ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Vande Bharat Train; ಹುಬ್ಬಳ್ಳಿ - ಬೆಂಗಳೂರು ನಡುವೆ ಓಡಲಿದೆ ವಂದೇ ಭಾರತ ರೈಲು, ಸಿದ್ಧತೆ ವಿವರ ಇಲ್ಲಿದೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಡಿಸೆಂಬರ್‌, 07: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆಯು ಈಗ ಮತ್ತೊಂದು ಸಾರ್ವಜನಿಕ ಸೇವೆಯೊಂದಿಗೆ ಗುರುತಿಸಿಕೊಳ್ಳಲಿದೆ. ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿ - ಬೆಂಗಳೂರು ಮಧ್ಯೆ 2023ರ ಮಾರ್ಚ್‌ನಲ್ಲಿ ಸಂಚಾರ ಪ್ರಾರಂಭಿಸುವ ಸಾಧ್ಯತೆ ಇದ್ದು, ನೈಋತ್ಯ ರೈಲ್ವೆ ವಲಯದಿಂದ ಕೆಲಸ ಭರದಿಂದ ಸಾಗಿದೆ.

ಈಗಾಗಲೇ ಚೆನ್ನೈ-ಬೆಂಗಳೂರು ಹಾಗೂ ಮೈಸೂರು ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ ಪ್ರಾರಂಭಿಸಿದೆ. ಹುಬ್ಬಳ್ಳಿ - ಬೆಂಗಳೂರು ಮಧ್ಯದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಧಾರವಾಡದವರೆಗೆ ವಿಸ್ತರಿಸುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪಲ್ಹಾದ ಜೋಶಿ ಅವರು ಮನವಿ ಮಾಡಿದ್ದು, ಈ ರೈಲು ಧಾರವಾಡದಿಂದ ಸಂಚಾರ ಪಾರಂಭಿಸುವ ಸಾಧ್ಯತೆಯೂ ಇದೆ.

Vande Bharat Train; ಬೆಂಗಳೂರು-ಹುಬ್ಬಳ್ಳಿ ವೇಳಾಪಟ್ಟಿ ಕೇಳಿದ ಮಂಡಳಿVande Bharat Train; ಬೆಂಗಳೂರು-ಹುಬ್ಬಳ್ಳಿ ವೇಳಾಪಟ್ಟಿ ಕೇಳಿದ ಮಂಡಳಿ

ಇನ್ನು ವಂದೇ ಭಾರತ್‌ ರೈಲಿನಲ್ಲಿ ಸಂಚರಿಸುವುದೆಂದರೆ ವಿಮಾನದಲ್ಲಿ ಸಂಚರಿಸಿದ ಅನುಭವವಾಗುತ್ತದೆ. ವೇಗ, ಸುರಕ್ಷತೆ ಮತ್ತು ಅತ್ಯಾಧುನಿಕ ಸೇವೆ ಈ ರೈಲಿನಲ್ಲಿ ದೊರೆಯಲಿವೆ. ವಿಮಾನದಲ್ಲಿ ಸಿಗುವ ಎಲ್ಲ ಸೌಲಭ್ಯಗಳು ಈ ರೈಲಿನಲ್ಲಿ ಸಿಗಲಿವೆ. ಪ್ರತಿ ಸೀಟಿಗೆ ಮೊಬೈಲ್‌ ಚಾರ್ಜರ್, ತಿಂಡಿ ಸವಿಯಲು ಟೇಬಲ್ ಇರಲಿವೆ, ಎಲ್ಲ ಬೋಗಿಗಳಿಗೆ ಆಟೋಮೆಟಿಕ್ ಬಾಗಿಲು, ಪ್ರಯಾಣಿಕರಿಗೆ ಆಡಿಯೋ ಮೂಲಕ ಮಾಹಿತಿ ನೀಡುವ ಸೌಲಭ್ಯ, ಮನರಂಜನೆಗಾಗಿ ವೈಫೈ ಸೌಲಭ್ಯ, ಸುಖಕರ ಆಸನಗಳು, ಬಯೋವ್ಯಾಕ್ಯೂಮ್ ಹೊಂದಿದ ಶೌಚಗೃಹ ಇರಲಿವೆ.

ವಂದೇ ಭಾರತ್‌ ರೈಲಿನ ಬೋಗಿಗಳ ವಿವರ

ವಂದೇ ಭಾರತ್‌ ರೈಲಿನ ಬೋಗಿಗಳ ವಿವರ

ಪ್ರತಿ ಬೋಗಿಯಲ್ಲಿ ಪ್ರಯಾಣಿಕರು ಇರುವ ಸ್ಥಳದಲ್ಲಿಯೇ ತಿಂಡಿ, ಊಟ ಪೂರೈಸಲಾಗುತ್ತದೆ. 16 ಎಸಿ ಬೋಗಿಗಳಲ್ಲಿ 2 ಎಕ್ಸಿಕ್ಯೂಟಿವ್ ಕ್ಲಾಸ್ ಬೋಗಿಗಳು ಇರಲಿವೆ. 1,128 ತಿಂಗಳ ಪ್ರಯಾಣಿಕರು ಏಕಕಾಲಕ್ಕೆ ಪ್ರಯಾಣಿಸಬಹುದು. ಅಂಗವಿಕಲ ಪ್ರಯಾಣಿಕರಿಗೂ ಸಾಕಷ್ಟು ಸೌಲಭ್ಯಗಳು ಇವೆ. ರೈಲು ಕಡಿಮೆ ನಿಲುಗಡೆಗಳನ್ನು ಹೊಂದಿದ್ದು, ಪ್ರಮುಖ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ಆಗಲಿದೆ.

ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚಾರ

ಬೆಂಗಳೂರು-ಹುಬ್ಬಳ್ಳಿ ನಡುವೆ ಸಂಚಾರ

ಇನ್ನು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಸಂಚಾರ ನಡೆಸಲು ರೈಲ್ವೆ ಇಲಾಖೆ ಸಿದ್ದತೆ ನಡೆಸಿತ್ತು. ಬೆಂಗಳೂರು-ಹುಬ್ಬಳ್ಳಿ ನಡುವೆ ರಾಜ್ಯದ ಎರಡನೇ ರೈಲು ಸಂಚಾರ ನಡೆಸಲಿದೆ. ಈ ಮೂಲಕ ಉತ್ತರ ಕರ್ನಾಟಕದ ಜನರಿಗೆ ಶುಭಸುದ್ದಿ ಸಿಕ್ಕಿತ್ತು. ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸಬೇಕು ಎಂಬ ಬೇಡಿಕೆ ಇಡಲಾಗಿತ್ತು. ಧಾರವಾಡ ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಕುರಿತು ಒತ್ತಾಯಿಸಿದ್ದರು. ಅಲ್ಲದೇ ಧಾರವಾಡದ ತನಕ ರೈಲು ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದ್ದರು.

2ನೇ ವಂದೇ ಭಾರತ್ ಸಂಚಾರಕ್ಕೆ ನಡೆದಿದ್ದ ಪ್ಲಾನ್

2ನೇ ವಂದೇ ಭಾರತ್ ಸಂಚಾರಕ್ಕೆ ನಡೆದಿದ್ದ ಪ್ಲಾನ್

ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ರೈಲು ಸಂಚಾರ ಪ್ರಾರಂಭವಾದ ಬಳಿಕ ಕರ್ನಾಟಕದ ಮತ್ತೊಂದು ರೈಲಿನ ಸಂಚಾರ ಯಾವಾಗ? ಎಂಬ ದಿನಾಂಕ ತಿಳಿಯಲಿದೆ. ರಾಜ್ಯದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಆದ್ದರಿಂದ, ಹೊಸ ವರ್ಷದ ಕೊಡುಗೆಯಾಗಿ ಕೇಂದ್ರ ಸರ್ಕಾರ ಮತ್ತೊಂದು ರೈಲು ಘೋಷಣೆ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ರೈಲ್ವೆ ಮಂಡಳಿ ನೈಋತ್ಯ ರೈಲ್ವೆಗೆ ಪತ್ರವೊಂದನ್ನು ಬರೆದಿದೆ. ಬೆಂಗಳೂರು-ಹುಬ್ಬಳ್ಳಿ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ವೇಳಾಪಟ್ಟಿ ನೀಡುವಂತೆ ಸೂಚನೆ ನೀಡಿದೆ. ನೈಋತ್ಯ ವಲಯ ಈಗಾಗಲೇ ವೇಳಾಪಟ್ಟಿಯನ್ನು ಕಳುಹಿಸಿಕೊಟ್ಟಿತ್ತು. ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಇದನ್ನು ಖಚಿತಪಡಿಸಿದ್ದರು. ಉಭಯ ನಗರಗಳ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾದರೆ ರಾಜಧಾನಿ ಬೆಂಗಳೂರು ಮತ್ತು ಉತ್ತರ ಕರ್ನಾಟಕದ ನಡುವಿನ ಸಂಚಾರಕ್ಕೆ ಸಹಾಯಕವಾಗಲಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳು ಹೇಳಿದ್ದೇನು?

ನೈಋತ್ಯ ರೈಲ್ವೆ ಅಧಿಕಾರಿಗಳು ಹೇಳಿದ್ದೇನು?

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವೆ ದರ್ಶನಾ ಜರ್ದೋಶ್‌ ರಾಜ್ಯದ ಸಂಸದರೊಂದಿಗೆ ಕೆಲವು ದಿನಗಳ ಹಿಂದೆ ಸಭೆ ನಡೆಸಿದ್ದರು. ಆಗ ಬೆಂಗಳೂರು-ಹುಬ್ಬಳ್ಳಿ ನಡುವಿನ ವಂದೇ ಭಾರತ್‌ ರೈಲು ಬಗ್ಗೆಯೂ ಚರ್ಚೆ ನಡೆಯಿತು. ಸಂಸದರ ಮನವಿಗಳನ್ನು ಅಧಿಕಾರಿಗಳು ಸಹ ಪರಿಶೀಲಿಸುತ್ತಿದ್ದಾರೆ. ಬೆಂಗಳೂರು-ಹುಬ್ಬಳ್ಳಿ ನಡುವೆ ಹಲವು ಕಡೆ ಜೋಡಿ ಹಳಿ, ವಿದ್ಯುದೀಕರಣ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿ ಪೂರ್ಣಗೊಂಡ ಬಳಿಕ ಮಾತ್ರ ವಂದೇ ಭಾರತ್ ರೈಲು ಓಡಿಸಲು ಸಾಧ್ಯ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಹೇಳಿದ್ದರು.

English summary
Vande Bharat Express train between Hubballi and Bangaluru is likely to start running in March 2023, work has been in from South Western Railway sector. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X