ಹುಬ್ಬಳ್ಳಿ: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನ
ಹುಬ್ಬಳ್ಳಿ, ಅಕ್ಟೋಬರ್ 31 : ಹುಬ್ಬಳ್ಳಿ ಹೊರವಲಯದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಜೀವ ದಹನವಾಗಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ತಾರಿಹಾಳ್ ಕೈಗಾರಿಕಾ ಪ್ರದೇಶದ ಬಳಿ ಲಾರಿ ಹಾಗೂ ಬೈಕ್ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡು ಲಾರಿ ಹಾಗೂ ಬೈಕ್ ಸುಟ್ಟುಹೋಗಿವೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯ ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications