ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ ಪ್ರಕರಣ; ಸ್ಟೇಶನ್ ಮಾಸ್ಟರ್, ಎಎಸ್ ಐ ಅಮಾನತು
ಹುಬ್ಬಳ್ಳಿ, ಅಕ್ಟೋಬರ್ 26: ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.
ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು ಹುಬ್ಬಳ್ಳಿಯಲ್ಲಿ ನಡೆದ ಘಟನೆ ಕುರಿತಂತೆ ಪರಿಶೀಲನೆ ನಡೆಸಲಾಗಿದೆ, ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ" ಎಂದು ತಿಳಿಸಿದರು.
ಕರ್ತವ್ಯ ಲೋಪ ಎಸಗಿದ ಇಬ್ಬರು ಅಧಿಕಾರಿಗಳಾದ ಸ್ಟೇಶನ್ ಮಾಸ್ಟರ್ ಎಸ್.ಎಂ.ವರುಣಕುಮಾರ್, ಆರ್ ಪಿ ಎಫ್ ಎಎಸ್ ಐ ಮಂಜುನಾಥ್ ಅವರನ್ನು ಅಮಾನತ್ತು ಮಾಡಿರುವುದಾಗಿ ತಿಳಿಸಿದರು. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ, ಮೂರು ದಿನಗಳಲ್ಲಿ ಈ ತನಿಖೆ ಮುಗಿಯಬೇಕು ಎಂಬ ಸೂಚನೆ ನೀಡಿದ್ದು, ಮೂರು ದಿನಗಳಲ್ಲಿ ಈ ಘಟನೆ ಕುರಿತು ವರದಿ ಬರಲಿದೆ ಎಂದಿದ್ದಾರೆ.

ಅಲ್ಲದೇ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು, ವಿಮಾನ ನಿಲ್ದಾಣದಲ್ಲಿರುವ ಮಾದರಿಯಂತೆ ರೈಲ್ವೆ ನಿಲ್ದಾಣದಲ್ಲಿಯೂ ಸ್ಕ್ಯಾನಿಂಗ್ ಮಶಿನ್ ಗಳನ್ನ ಅಳವಡಿಸಲಾಗುವುದು, ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಂಥವರ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.












Click it and Unblock the Notifications