ರಾಜಕೀಯದಲ್ಲಿ ಇವೆಲ್ಲ ಮಾಮೂಲು ಎಂದ ಜನಾರ್ದನ ರೆಡ್ಡಿ
ಹುಬ್ಬಳ್ಳಿ, ಜನವರಿ 31: "ರಾಜಕೀಯದಲ್ಲಿ ಇವೆಲ್ಲಾ ಮಾಮೂಲು. ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಮುಂದಿನ ಚುನಾವಣೆಯಲ್ಲಿ ಬಳ್ಳಾರಿಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ" ಎಂದು ಮಾಜಿ ಸಚಿವ- ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಇಲ್ಲಿ ಮಂಗಳವಾರ ಮಾಧ್ಯಮಗಳಿಗೆ ಹೇಳಿದರು.
ಇಲ್ಲಿನ ಸದ್ಗುರು ಸಿದ್ಧಾರೂಢ ಮಠಕ್ಕೆ ಪತ್ನಿ ಅರುಣಾ ಜತೆಗೆ ಭೇಟಿ ನೀಡಿದ ಅವರು, ಹದಿನೈದು ನಿಮಿಷಗಳ ಕಾಲ ಸಿದ್ಧಾರೂಢನಿಗೆ ಪೂಜೆ ಸಲ್ಲಿಸಿದರು. ಹೊಸಪೇಟೆಯ ಆನಂದ್ ಸಿಂಗ್ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯದಲ್ಲಿ ಇವೆಲ್ಲ ಮಾಮೂಲು ಎಂದು ಹೇಳಿದರು.

ಕುಟುಂಬ ಸಮೇತರಾಗಿ ಸದ್ಗುರು ಸಿದ್ಧಾರೂಢ ಗದ್ದುಗೆ ದರ್ಶನ ಪಡೆದ ಜನಾರ್ದನ ರೆಡ್ಡಿ, ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿಯು ಬಲಿಷ್ಠವಾಗಿದೆ. ಶ್ರೀರಾಮುಲು ಜಿಲ್ಲೆಯಲ್ಲಿ ಚುನಾವಣೆ ಎದುರಿಸಲಿದ್ದಾರೆ. ಶ್ರೀರಾಮುಲು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದಾರೆ. ಆದ್ದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications