ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲು ಬೆಳಗಾವಿ ತನಕ ವಿಸ್ತರಣೆ

ಹುಬ್ಬಳ್ಳಿ, ಅಕ್ಟೋಬರ್ 14 : ವಿಶ್ವಮಾನವ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ಮೈಸೂರು-ಹುಬ್ಬಳ್ಳಿ ನಡುವೆ ಈ ರೈಲು ಸಂಚಾರ ನಡೆಸುತ್ತಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ಮತ್ತು ಬೆಳಗಾವಿ ಸಂಸದ ಸುರೇಶ್ ಅಂಗಡಿ ಈ ಕುರಿತು ಮಾಹಿತಿ ನೀಡಿದ್ದಾರೆ. " ಬೆಳಗಾವಿ ಜನರ ಬಹುದಿನದ ಬೇಡಿಕೆ ಇದ್ದು ವಿಶ್ವಮಾನವ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲಾಗುತ್ತದೆ" ಎಂದರು.

ಹರಿಹರ-ಕೊಟ್ಟೂರು ನಡುವೆ ಸಂಚಾರ ನಡೆಸುವ ರೈಲನ್ನು ಹೊಸಪೇಟೆ ತನಕ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 17ರಂದು ರೈಲು ಸಂಚಾರಕ್ಕೆ ಹಸಿರು ನಿಶಾನೆಯನ್ನು ತೋರಿಸಲಾಗುತ್ತದೆ.

Vishwamanava Express Train

ಹುಬ್ಬಳ್ಳಿ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲಿಗೆ ರಾಯಭಾಗದಲ್ಲಿ ನಿಲುಗಡೆ ನೀಡಬೇಕು ಎಂದು ಜನರು ಬೇಡಿಕೆ ಇಟ್ಟಿದ್ದರು. ರೈಲ್ವೆ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದ್ದು, ರಾಯಭಾಗದಲ್ಲಿ ರೈಲು ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.

ಯಶವಂತಪುರ-ವಿಜಯಪುರ ನಡುವೆ ಹೊಸ ರೈಲು ಓಡಿಸಲು ಇಲಾಖೆ ತೀರ್ಮಾನಿಸಿದೆ. ರೈಲಿನ ಮಾರ್ಗ, ನಿಲುಗಡೆ, ಸಮಯ ಕೆಲವೇ ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೀಪಾವಳಿ ಪ್ರಯುಕ್ತ ನೈಋತ್ಯ ರೈಲ್ವೆ ಅಕ್ಟೋಬರ್ 25ರಂದು ಮೈಸೂರು-ವಿಜಯಪುರ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕಾರವಾರಕ್ಕೆ ಸಹ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+