• search
  • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ಟೆಕ್ಕಿ ಸಾವು: ಜನತೆಯಲ್ಲಿ ಆತಂಕ

|

ಹುಬ್ಬಳ್ಳಿ, ಏಪ್ರಿಲ್ 4: ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ಟೆಕ್ಕಿಯೊಬ್ಬರು ಮೃತಟ್ಟಿದ್ದಾರೆ. ಮಹಾರಾಷ್ಟ್ರದ ಪುಣೆಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದ ಎಂಜಿನಿಯರ್ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಟೆಕ್ಕಿ ಜ್ವರ, ನೆಗಡಿ, ಕೆಮ್ಮ, ನ್ಯೂಮೋನಿಯಾ ರೋಗದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕಿಮ್ಸ್ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಕೊರೊನಾ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಕ್ತ ಮಾದರಿ ಹಾಗೂ ಥ್ರೋಟ್ ಸ್ವ್ಯಾಬ್ ಅನ್ನು ಶಿವಮೊಗ್ಗಕ್ಕೆ ರವಾನೆ ಮಾಡಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಮೃತಪಟ್ಟಿದ್ದಾರೆ.

ಕೊರೊನಾಗೆ 4ನೇ ಬಲಿ; ಬಾಗಲಕೋಟೆಯಲ್ಲಿ ವೃದ್ಧ ಸಾವು

ಕಿಮ್ಸ್‌ನಲ್ಲಿ ರಕ್ತದ ಮಾದರಿ ಪರೀಕ್ಷೆ ವೇಳೆ ಕಾಮಣಿ ರೋಗ ಪತ್ತೆಯಾಗಿದೆ. ಹೀಗಾಗಿ ಕಾಮಾಲೆ ರೋಗದಿಂದ ಮೃತ್ತಪಟ್ಟಿರುವುದಾಗಿ ಕಿಮ್ಸ್ ವೈದ್ಯರ ಸ್ಪಷ್ಟನೆ ನೀಡಿದ್ದಾರೆ. ಆದರೆ ಶಿವಮೊಗ್ಗದಿಂದ ರಿಪೋರ್ಟ್ ಬರುವುದನ್ನು ವೈದ್ಯರು ಕಾಯುತ್ತಿದ್ದಾರೆ.

ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿ ಮೃತ ದುರ್ದೈವಿ. ಟೆಕ್ಕಿಗೆ ಕೊರೊನಾ ಸೋಂಕು ತಗುಲಿರುವ ಅನುಮಾನ ವ್ಯಕ್ತವಾಗಿದೆ. ಶುಕ್ರವಾರವಷ್ಟೇ ಬಾಗಲೋಟೆಯಲ್ಲಿ ಓರ್ವ ವ್ಯಕ್ತಿ ಕೊರೊನಾದಿಂದಮೃತಪಟ್ಟಿದ್ದಾರೆ.

ಶುಕ್ರವಾರ ಬಾಗಲಕೋಟೆಯ ನವನಗರದ ನಿವಾಸಿಯಾದ 75 ವರ್ಷದ ವೃದ್ಧ (ರೋಗಿ 125) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಈ ಕುರಿತು ಖಚಿತಪಡಿಸಿದ್ದಾರೆ.

ಮೃತಪಟ್ಟ ವೃದ್ಧ ಕಿರಾಣಿ ಹಾಗೂ ಅಡುಗೆ ಎಣ್ಣೆ ಮಾರಾಟ ಮಾಡುವ ಅಂಗಡಿಯನ್ನು ಇಟ್ಟುಕೊಂಡಿದ್ದರು. ಮಾರ್ಚ್ 31ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವೃದ್ಧ ಯಾವುದೇ ವಿದೇಶ ಪ್ರವಾಸ ಮಾಡಿಲ್ಲ. ಹೊರ ರಾಜ್ಯ ಅಥವ ಹೊರ ಜಿಲ್ಲೆಗೆ ಭೇಟಿ ಕೊಟ್ಟಿಲ್ಲ.

ವೃದ್ಧನ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ರಾತ್ರಿಯೇ ಕೊರೊನಾದಿಂದ ಮೃತಪಟ್ಟರೆ ಹೇಗೆ ಅಂತ್ಯ ಸಂಸ್ಕಾರ ಮಾಡಬೇಕು ಎಂಬ ಮಾರ್ಗಸೂಚಿ ಅನ್ವಯೇ 5ಕ್ಕೂ ಹೆಚ್ಚು ಜನರು ಸೇರದಂತೆ ನೋಡಿಕೊಂಡು ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ.

English summary
Corona suspected Techie Died in Hubballi .An engineer who arrived from Pune, Maharashtra, was found dead at the KIMS Hospital in Hubballi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X