Traffic restrictions: ಹುಬ್ಬಳ್ಳಿ - ಧಾರವಾಡದಲ್ಲಿ ಭಾರೀ ಸಂಚಾರ ಮಾರ್ಗ ಬದಲಾವಣೆ
ಹುಬ್ಬಳ್ಳಿ - ಧಾರವಾಡ ಮಹಾನಗರದಲ್ಲಿ 9ನೇ ದಿನವಾದ ಇಂದು ಗಣೇಶ ಮೂರ್ತಿಗಳ ವಿಸರ್ಜನೆ ಹಾಗೂ ಈದ್ ಮಿಲಾದ್ ಹ ಹಿನ್ನೆಲೆಯಲ್ಲಿ ಹಲವು ಪ್ರಮುಖ ಮಾರ್ಗದಲ್ಲಿ ಬಸ್ ಹಾಗೂ ವಾಹನಗಳ ಸಂಚಾರದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇರುವ ಹಿನ್ನೆಲೆಯಲ್ಲಿ ಇಂದು ಭಾನುವಾರ ಸೆಪ್ಟೆಂಬರ್ 15ರಂದು ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 16ರಂದು ಮಹತ್ವದ ಮಾರ್ಗಗಗಳಲ್ಲಿ ರಸ್ತೆ ಸಂಚಾರ ಬದಲಾಯಿಸಲಾಗಿದೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ಸಹಕರಿಸಬೇಕು ಎಂದು ಹುಬ್ಬಳ್ಳಿ - ಧಾರವಾಡ ಮಹಾನಗರ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.
ಹುಬ್ಬಳ್ಳಿ - ಧಾರವಾಡದಲ್ಲಿ ಸಂಚಾರ ಬದಲಾವಣೆ: ಹುಬ್ಬಳ್ಳಿ - ಧಾರವಾಡದ ಹಲವು ಮಾರ್ಗದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಸೆ.15ರ ಮಧ್ಯಾಹ್ನ 2ಗಂಟೆಯಿಂದ ಪ್ರಾರಂಭವಾಗಿ ಮಧ್ಯರಾತ್ರಿ 1 ಗಂಟೆಯ ವರೆಗೆ ಈ ಬದಲಾವಣೆ ಇರಲಿದೆ. ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ಮಾರ್ಗಗಳನ್ನು ಸಹ ಬದಲಾಯಿಸಲಾಗಿದೆ. ಬೈಕ್‌ಗಳಿಗೂ ಟ್ರಾಫಿಕ್ ಡೈವರ್ಶನ್ ಕೊಡಲಾಗಿದೆ. ಇನ್ನು ಈದ್ ಮಿಲಾದ್ ಇರುವುದರಿಂದ ಸೆಪ್ಟೆಂಬರ್ 16ರಂದು ಮಧ್ಯಾಹ್ನ 2 ಗಂಟೆಯಿಂದ ಮಧ್ಯರಾತ್ರಿ 12ರ ವರೆಗೆ ವಿವಿಧ ಪ್ರಮುಖ ರಸ್ತೆಗಳಲ್ಲಿ ವಾಹನ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೂಕ್ಷ್ಮ ಪ್ರದೇಶ ಹಿನ್ನೆಲೆಯಲ್ಲಿ ಕಟ್ಟೆಚ್ಚರ
ಹುಬ್ಬಳ್ಳಿ - ಧಾರವಾಡ ಪ್ರದೇಶವನ್ನು ಕೋಮುಸೂಕ್ಷ್ಮ ಪ್ರದೇಶ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಪೊಲೀಸರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಗಣೇಶ ಮೂರ್ತಿಗಳನ್ನು ಕೂರಿಸಿ ಇಂದಿಗೆ ಸೆಪ್ಟೆಂಬರ್ 15ಕ್ಕೆ 9 ದಿನಗಳಾಗುತ್ತಿದ್ದು, ಹಲವು ಭಾಗದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯ ನಡೆಯುತ್ತಿದೆ. ಅಲ್ಲದೇ ಸೋಮವಾರ ಈದ್ ಮಿಲಾದ್ ಸಹ ಇದೆ. ಈ ಹಿನ್ನೆಲೆಯಲ್ಲಿ ಎರಡೂ ಮೆರವಣಿಗೆಗಳ ಸಂದರ್ಭದಲ್ಲಿ ವಾಹನ ಸವಾರರಿಗೆ ಸಂಚಾರ ದಟ್ಟಣೆಯನ್ನು ತಪ್ಪಿಸುವುದು ಹಾಗೂ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ - ಧಾರವಾಡ ಪೊಲೀಸರು ಮುಂಜಾಗ್ರತೆ ವಹಿಸಿದ್ದರೆ. ಇದರೊಂದಿಗೆ ಸಂಚಾರ ಪೊಲೀಸರು ಸಹ ಕೆಲವು ನಿರ್ದಿಷ್ಟ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ.
