ಜಗದೀಶ್ ಶೆಟ್ಟರ್‌ಗೆ ಟಿಕೆಟ್ ವಿಳಂಬ: ರಾಜೀನಾಮೆ ಸಲ್ಲಿಸಿದ 16 ಹು-ಧಾ ಪಾಲಿಕೆ ಸದಸ್ಯರು

ಹುಬ್ಬಳ್ಳಿ, ಏಪ್ರಿಲ್‌ 15: ರಾಜ್ಯ ವಿಧಾನಸಭಾ ಚುನಾವಣಾಗೆ ಸ್ಪರ್ಧಿಸಲು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಹಾಲಿ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಪಕ್ಷ ಟಿಕೆಟ್ ನೀಡುವಲ್ಲಿ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 16 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಪಕ್ಷದ 16 ಸದಸ್ಯರು ರಾಜೀನಾಮೆ ಪತ್ರ ಬರೆದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ ಕಟೀಲ್ ಸಲ್ಲಿಸಿದ್ದಾರೆ.

Ticket Delay For Jagadish Shettar:16 BJP Members Resigned

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸತತ ಆರು ಬಾರಿ ಗೆಲುವು ಕಂಡ ಜಗದೀಶ್ ಶೆಟ್ಟರ್ ಅವರಿಗೆ ಸೆಂಟ್ರಲ್ ಕ್ಷೇತ್ರಕ್ಕೆ ಟಿಕೆಟ್ ನೀಡಲು ಹೈ ಕಮಾಂಡ್ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರರಾದ ಮಲ್ಲಿಕಾರ್ಜುನ ಗುಂಡೂರ, ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ತಿಪ್ಪಣ್ಣ ಮಜ್ಜಿಗಿ, ಸೀಮಾ ಮುಗಲಿಶೆಟ್ಟರ, ಸಂತೋಷ ಚವ್ಹಾಣ, ಮಹದೇವಪ್ಪ ನರಗುಂದ, ಬೀರಪ್ಪ ಖಂಡೇಕರ, ಉಮಾ‌ ಮುಕುಂದ, ವೀರಣ್ಣ ಸವಡಿ, ರೂಪಾ ಶೆಟ್ಟಿ, ಕಿಶನ್ ಬೆಳಗಾವಿ, ವೀಣಾ ಬರದ್ವಾಡ, ಸರಸ್ವತಿ ಧೋಂಗಡಿ, ಚಂದ್ರಿಕಾ ವೆಂಕಟೇಶ ಮೇಸ್ತ್ರಿ, ಮೀನಾಕ್ಷಿ ವಂಟಮೂರಿ ಈ 16 ಜನ ಬಿಜೆಪಿ ಪಾಲಿಕೆ ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆಯಾಗಿದ್ದೂ, ಎರಡರಲ್ಲೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಪಕ್ಷ ಟಿಕೆಟ್‌ ನೀಡಿಲ್ಲ. ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ನೀಡಲು ಪಕ್ಷ ವಿಳಂಬ ಮಾಡುತ್ತಿದ್ದು, ಇದರಿಂದ ಅವರ ಬೆಂಬಲಿಗರು ಬೇಸರಗೊಂಡಿದ್ದಾರೆ.

Ticket Delay For Jagadish Shettar:16 BJP Members Resigned

ವಿಧಾನಸಭಾ ಟಿಕೆಟ್‌ ವಿಳಂಬ: ಬಿಜೆಪಿ ಹೈ ಕಮಾಂಡ್‌ಗೆ ಡೆಡ್‌ ಲೈನ್‌ ನೀಡಿದ ಜಗದೀಶ್‌ ಶೆಟ್ಟರ್‌

ಇನ್ನು ಟಿಕೆಟ್‌ ನಿರೀಕ್ಷೆಯಲ್ಲಿರುವ ಜಗದೀಶ್‌ ಶೆಟ್ಟರ್‌ ಬಿಜೆಪಿ ನಾಯಕರಿಗೆ ಟಿಕೆಟ್‌ ಘೋಷಣೆಗೆ ಡೆಡ್‌ ಲೈನ್‌ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಪಾಸಿಟಿವ್ ಆಗಿ ಯೋಚನೆ ಮಾಡುತ್ತೇನೆ. ಈಗಲೂ ಆಶಾಭಾವ ಹೊಂದಿದ್ದೇನೆ. ಶನಿವಾರ ಘೋಷಣೆ ಆಗದೆ ಹೋದರೆ ನಾನು ಯೋಚನೆ ಮಾಡುತ್ತೇನೆ. ಅಭಿಮಾನಿಗಳ ಸಭೆ ಮಾಡಿ ಅಂತೀಮ ತೀರ್ಮಾನ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು.

ಜಗದೀಶ್‌ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ- ಸಿಎಂ ಬಸವರಾಜ ಬೊಮ್ಮಾಯಿ

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಟಿಕೆಟ್‌ ವಿಳಂಬ ಮಾಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಮಾತನಾಡಿದ್ದು, ಜಗದೀಶ್ ಶೆಟ್ಟರ್ ಅವರ ಟಿಕೆಟ್ ವಿಚಾರಕ್ಕೆ, ಅವರನ್ನು ಮನವೊಲಿಕೆ ಪ್ರಯತ್ನ ಮಾಡಿದ್ದೇವೆ. ಇವತ್ತಿಗೂ ಪ್ರಯತ್ನ ನಡೆಯುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ ಬಳಿ ಚರ್ಚೆ ಮಾಡಿದ್ದೇನೆ. ಬಿಜೆಪಿಗೆ ಶೆಟ್ಟರ್ ಅತ್ಯಂತ ನಿಷ್ಟರು. ಉತ್ತರ ಕರ್ನಾಟಕ ಭಾಗಕ್ಕೆ ಅತ್ಯಂತ ಅವಶ್ಯಕವಾಗಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕೆಂದು ಹೇಳಿದ್ದೇನೆಂದು ಎಂದಿದ್ದಾರೆ.

ಜಗದೀಶ್‌ ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ನೀವಂತೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಇದು ಸುಳ್ಳು ವದಂತಿ, ಯಾರೂ ಅದನ್ನು ನೀರಿಕ್ಷೆ ಮಾಡಬಾರದು. ಅತ್ಯಂತ ಪ್ರಾಮಾಣಿಕವಾಗಿ ಜಗದೀಶ್‌ ಶೆಟ್ಟರ್ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದೇವೆ. ಹೇಳೋರು‌ ನೂರಾರು ಹೇಳ್ತಾರೆ, ಶೆಟ್ಟರ್ ನಾವು ಆತ್ಮೀಯರು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+