ಆಮೆಗತಿಯಲ್ಲಿ ಸಾಗಿದ ಫ್ಲೈ ಓವರ್ ಕಾಮಗಾರಿ: ಹುಬ್ಬಳ್ಳಿಯಲ್ಲಿ ವಾಹನ ಸವಾರರಿಗೆ ನಿತ್ಯವೂ ಕಿರಿಕಿರಿ

ಹುಬ್ಬಳ್ಳಿ, ಜನವರಿ, 04: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಟ್ರಾಪಿಕ್ ಕಿರಕಿರಿಯಿಂದ ದಿನನಿತ್ಯ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಹಾಗೆಯೇ ಮಂದಗತಿಯಲ್ಲಿ ಸಾಗಿದ ಫ್ಲೈ ಓವರ್ ನಿರ್ಮಾಣ ಕಾಮಗಾರಿ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಕಾಮಗಾರಿ ಆರಂಭವಾಗಿ ಒಂದೂವರೆ ವರ್ಷ ಕಳೆದರೂ ಇನ್ನು ಮುಗಿದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಉತ್ತರ ಕರ್ನಾಟಕದ ಬಹುದೊಡ್ಡ ವ್ಯಾಪಾರ ಕೇಂದ್ರವಾಗಿರುವ ಹುಬ್ಬಳ್ಳಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಕೂಡ ಹೆಚ್ಚಾಗುತ್ತಿದೆ. ಟ್ರಾಫಿಕ್ ಕಿರಿಕಿರಿಯಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಟ್ರಾಫಿಕ್ ಕಿರಕಿರಿ ತಪ್ಪಿಸಿ ವಾಹನ ದಟ್ಟಣೆ ಕಡಿಮೆಗೊಳಿಸಲು ಫ್ಲೈ ಓವರ್ ನಿರ್ಮಾಣ ಯೋಜನೆಗೆ ಚಾಲನೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ ಪ್ಲೈಓವರ್ ಯೋಜನೆಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಜನರು ಹಿಡಿಶಾಪ ಹಾಕುವಂತಾಗಿದೆ.

ಆಮೆ ಗತಿಯಲ್ಲಿ ಸಾಗಿದ ಫ್ಲೈ ಓವರ್‌ ಕಾಮಗಾರಿ

ಹುಬ್ಬಳ್ಳಿ ನಗರದಲ್ಲಿ ಚೆನ್ನಮ್ಮ ವೃತ್ತದ ಮೂಲಕ ಹಾದು ಹೋಗುವ ಫ್ಲೈ ಓವರ್ 3.6 ಕಿಲೋ ಮೀಟರ್ ಉದ್ದವಿದ್ದು, ಚನ್ನಮ್ಮ ವೃತ್ತದಿಂದ ಬಾಗಲಕೋಟೆ ರಸ್ತೆಯಲ್ಲಿ ದೇಸಾಯಿ ವೃತ್ತದವರೆಗೆ, ಧಾರವಾಡ ರಸ್ತೆಯಲ್ಲಿ ಹೊಸೂರವರೆಗೆ, ಗದಗ ರಸ್ತೆಯಲ್ಲಿ ಅಂಬೇಡ್ಕರ್ ವೃತ್ತದವರೆಗೆ ಒಟ್ಟು 3.6 ಕಿ.ಮೀ. ನಾಲ್ಕು ಪಥದ ಫ್ಲೈಓವರ್ ನಿರ್ಮಾಣವಾಗಲಿದೆ. ಮೂರು ಹಂತದ ಯೋಜನೆಗೆ 1,242 ಕೋಟಿ ವೆಚ್ಚದ ಡಿಪಿಆರ್ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಯೋಜನೆ ವೆಚ್ಚ ಹೆಚ್ಚಾಗಿದೆ ಎಂಬ ಕೇಂದ್ರದ ಸೂಚನೆಯ ಹಿನ್ನೆಲೆಯಲ್ಲಿ ಮೂರು ಹಂತಗಳಾಗಿ ವಿಂಗಡಿಸಿ ಮೊದಲ ಹಂತದ 300 ಕೋಟಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಗೆ 36 ತಿಂಗಳು ಕಾಲಮಿತಿ ಕೊಟ್ಟಿದ್ದು, ಜೂನ್ 2024ಕ್ಕೆ ಪೂರ್ಣಗೊಳ್ಳಬೇಕಿರುವ ಕಾಮಗಾರಿ ಕೇವಲ 33% ಪೂರ್ಣಗೊಂಡಿದೆ. ಮತ್ತಷ್ಟು ಕಾಮಗಾರಿ ಚುರುಕುಗೊಳ್ಳಬೇಕಿದೆ.

Unfinished fly over work in Hubballi: Motorists outrage

ಫ್ಲೈ ಓವರ್ ಕಾಮಗಾರಿ ವಿಳಂಬ, ಜನಾಕ್ರೋಶ

ಇನ್ನು ಅವಳಿ ನಗರದ ಜನರು ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಅನುಭವಿಸುತ್ತಿದ್ದು, ಫ್ಲೈ ಓವರ್ ವಿಳಂಬದಿಂದ ಜನರು ಹೈರಾಣಾಗಿದ್ದಾರೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಕೆಲಸ ಬೇಗ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಫ್ಲೈ ಓವರ್ ಕಾಮಗಾರಿ ಅವಧಿಯಲ್ಲಿ ಅರ್ಧ ಮುಗಿದಿದ್ದರೂ ಕೂಡ ಇನ್ನು 50% ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಸಾಕಷ್ಟು ವಿರೋಧದ ನಡುವೆಯೂ ತಲೆ ಎತ್ತುತ್ತಿರುವ ಫ್ಲೈ ಓವರ್ ಆದಷ್ಟು ಬೇಗ ಸಾರ್ವಜನಿಕರಿಗೆ ಮುಕ್ತವಾಗಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+