ಯಾವೆಲ್ಲ ಭಾಗದಲ್ಲಿ ಸಂಚಾರ ಬದಲಾವಣೆ: ಹುಬ್ಬಳ್ಳಿ - ಧಾರವಾಡದ ಪ್ರಮುಖ ರಸ್ತೆಗಳಾದ ಕಾರವಾರ ರೋಡ್ ಬ್ರಿಡ್ಜ್, ಪುಣೆ ಬೆಂಗಳೂರು ಕಡೆಯಿಂದ ಬರುವ ಬಸ್, ಎಂ.ಟಿ ಬಿ ಮಿಲ್ ಸರ್ಕಲ್ , ಮಾಫಲ್ಸ್ ಡಿಪೋ, ಗಬ್ಬೂರು ರೋಡ್, ತಾಡಪತ್ರಿ ಗಲ್ಲಿಯಿಂದ ನ್ಯೂ ಇಂಗ್ಲೀಷ್ ಸ್ಕೂಲ್ ಕಡೆಗೆ, ಹಳೇ ಹುಬ್ಬಳ್ಳಿ ದರ್ಗಾ, ಗಬ್ಬೂರು ಸರ್ಕಲ್ ನಿಂದ ಬರುವ ಬಸ್‌ಗಳು ಹಾಗೂ ಹೋಗುವ ಬಸ್‌ಗಳು ಗಬ್ಬೂರು ರೋಡ್, ಕಾರವಾರ ರೋಡ್, ನವಗುಂದ ರಸ್ತೆ, ಗದಗ ರೋಡ್ ಹಾಗೂ ಕೇಶ್ವಪುರ ಸೇರಿದಂತೆ ಹಲವು ಮಾರ್ಗಗಳ ನಿರ್ದಿಷ್ಟ ಭಾಗದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.
(2/2) pic.twitter.com/M9D23MYZfw
— ಹು-ಧಾ ನಗರ ಪೊಲೀಸ್ | Hubballi-Dharwad City Police (@compolhdc) September 14, 2024
17 ಹಾಗೂ 18ಕ್ಕೂ ಮಾರ್ಗ ಬದಲಾವಣೆ
ಇನ್ನು ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 18ರ ವರೆಗೆ ಹುಬ್ಬಳ್ಳಿ - ಧಾರವಾಡ ಅವಳಿ ನಗರದ ಹಲವು ಪ್ರಮುಖ ಭಾಗದಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 17 ಹಾಗೂ 18ರಂದು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ 11ನೇ ದಿನವಾಗಲಿದ್ದು. 11ನೇ ದಿನದಂದು ಹಲವು ಭಾಗದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಹಾಗೂ ಮೆರವಣಿಗೆ ನಡೆಯಲಿದೆ. ಹೀಗಾಗಿ, ಸಂಚಾರ ಬದಲಾವಣೆ ಮಾಡಲಾಗಿದೆ ಎಂದು ಹುಬ್ಬಳ್ಳಿ - ಧಾರವಾಡ ಟ್ರಾಫಿಕ್ ಪೊಲೀಸರು ಹೇಳಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ












Click it and Unblock the Notifications