ಹುಬ್ಬಳ್ಳಿ-ಚೆನ್ನೈ ನಡುವೆ ವಾರಕ್ಕೊಂದು ವಿಶೇಷ ರೈಲು ಸಂಚಾರ

ಹುಬ್ಬಳ್ಳಿ, ಮಾರ್ಚ್ 05 : ಹುಬ್ಬಳ್ಳಿ-ಚೆನ್ನೈ ನಡುವೆ ವಾರದಲ್ಲಿ ಒಂದು ದಿನ ವಿಶೇಷ ರೈಲನ್ನು ಓಡಿಸಲು ನೈಋತ್ಯ ರೈಲ್ವೆ ಪ್ರಸ್ತಾವನೆ ಸಿದ್ಧಪಡಿಸಿದೆ. ರೈಲ್ವೆ ಇಲಾಖೆಯ ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

ಬಳ್ಳಾರಿ ಮಾರ್ಗವಾಗಿ ಹುಬ್ಬಳ್ಳಿ-ಚೆನ್ನೈ ನಡುವೆ ವಾರದಲ್ಲಿ ಒಂದು ದಿನ ವಿಶೇಷ ರೈಲು ಸಂಚಾರ ನಡೆಸಲು ಪ್ರಸ್ತಾವನೆ ಸಿದ್ಧವಾಗಿದೆ. ನೈಋತ್ಯ ಮತ್ತು ಕೇಂದ್ರ ರೈಲ್ವೆ ವಯಲದ ಒಪ್ಪಿಗೆ ಸಿಕ್ಕಿದರೆ ರೈಲು ಸಂಚಾರವನ್ನು ಆರಂಭಿಸಲಾಗುತ್ತದೆ.

ಹುಬ್ಬಳ್ಳಿಯಲ್ಲಿ ನಡೆದ ಪ್ರಾದೇಶಿಕ ರೈಲ್ವೆ ಬಳಕೆದಾರರ ಸಭೆಯಲ್ಲಿ ಈ ರೈಲು ಸಂಚಾರ ಆರಂಭಿಸುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಳ್ಳಾರಿ ಜಿಲ್ಲಾ ಛೇಂಬರ್ ಆಫ್ ಕಾರ್ಮರ್ಸ್‌ ಹುಬ್ಬಳ್ಳಿ-ಚೆನ್ನೈ ರೈಲು ಸೇವೆ ಆರಂಭಿಸಬೇಕು ಎಂದು ಬೇಡಿಕೆ ಇಟ್ಟಿತ್ತು.

SWR to run weekly train between Hubballi and Chennai

ಮೊದಲ ಎರಡು ವಾರಕ್ಕೊಮ್ಮೆ ಹುಬ್ಬಳ್ಳಿ-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ ನಡೆಸುವ ಕುರಿತು ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. ಬಳಿಕ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ವಾರಕ್ಕೊಮ್ಮೆ ಸಂಚಾರ ನಡೆಸುವ ತೀರ್ಮಾನ ಕೈಗೊಳ್ಳಲಾಯಿತು.

ಬಳ್ಳಾರಿ-ಲಿಂಗಸಗೂರು (ಸಿರಗುಪ್ಪ-ಸಿಂಧನೂರು) ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ವಿಳಂಬವಾಗುತ್ತಿರುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು. 147 ಕಿ.ಮೀ. ಮಾರ್ಗ ನಿರ್ಮಾಣಕ್ಕೆ 2014-15ರಲ್ಲಿಯೇ ಸಮೀಕ್ಷೆ ನಡೆಸಲಾಗಿದೆ. 1,160 ಕೋಟಿ ವೆಚ್ಚದ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಕೊಪ್ಪಳ-ಬೆಂಗಳೂರು ನಡುವೆ ಹಗಲು ಹೊತ್ತಿನಲ್ಲಿ ಇಂಟರ್ ಸಿಟಿ ರೈಲು ಆರಂಭಿಸುವ ವಿಚಾರದ ಕುರಿತು ಚರ್ಚೆಗಳು ನಡೆದವು. ಆದರೆ, ಈ ಬಗ್ಗೆ ಯಾವುದೇ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+