• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿ; ಮಹಾನಗರ ಪಾಲಿಕೆ ಚುನಾವಣೆಗೆ ಸುಪ್ರೀಂ ತಡೆ

|

ಹುಬ್ಬಳ್ಳಿ, ಫೆಬ್ರವರಿ 15; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡನೆ ಮಾಡಿ ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಲಾಗಿತ್ತು.

7-8 ತಿಂಗಳಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸಬೇಕು ಎಂಬ ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. 2020ರ ಡಿಸೆಂಬರ್ 16ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ವಿಜಯಪುರದ ಮಾಜಿ ಮೇಯರ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು.

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ 6 ಪಥವಾಗಿ ಅಗಲೀಕರಣ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ನ್ಯಾಯಮೂರ್ತಿಗಳಾದ ಎ. ಎಸ್. ಬೋಪಣ್ಣ, ವಿ. ರಾಮಸುಬ್ರಮಣ್ಯಯನ್ ಅರ್ಜಿಯ ವಿಚಾರಣೆಯನ್ನು ನಡೆಸಿದರು. ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದರು.

ಹುಬ್ಬಳ್ಳಿ; ಅವಳಿ ನಗರದಲ್ಲಿ ಕಸ ಸುರಿದರೆ ದಂಡ

ವಿವಾದವೇನು?; ಮಹಾನಗರ ಪಾಲಿಕೆಯ ಕೆಲವು ಮಾಜಿ ಸದಸ್ಯರು, ಕಾಂಗ್ರೆಸ್ ಮುಖಂಡರು ವಾರ್ಡ್‌ಗಳ ಪುನರ್ ವಿಂಗಡನೆ, ಮೀಸಲಾತಿ ಪ್ರಕಟವಾಗುವುದು ವಿಳಂಬವಾಗಿರುವ ಕುರಿತು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಧಾರವಾಡ ಅಪಘಾತ; ಮೃತರ ಕುಟುಂಬದವರಿಂದ ಪ್ರತಿಭಟನೆ

ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಅವರಿದ್ದ ಪೀಠ ಏಳೆಂಟು ತಿಂಗಳಿನಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಆದೇಶ ನೀಡಿತ್ತು. ಆರು ವಾರದಲ್ಲಿ ವಾರ್ಡ್ ಪುನರ್ ವಿಂಗಡನೆ, ಮೂರು ತಿಂಗಳಿನಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು ಎಂದು ಹೇಳಿತ್ತು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈಗಾಗಲೇ ವಾರ್ಡ್‌ಗಳ ಪುನರ್ ವಿಂಗಡನೆ ಮಾಡಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆಗೆ ಕಳುಹಿಸಿಕೊಟ್ಟಿತ್ತು. ಮೀಸಲಾತಿ ಪಟ್ಟಿ ಪ್ರಕಟವಾಗುವ ಹಂತದಲ್ಲಿತ್ತು. ಆದರೆ, ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

English summary
Supreme Court of India issued stay for the Hubballi Dharwad city corporation election. Court also stayed the Karnataka high court order that said election to conduct in 8 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X