ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ: ಶೆಟ್ಟರ್

ಹುಬ್ಬಳ್ಳಿ, ಡಿಸೆಂಬರ್ 30: ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ನಾಟಕ ಮಾಡುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿಜೆಪಿ ರಾಜ್ಯ ಮುಖಂಡ ಜಗದೀಶ ಶೆಟ್ಟರ್ ಆರೋಪಿಸಿದರು.

ನಗರದಲ್ಲಿ ಆಯೋಜಿಸಿರುವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಸುಮ್ಮನೆ ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

Vidhana Soudha Diamond Jubilee Celebration

ಗೋವಾ ಮುಖ್ಯಮಂತ್ರಿ ಮನವೊಲಿಸುವಂತೆ ಸರ್ವಪಕ್ಷಗಳ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದರು. ಆ ಕೆಲಸವನ್ನು ಬಿಜೆಪಿ ಮಾಡಿ ಅವರಿಂದ ಪತ್ರ ಸಹ ತಂದಿದೆ. ಪತ್ರವನ್ನು ನ್ಯಾಯಮಂಡಳಿ ಮುಂದೆ ಹಾಜರುಪಡಿಸಬೇಕು ಅದನ್ನು ಬಿಟ್ಟು ಇಲ್ಲದ ಟೀಕೆಗಳಲ್ಲಿ ಕಾಲಹರಣ ಮಾಡುತ್ತಿದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರ ಮೇಲೆ ಹರಿಹಾಯ್ದ ಅವರು 'ಅವರು ಗೋವಾ ವಿರೋಧ ಪಕ್ಷ ಕಾಂಗ್ರೆಸ್ ನಾಯಕರ ಮನವೊಲಿಸಿ ಪತ್ರ ತರಬೇಕಾಗಿತ್ತು‌. ಯಾಕೆ ತಂದಿಲ್ಲ' ಎಂದು ಪ್ರಶ್ನಿಸಿದರು.

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ವಿನಾ ಕಾರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+