ಪ್ರಜೆಗಳು ಕರ್ತವ್ಯ ಅರಿತು ಮತ ಚಲಾವಣೆ ಮಾಡಲಿ: ಹುಬ್ಬಳ್ಳಿಯಲ್ಲಿ ವಿಶ್ವೇಶ್ವರ ಕಾಗೇರಿ ಮನವಿ
ಹುಬ್ಬಳ್ಳಿ, ನವೆಂಬರ್, 16: ಪ್ರತಿಯೊಬ್ಬರಿಗೂ ಸಂವಿಧಾನದ ಅರಿವು ಬಹಳ ಮುಖ್ಯವಾಗಿದೆ. ದೇಶದಲ್ಲಿ ಬಡತನ, ನಿರುದ್ಯೋಗ, ಭಯೋತ್ಪಾದನೆ ಸೇರಿದಂತೆ ವಿವಿಧ ಸಮಸ್ಯೆಗಳು ಕಾಡುತ್ತಿವೆ. ಯಾವ ಕ್ಷೇತ್ರವೂ ಸಹ ಮಾದರಿ ಎನ್ನುವ ರೀತಿಯಲ್ಲಿ ಇಲ್ಲವಾಗಿವೆ ಎಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹುಬ್ಬಳ್ಳಿಯಲ್ಲಿ ಹೇಳಿದರು. ಚುನಾವಣಾ ವ್ಯವಸ್ಥೆಯಲ್ಲಿನ ಸುಧಾರಣೆಗಳ ಅಗತ್ಯತೆ ವಿಷಯದ ಕುರಿತು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಬಯೋಟೆಕ್ ಹಾಲ್‌ನಲ್ಲಿ ಮಾತನಾಡಿದ ಅವರು, ಪ್ರಸಕ್ತ ಸ್ಥಿತಿಗೆ ಕಾರಣಕರ್ತರು ಯಾರು ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಜೆಗಳು ಕರ್ತವ್ಯವನ್ನು ಅರಿತು ಮತ ಚಲಾವಣೆ ಮಾಡಬೇಕು. ಮುಕ್ತ ಮನಸ್ಸಿನಿಂದ ಮತದಾನ ಮಾಡಬೇಕಿದೆ. ನಮಗೆ ನಾವೇ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸ್ವಾತಂತ್ರ್ಯ ಇತಿಹಾಸವನ್ನು ನಾವು ಅರಿತುಕೊಳ್ಳಬೇಕೆಂದ ಅವರು, ನಾವು ತ್ಯಾಗ ಬಲಿದಾನ ಮಾಡಿದ ಹೋರಾಟಗಾರರ ಸ್ಮರಣೆಯನ್ನು ಮಾಡಿಕೊಳ್ಳಬೇಕು. ಗಾಂಧಿ, ಸುಭಾಷ್ ಚಂದ್ರ ಬೋಸ್ ಸೇರಿದಂತೆ ಇನ್ನಿತರ ಸ್ವಾತಂತ್ರ್ಯ ಸೇನಾನಿಗಳ ತ್ಯಾಗ ಬಲಿದಾನವನ್ನು ನೆನೆಯಬೇಕಾಗಿದೆ. ಇಂದು ಆಹಾರ ಸ್ವಾವಲಂಬನೆಯಲ್ಲಿ ಸಾಧಿಸಿದ್ದೇವೆ. 295 ಕೋಟಿ ತಲಾ ಆದಾಯವನ್ನು ಹೊಂದಿದ್ದೇವೆ. ಚಂದ್ರಯಾನದ ಮೂಲಕ ಭಾರತೀಯ ವಿಜ್ಞಾನಿಗಳು ಸಾಧನೆ ಮಾಡಿದ್ದು, ಜಗತ್ತಿನ ಬೇರೆ ಬೇರೆ ದೇಶದವರು ಭಾರತದಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದೆ ಎಂಬುದನ್ನು ಅರಿತು ಇಲ್ಲಿಗೆ ಬರುತ್ತಿದ್ದಾರೆ. ಭಾರತಲ್ಲಿನ ಕೋವಿಡ್ ಕಾಲಘಟ್ಟದಲ್ಲಿ ಆರೋಗ್ಯ ಕ್ಷೇತ್ರ ಮಾದರಿಯಾಗಿದೆ ಎಂದರು.

