ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲು ಬೆಳಗಾವಿ ತನಕ ವಿಸ್ತರಣೆ

|
Google Oneindia Kannada News

ಹುಬ್ಬಳ್ಳಿ, ಅಕ್ಟೋಬರ್ 14 : ವಿಶ್ವಮಾನವ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ಮೈಸೂರು-ಹುಬ್ಬಳ್ಳಿ ನಡುವೆ ಈ ರೈಲು ಸಂಚಾರ ನಡೆಸುತ್ತಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ಮತ್ತು ಬೆಳಗಾವಿ ಸಂಸದ ಸುರೇಶ್ ಅಂಗಡಿ ಈ ಕುರಿತು ಮಾಹಿತಿ ನೀಡಿದ್ದಾರೆ. " ಬೆಳಗಾವಿ ಜನರ ಬಹುದಿನದ ಬೇಡಿಕೆ ಇದ್ದು ವಿಶ್ವಮಾನವ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಲಾಗುತ್ತದೆ" ಎಂದರು.

ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ಸಮಯ ಪರಿಷ್ಕರಣೆ ಶಿವಮೊಗ್ಗ-ಬೆಂಗಳೂರು ಶತಾಬ್ದಿ ರೈಲು ಸಮಯ ಪರಿಷ್ಕರಣೆ

ಹರಿಹರ-ಕೊಟ್ಟೂರು ನಡುವೆ ಸಂಚಾರ ನಡೆಸುವ ರೈಲನ್ನು ಹೊಸಪೇಟೆ ತನಕ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ. ಅಕ್ಟೋಬರ್ 17ರಂದು ರೈಲು ಸಂಚಾರಕ್ಕೆ ಹಸಿರು ನಿಶಾನೆಯನ್ನು ತೋರಿಸಲಾಗುತ್ತದೆ.

ದೀಪಾವಳಿ; ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು ದೀಪಾವಳಿ; ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು

Vishwamanava Express Train

ಹುಬ್ಬಳ್ಳಿ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲಿಗೆ ರಾಯಭಾಗದಲ್ಲಿ ನಿಲುಗಡೆ ನೀಡಬೇಕು ಎಂದು ಜನರು ಬೇಡಿಕೆ ಇಟ್ಟಿದ್ದರು. ರೈಲ್ವೆ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದ್ದು, ರಾಯಭಾಗದಲ್ಲಿ ರೈಲು ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.

ಕೊಚ್ಚುವೆಲಿ-ಬೆಂಗಳೂರು ರೈಲು ಮೈಸೂರು ತನಕ ವಿಸ್ತರಣೆ ಕೊಚ್ಚುವೆಲಿ-ಬೆಂಗಳೂರು ರೈಲು ಮೈಸೂರು ತನಕ ವಿಸ್ತರಣೆ

ಯಶವಂತಪುರ-ವಿಜಯಪುರ ನಡುವೆ ಹೊಸ ರೈಲು ಓಡಿಸಲು ಇಲಾಖೆ ತೀರ್ಮಾನಿಸಿದೆ. ರೈಲಿನ ಮಾರ್ಗ, ನಿಲುಗಡೆ, ಸಮಯ ಕೆಲವೇ ದಿನಗಳಲ್ಲಿ ಅಂತಿಮಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೀಪಾವಳಿ ಪ್ರಯುಕ್ತ ನೈಋತ್ಯ ರೈಲ್ವೆ ಅಕ್ಟೋಬರ್ 25ರಂದು ಮೈಸೂರು-ವಿಜಯಪುರ ನಡುವೆ ವಿಶೇಷ ರೈಲನ್ನು ಓಡಿಸಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕಾರವಾರಕ್ಕೆ ಸಹ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ.

English summary
Minister for railways Suresh Angadi said that Mysuru-Hubballi Vishwamanava express train will extended till Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X