ರೈತರ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಚರ್ಚೆ: ಕುಲಕರ್ಣಿ

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಆಗಸ್ಟ್, 09: ಮಹಾದಾಯಿ ಹೋರಾಟಗಾರರನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಪ್ರಕರಣ ಹಿಂತೆಗೆದುಕೊಳ್ಳಲು ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದ್ದಾರೆ.

ಅವರು ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು, ಈಗಾಗಲೇ ಮುಖ್ಯಮಂತ್ರಿಯವರನ್ನು ಒಮ್ಮೆ ಭೇಟಿ ಮಾಡಿ ಬಂಧಿತರ ಬಿಡುಗಡೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಎಂದು ತಿಳಿಸಿದರು.['ಕುಡಿಯುವ ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ದುರಂತ']

hubballi

ಅಮಾಯಕರ ಬಂಧನಕ್ಕೆ ಸಂಬಂಧಪಟ್ಟಂತೆ ಕಾನೂನು ಅಂಶಗಳನ್ನು ಪರಿಶೀಲಿಸಿಕೊಂಡು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಬಂಧಿತರಲ್ಲಿ ವೃದ್ಧರು, ವಿದ್ಯಾರ್ಥಿಗಳು, ಮತ್ತು ಅಮಾಯಕರನ್ನು ಬಿಡುಗಡೆಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.[ಮಹದಾಯಿ: ಸರ್ವಪಕ್ಷಗಳ ಸಭೆ ತೆಗೆದುಕೊಂಡ ನಿರ್ಧಾರವೇನು?]

hubballi

ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಸಂಬಂಧ ಕೆಲವರನ್ನು ಬಂಧಿಸಲಾಗಿದೆ. ಅವರ ಬಿಡುಗಡೆಗೊಳಿಸಲು ಸಂಪೂರ್ಣ ಪ್ರಯತ್ನಿಸುತ್ತೇನೆ. ಅಮಾಯಕರ ಮೇಲೆ ನಮಗೂ ಕನಿಕರವಿದೆ ಎಂದರು. ಲಾಠಿ ಚಾರ್ಜ್ ಯಾರು ಮಾಡಿದ್ದರೋ ನನಗೂ ಗೊತ್ತಿಲ್ಲ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಲಾಠಿ ಚಾರ್ಜ್ ಮಾಡಿರಬಹುದು ಎಂದು ಸಮರ್ಥನೆ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Hubballi-Dharwad: The state cabinet will discuss the release of farmers who were arrested by police at the time of Mahadayi strike said Mines and Geology minister Vinay Kulkarni.
Please Wait while comments are loading...