ಯಡಿಯೂರಪ್ಪ ವಿರುದ್ಧ ತಿರುಗಿದ ರೈತರ ಆಕ್ರೋಶ

Posted By: Nayana
Subscribe to Oneindia Kannada

ಹುಬ್ಬಳ್ಳಿ, ಡಿಸೆಂಬರ್ 27 : ಮಹಾದಾಯಿ ನೀರಿಗಾಗಿ ರೈತ ಸಂಘಟನೆಗಳು ಬುಧವಾರ ನೀಡಿರುವ ಉತ್ತರ ಕರ್ನಾಟಕ ಬಂದ್ ಗೆ ನಸುಕಿನಿಂದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿ ಹೋರಾಟಗಾರರು ಯಡಿಯೂರಪ್ಪ ಅಣುಕು ಶವಯಾತ್ರೆ ನಡೆಸಿದರು.

ಗದಗ ಹಾಗೂ ಧಾರವಾಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲೂ ಟೈರಿಗೆ ಬೆಂಕಿ ಹಚ್ಚಿ ವಾಹನ ಸಂಚಾರಗಳು ಆರಂಭಗೊಳ್ಳದಂತೆ ರೈತರು ತಡೆಯೊಡ್ಡಿದ್ದಾರೆ.

ಮಹದಾಯಿಗಾಗಿ ಉತ್ತರ ಕರ್ನಾಟಕದಲ್ಲಿ ಭುಗಿಲೆದ್ದ ಆಕ್ರೋಶ

ಡಿಸೆಂಬರ್ ೧೮ರ ವೇಳೆಗೆ ಮಹಾದಾಯಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ ಬೆನ್ನಲ್ಲೇ ದೆಹಲಿಯಲ್ಲಿ ಇತ್ತೀಚೆಗೆ ಮಾತುಕತೆ ನಡೆದಿತ್ತು ಆದರೆಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಮಹಾದಾಯಿ ನದಿ ನೀರಿನ ವಿಚಾರವಾಗಿ ಯಾವುದೇ ಸ್ಪಷ್ಟನೆ ಭರವಸೆ ನೀಡದ ಹಿನ್ನೆಲೆಯಲ್ಲಿ ರೈತರು ರೊಚ್ಚಿಗೆದ್ದಿದ್ದಾರೆ.

Uttara Karnataka bandh hits normal life

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪರಿವರ್ತನಾ ಮೆರವಣಿಗೆ ವೇಳೆ ಹುಬ್ಬಳ್ಳಿಯಲ್ಲಿ ಮಹಾದಾಯಿ ನೀರಿನ ವಿವಾದ ಇತ್ಯರ್ಥವನ್ನು ಘೋಷಿಸುವ ನಂಬಿಕೆ ಇತ್ತು. ಏಕಾಏಕಿ ಬಿಜೆಪಿ ಪ್ರಯತ್ನ ಫಲಿಸದ ಕಾರಣದಿಂದಾಗಿ ರೈತರು ರೊಚ್ಚಿಗೆದ್ದಿದ್ದಾರೆ, ಮತ್ತೊಂದೆಡೆ ಉತ್ತರ ಕರ್ನಾಟಕ ಬಂದ್ ಕಾರಣದಿಂದಾಗಿ, ಕರ್ನಾಟಕ, ಗೋವಾ ನಡುವೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಬೆಳಗಾವಿ, ಕಾರವಾರ ಜಿಲ್ಲೆಗಳಿಂದ ಗೋವಾಕ್ಕೆ ತೆರಳುವ, ಗೋವಾದಿಂದ ರಾಜ್ಯಕ್ಕೆ ಬರುವ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಹುಬ್ಬಳ್ಳಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ, ಬಸ್ ಗಳ ಗಾಳಿ ಬಿಟ್ಟು ಬಸ್ ತಡೆದು ಹೋರಾಟ ಮಾಡಿದರು. ಹೋಟೆಲ್ ಗಳಿಗೆ ಮುತ್ತಿಗೆ ಹಾಕಿ, ತಿಂಡಿಗಳನ್ನು ಹೊರಗಿಟ್ಟು, ಸಾರ್ವಜನಿಕರಿಗೆ ವಿತರಿಸಿ ರೈತರು ಪ್ರತಿಭಟನೆ ನಡೆಸಿದರು.

ಮಹದಾಯಿ ನೀರಿನ ಚಿಂತೆ ಬಿಟ್ಟುಬಿಡಿ ಎಂದಿದ್ದ ಬಿಎಸ್ವೈ ಈಗ ಯು ಟರ್ನ್

ಒಂದೆಡೆ ರೈತ ಮುಖಂಡರು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ಮತ್ತು ಮತ್ತಿತರೆಡೆ ಈಗಾಗಲೇ ಹೋರಾಟ ಆರಂಭಿಸಿದರೆ ಇನ್ನೊಂದೆಡೆ ಉತ್ತರ ಕರ್ನಾಟಕ, ಗದಗ , ಧಾರವಾಡ, ಹಾವೇರಿ, ಬಾಗಲಕೋಟೆ, ಬೆಳಗಾವಿ ಮತ್ತಿತರೆ ಜಿಲ್ಲೆಗಳಲ್ಲಿ ನಸುಕಿನಿಂದಲೇ ರಸ್ತೆಗಿಳಿದು ರೈತರು ಪ್ರತಿಭಟನೆ ಆರಂಭಿಸಿದ್ದಾರೆ.

ಗದಗದ ನರಗುಂದ ಬಸ್ ನಿಲ್ದಾಣ ಮುಂದೆ ವಿವಿಧ ಕನ್ನಡ ಪರ ಸಂಘಟನೆಗಳ ಸದಸ್ಯರು ಹಾಗೂ ರೈತರು ಟೈರ್ ಗಳಿಗೆ ಬೆಂಕಿ ಹಚ್ಚಿ ಬೆಳಗ್ಗೆಯಿಂದಲೇ ಯಾವುದೇ ವಾಹನಗಳು ಓಡಾಡದಂತೆ ತಡೆ ಒಡ್ಡಿದರು. ಧಾರವಾಡ, ಗದಗ ಜಿಲ್ಲೆಗಳ 6 ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಹೀಗಾಗಿ ಬೆಳಗ್ಗೆ ಇಂದಲೇ ವಾಹನ ಸಂಚಾರ ವಿರಳವಾಗಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಕೂಡ ಬೆಳಗ್ಗೆ 6 ಗಂಟೆಯಿಂದಲೇ ಕನ್ನಡ ಪರ ಮತ್ತು ರೈತ ಸಂಘಟನೆಯ ಮುಖಂಡರು ಪ್ರತಿಭಟನೆ ಆರಂಭಿಸಿದ್ದರಿಂದ ಹುಬ್ಬಳ್ಳಿ ಹಾಗೂ ಧಾರವಾಡ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಅಲ್ಲದೇ ಅಂಗಡಿ ಮುಂಗಟ್ಟುಗಳು ಕೂಡ ಈ ವರೆಗೆ ಆರಂಭಗೊಂಡಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Many pro Kannada and farmers organisations have staged Rasta rokho early hours of Wednesday in many places of Gadag and Dharwad urging solve Mhadayi water dispute.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