ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ:ಯಡಿಯೂರಪ್ಪ
Recommended Video

Lok Sabha Elections 2019 : ಸುಮಲತಾ ಬಿಜೆಪಿಯಿಂದ ಸ್ಪರ್ಧಿಸುವ ಬಗ್ಗೆ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ
ಹುಬ್ಬಳ್ಳಿ, ಮಾರ್ಚ್ 07: ಒಂದು ಕಡೆ ಮಂಡ್ಯದ ಲೋಕಸಭಾ ಕ್ಷೇತ್ರದ ಕಣ ರಂಗೇರುವುದರೊಂದಿಗೆ ಕುತೂಹಲ ಹುಟ್ಟುಹಾಕುತ್ತಿದ್ದು, ರಾಜ್ಯದ ಜನರ ದೃಷ್ಠಿಯನ್ನು ತನ್ನತ್ತ ಸೆಳೆಯತೊಡಗಿದೆ.
ಇದೀಗ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ. ಇನ್ನು ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆಯೂ ಯಾವುದೇ ಚರ್ಚೆ ನಡೆಸಿಲ್ಲ. ಅವರ ನಿರ್ಧಾರದ ನಂತರ ಮಂಡ್ಯ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ನಿರ್ಣಯಿಸಲಾಗುವುದು ಎಂದರು.

ರಾಜ್ಯದಲ್ಲಿ 22 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿರೀಕ್ಷೆ ಇದೆ. ಜೊತೆಗೆ ದೇಶದಲ್ಲಿ 300ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications