ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಬ್ಬಳ್ಳಿ: ತೆರಿಗೆ ಹೆಚ್ಚಳ ವಿರೋಧಿಸಿ ಜಿಎಸ್‌ಟಿ ವಿರುದ್ಧ ಪ್ರತಿಭಟನೆ

By Basavaraj Maralihalli
|
Google Oneindia Kannada News

ಹುಬ್ಬಳ್ಳಿ, ಜೂನ್ 30: ದೇಶಾದ್ಯಂತ ಜಾರಿಯಾಗುತ್ತಿರುವ ಜಿಎಸ್‌ಟಿ ತೆರಿಗೆ ವ್ಯವಸ್ಥೆಯಲ್ಲಿ ಸಾದಾ ಬಟ್ಟೆ ಮೇಲೆ ವಿಧಿಸಿರುವ ತೆರಿಗೆ ಹೆಚ್ಚಳ ಖಂಡಿಸಿ ನಗರದ ಜವಳಿ ವರ್ತಕರು ಎರಡು ಗಂಟೆಗಳ ಕಾಲ ವ್ಯಾಪಾರ ಸ್ಥಗಿತಗೊಳಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಜವಳಿ ಸಾಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಶೀಲ್ದಾರ್ ಕಚೇರಿಗೆ ತಲುಪಿತು. ಅಲ್ಲದೆ ಜವಳಿ ಮೇಲೆ ವಿಧಿಸಿರುವ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

Textile traders held protest against GST in Hubballi

ಬಟ್ಟೆಯ ಮೇಲೆ ಈ ಮೊದಲು ಇದ್ದ ಶೇ. 5 ರಷ್ಟು ತೆರಿಗೆಯನ್ನು ಜಿಎಸ್‌ಟಿಯಲ್ಲಿ ಶೇ. 12ಕ್ಕೆ ಹೆಚ್ಚಳ ಮಾಡಲಾಗಿದ್ದು, ಇದು ಅವೈಜ್ಞಾನಿಕ ಕ್ರಮ. ಇದರಿಂದ ಗ್ರಾಹಕರಿಗೆ ತೀವ್ರ ತೊಂದರೆಯಾಗಲಿದ್ದು, ಜವಳಿ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಪ್ರತಿಭಟನಾ ನಿರತ ವ್ಯಾಪಾರಸ್ತರು ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ

ಕೂಡಲೇ ಈ ಕಾಯ್ದೆ ರದ್ದು ಪಡಿಸಬೇಕು. ಇಲ್ಲವೇ ಬಟ್ಟೆಯ ಮೇಲೆ ಹಾಕಿರುವ ತೆರಿಗೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬೇಡಿಕೆಗೆ ಸ್ಪಂದಿಸದಿದ್ದರೆ ಸುಮಾರು 3000 ಅಂಗಡಿ ಬಂದ್ ಮಾಡಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

English summary
Textile traders of Hubballi city held protest against implementation of Goods and Service Tax (GST). Protesters opposed 12 percent tax on cloths under GST and demanded for lower tax.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X