ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ: 11 ತಿಂಗಳಿನಲ್ಲಿ 6.5 ಕೋಟಿ ರೂ. ದಂಡ ವಸೂಲಿ
ಹುಬ್ಬಳ್ಳಿ, ಡಿಸೆಂಬರ್, 01: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 6.5 ಕೋಟಿ ರೂಪಾಯಿ ದಂಡವನ್ನು ವಸೂಲಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶಬರಿಮಲೆಗೆ ಬೆಳಗಾವಿ, ಹುಬ್ಬಳ್ಳಿಯಿಂದ ಪ್ರತ್ಯೇಕ ರೈಲು: ಮಾರ್ಗಗಳ ವಿವರ ಇಲ್ಲಿದೆ
6.5 ಕೋಟಿ ರೂಪಾ ದಂಡ ವಸೂಲಿ
ಸಂಚಾರಿ ನಿಯಮ ಉಲ್ಲಂಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 11 ತಿಂಗಳಿನಲ್ಲಿ ಒಟ್ಟು 6.5 ಕೋಟಿ ರೂಪಾಯಿ ದಂಡವನ್ನು ವಸೂಲಿ ಮಾಡಿದ್ದಾರೆ. ಹೆಲ್ಮೆಟ್ ಹಾಕದೇ ವಾಹನ ಸಂಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಕೋಟಿ 75 ಸಾವಿರ ದಂಡವನ್ನು ವಸೂಲಿ ಮಾಡಲಾಗಿದ್ದು, ಇಲ್ಲಿಯವರೆಗೆ ಒಟ್ಟು 37,846 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎನ್ನುವ ಮಾಹಿತಿ ಹೊರಬಿದ್ದಿದೆ. ಇನ್ನು ಮಧ್ಯಪಾನ ಮಾಡಿ ವಾಹನ ಚಲಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 83 ಲಕ್ಷದ 63 ಸಾವಿರ ರೂಪಾಯಿ ದಂಡ ವಸೂಲಿ, ಅತಿ ವೇಗವಾಗಿ ವಾಹನ ಚಲಾವಣೆ, ನೋ ಪಾರ್ಕಿಂಗ್, ವಾಹನ ಚಲಾವಣೆ ವೇಳೆ ಮೊಬೈಲ್ ಬಳಕೆ, ದ್ವಿಚಕ್ರದಲ್ಲಿ ಮೂವರ ಪ್ರಯಾಣ ಸಂಬಂಧ ಒಟ್ಟು 43,460 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹುಬ್ಬಳ್ಳಿ ಸಂಚಾರಿ ಪೊಲೀಸರು ಮಾಹಿತಿಯನ್ನು ಹೊರಹಾಕಿದ್ದಾರೆ.
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಹೆಚ್ಚಾಗಿ ಯುವಕರೇ ಕಂಡುಬರುತ್ತಾರೆ. ಟ್ರಾಫಿಕ್ ಸಿಗ್ಲಲ್ಗಳಲ್ಲೇ ವೀಲಿಂಗ್ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಇಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಹೀಗೆ ದಂಡ ವಿಧಿಸಿದರೆ ಮತ್ತೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡುತ್ತಲೆ ಇರುತ್ತಾರೆ. ದಂಡದ ಜೊತೆಗೆ ಸೂಕ್ತ ಶಿಕ್ಷೆಯನ್ನು ನೀಡಿದರೆ ಇಂತಹ ಪ್ರಕರಣಗಳು ಕಡಿಮೆ ಆಗುತ್ತವೆ ಎನ್ನುವುದು ಸಾರ್ವಜನಿಕರ ಅಭಿಪ್ರಯವಾಗಿದೆ. ಒಮ್ಮೆ ದಂಡ ಕಟ್ಟಿ ಮತ್ತೆ ಅದೇ ಚಾಳಿಯನ್ನೇ ಮುಂದುವರೆಸುವುದು ಹೆಚ್ಚಾಗಿಬಿಟ್ಟಿದೆ. ಸಂಚಾರಿ ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದರಿಂದ ಇಂತಹ ಪ್ರಕರಣಗಳು ಕಡಿಮೆ ಆಗುತ್ತವೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.