಯಡಿಯೂರಪ್ಪ

ಆರೋಪ ಮಾಡುವುದು ಮಾತ್ರವಲ್ಲದೆ, ಅದಕ್ಕೆ ದಾಖಲೆಗಳು ಇವೆ. ಪ್ರಾಮಾಣಿಕ ಅಧಿಕಾರಿಗಳಿಂದ ತಮಗೆ ದಾಖಲೆಗಳು ಸಿಕ್ಕಿವೆ ಎಂದಿದ್ದಾರೆ. ಸಾಕ್ಷ್ಯಚಿತ್ರ ನಿರ್ಮಾಣ ಮಾಡಿದ ವ್ಯಕ್ತಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಬೇಕು, ತಪ್ಪು ಮಾಡಿದವರಿಗೆ ಶಿಕ್ಷ ಆಗಬೇಕು ಎಂದು ಎಸ್‌ ಆರ್ ಹಿರೇಮಠ ಒತ್ತಾಯ ಮಾಡಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರಿಗೆ ಈ ಬಗ್ಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರ ನಿರ್ಮಿಸಲು ಸರ್ಕಾರದ ಸೌಲಭ್ಯ ಬಳಸಿಕೊಳ್ಳಲಾಗಿದೆ. ಆದರೆ, ಅದರ ಸಾಕ್ಷ್ಯಚಿತ್ರದ ಪ್ರಸರಣ ಹಕ್ಕನ್ನು ಮಾರಾಟ ಮಾಡಿ ಸ್ವಂತ ಲಾಭ ಮಾಡಿಕೊಂಡಿದ್ದಾರೆ ಎಂದು ಎಸ್‌ ಆರ್ ಹಿರೇಮಠ ಹೇಳಿದ್ದಾರೆ.

English summary
SR Hiremath made a allegations on wild karnataka documentary. He says crores rupees misusing for this production.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X