• search
 • Live TV
ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಮೇಶ್ ಜಾದವ್ ರಾಜೀನಾಮೆ ಅಂಗೀಕಾರ ಕಷ್ಟ ಸಾಧ್ಯ: ಸಿದ್ದರಾಮಯ್ಯ

By ಹುಬ್ಬಳ್ಳಿ ಪ್ರತಿನಿಧಿ
|
   ಕಾಂಗ್ರೆಸ್ ನಾಯಕ ಉಮೇಶ್ ಜಾಧವ್ ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ | Oneindia kannada

   ಹುಬ್ಬಳ್ಳಿ, ಮಾರ್ಚ್ 05: ಆಪರೇಷನ್ ಕಮಲಕ್ಕೆ ಬಲಿಯಾಗುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಉಮೇಶ್ ಜಾದವ್ ರಾಜೀನಾಮೆ ಅಂಗೀಕಾರವಾಗುವುದು ಕಷ್ಟ ಸಾಧ್ಯ ಎಂದು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

   ಸೀಟು ಹಂಚಿಕೆ: ಒಮ್ಮತಕ್ಕೆ ಬರಲು ಜೆಡಿಎಸ್-ಕಾಂಗ್ರೆಸ್ ವಿಫಲ? ಮುಂದೇನು?

   ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾದವ್ , ನಾಗೇಂದ್ರ ಹಾಗೂ ಮಹೇಶ್ ಕುಮಟಳ್ಳಿ ವಿರುದ್ಧ ಸ್ಪೀಕರ್ ಗೆ ದೂರು ನೀಡಲಾಗಿದೆ. ಈ ಶಾಸಕರ ಪಕ್ಷಾಂತರ ಕಾಯ್ದೆ ವಿರುದ್ಧ ಕ್ರಮ ಜರುಗಿಸಲು ದೂರು ಸಲ್ಲಿಸಲಾಗಿದೆ‌. ದೂರು ಇತ್ಯರ್ಥವಾಗುವವರೆಗೂ ರಾಜೀನಾಮೆ ಅಂಗೀಕಾರವಾಗುವುದು ಕಷ್ಟ ಎಂದು ತಿಳಿಸಿದರು.

   ಜಾರಕಿಹೊಳಿ ಮನೆಗೆ ಅತೃಪ್ತ ಶಾಸಕರ ದೌಡು, ರಾಜೀನಾಮೆ ಮುನ್ಸೂಚನೆಯೇ?

   ಪಕ್ಷಾಂತರ ನಿಷೇಧ ಕಾಯ್ದೆ ಈ ನಾಲ್ಕು ಜನ ಶಾಸಕರಿಗೂ ಅನ್ವಯಿಸುತ್ತದೆ. ಹೀಗಾಗಿ ರಾಜೀನಾಮೆ ಅಂಗೀಕಾರ ಸ್ಪೀಕರ್ ಗೆ ಬಿಟ್ಟ ವಿಚಾರ. ಉಮೇಶ ಜಾದವ್ ವಿಷಯದಲ್ಲಿ 25-30 ಕೋಟಿ ವ್ಯವಹಾರ ನಡೆದಿದೆ ಎಂದು ರಾಜ್ಯದ ಜನ ಮಾತನಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

   ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಲಾಗಿದೆ. ಈಗಾಗಲೇ ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಹಾಲಿ ಸಂಸದರಾಗಿರುವುದರಿಂದ ಮಂಡ್ಯ ಕ್ಷೇತ್ರವನ್ನು ನಾವು ಕೇಳುವ ಪ್ರಶ್ನೆಯೇ ಇಲ್ಲ. ಹೀಗಾಗಿ ಸುಮಲತಾ ಮಂಡ್ಯ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸುವುದು ಅವರಿಗೆ ಬಿಟ್ಟ ವಿಚಾರ ಎಂದು ಸಿದ್ದರಾಮಯ್ಯ ಹೇಳಿದರು.

   ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ, ಮಾ.6 ರಂದು ಬಿಜೆಪಿಗೆ

   ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ ಸ್ಥಾನ ಹಂಚಿಕೆ ಬಗ್ಗೆ ಈಗಾಗಲೇ ಚರ್ಚೆ ನಡೆಯುತ್ತಿದ್ದು, ಇನ್ನು ಮೂರು-ನಾಲ್ಕು ದಿನದಲ್ಲಿ ಅಂತಿಮ ನಿರ್ಧಾರವಾಗಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

   English summary
   Siddaramaiah said that Umesh Jadhav's resignation acceptance can be difficult. Already filed a complaint to speaker against MLA Ramesh Jarakiholi, Umesh Jadhav, Nagendra and Mahesh Kumatalli.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X