ಇಲ್ಲಿನ ನೆನಪುಗಳು ಹಸಿರಾಗಿವೆ- ಕಾಗೇರಿ
ನಾನು ಧಾರವಾಡದಲ್ಲಿ ಓದಿದವನಾಗಿದ್ದೇನೆ. ಹುಬ್ಬಳ್ಳಿಯ ಜನಜೀವನ, ವಿಶೇಷತೆಗಳು ನನಗೆ ಹಸಿರಾದ ನೆನಪುಗಳನ್ನು ಕಟ್ಟಿಕೊಡುತ್ತವೆ. ಇಲ್ಲಿನ ಚಟುವಟಿಕೆಗಳನ್ನು ಮೆಲುಕು ಹಾಕಿದಾಗ ಇವೆಲ್ಲವನ್ನೂ ನಾವು ಮಾಡಿದ್ದೇವಾ ಎನ್ನುವ ಪ್ರಶ್ನೆ ಉದ್ಭವಿಸುತ್ತವೆ. ಭೀಮಸೇನ ಜೋಶಿ, ಗಂಗೂಬಾಯಿ ಹಾನಗಲ್ ಸಂಗೀತದ ಮೇರು ಪರ್ವತವಾಗಿದ್ದಾರೆ. ಧಾರವಾಡ ಪೇಡ, ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಸೇರಿದಂತೆ ಅನೇಕ ಸ್ಥಳಗಳು ಹೆಸರುವಾಸಿಯಾಗಿವೆ. ಬೆಂಗಳೂರನ್ನು ಮೀರಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಬೆಳೆಯುತ್ತಿದೆ. ಚುನಾವಣೆಯ ಬಗ್ಗೆ ನಾಡಿನ ಜನತೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅನೇಕ ಜಿಲ್ಲೆಗಳಲ್ಲಿ ಸಂವಾದ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.

ತಿರಂಗಾ ಹಾರಿಸುವ ಮೂಲಕ ಸ್ವಾತಂತ್ರ್ಯೋತ್ಸವ
ಗುರುದತ್ತ ಹೆಗಡೆ ಅವರು ಅತ್ಯುತ್ತಮ ದಕ್ಷ ಐಎಎಸ್ ಅಧಿಕಾರಿಯಾಗಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವವನ್ನು ಮನೆ ಮನೆಯಲ್ಲಿ ತಿರಂಗಾ ಹಾರಿಸುವ ಮೂಲಕ ಆಚರಣೆ ಮಾಡಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ನಮ್ಮ ನಡುವೆ ಇದ್ದಾರೆ. ಬ್ರಿಟಿಷರು, ಪೋರ್ಚುಗೀಸರು, ಡಚ್ಚರು, ಮೊಘಲರು ನಮ್ಮನ್ನು ಆಳಿದ್ದಾರೆ. ಶತಮಾನಗಳ ಕಾಲ ಪರಕೀಯರು ಆಳ್ವಿಕೆ ನಡೆಸಿದ್ದಾರೆ. ವಿದೇಶಿಗರ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಹೋರಾಟಗಾರರ ಸ್ಮರಣೆಯನ್ನು ನಾವು ಮಾಡಿಕೊಳ್ಳಬೇಕು. ಬ್ರಿಟೀಷರು ಭಾರತೀಯರ ಹೋರಾಟದ ಕಿಚ್ಚನ್ನು ಎದುರಿಸದೇ ನಮಗೆ ಸ್ವಾತಂತ್ರ್ಯವನ್ನು ನೀಡಿದರು ಎಂದರು.

30 ಕೋಟಿ ಜನಸಂಖ್ಯೆ ಇದ್ದಾಗ ಆದಾಯ ಎಷ್ಟು?
ಇತಿಹಾಸದಲ್ಲಿ ನಾವು ಛತ್ರಪತಿ ಶಿವಾಜಿ ಮತ್ತು ಸ್ವಾಮಿ ವಿವೇಕಾನಂದ ಅವರನ್ನು ಮರೆಯಬಾರದು. ಇವರು ಜಗತ್ತಿಗೆ ಜ್ಞಾನವನ್ನು ತಿಳಿಸಿಕೊಟ್ಟರು. ವಿದೇಶದಿಂದ ಆಹಾರವನ್ನು ತರಿಸಿಕೊಳ್ಳುತ್ತಿದ್ದೆವು. ಇಂದು ಆಹಾರ ಸ್ವಾವಲಂಬನೆ, ಆಹಾರ ಭದ್ರತೆಯನ್ನು ಸಾಧಿಸಿದ್ದೇವೆ. 30 ಕೋಟಿ ಜನಸಂಖ್ಯೆ ಇದ್ದಾಗ 295 ಕೋಟಿ ತಲಾ ಆದಾಯವನ್ನು ಹೊಂದಿದ್ದೆವು. 2018ರ ಅಂಕಿ ಅಂಶಗಳ ಪ್ರಕಾರ 1,12,835 ರೂಪಾಯಿ ತಲಾ ಆದಾಯವನ್ನು ಹೊಂದಿದ್ದೇವೆ. ಚಂದ್ರಯಾನದ ಮೂಲಕ ಬಾಹ್ಯಾಕಾಶ ವಿಜ್ಞಾನದಲ್ಲಿ ಸಾಧನೆ ಮಾಡಿದ್ದೇವೆ. ಜಗತ್ತಿನ ವಿಜ್ಞಾನಿಗಳ ಸಾಲಿಗೆ ಸೇರುವ ಮಟ್ಟದಲ್ಲಿ ಭಾರತೀಯ ವಿಜ್ಞಾನಿಗಳು ಸಾಧನೆ ಮಾಡಿದ್ದಾರೆ. ಜಗತ್ತಿನ ಬೇರೆ ಬೇರೆ ದೇಶದವರು ಭಾರತದಲ್ಲಿ ಉತ್ತಮ ಉನ್ನತ ಶಿಕ್ಷಣ ದೊರೆಯುತ್ತಿದೆ ಎಂಬುದನ್ನು ಅರಿತು ಇಲ್ಲಿಗೆ ಬರುತ್ತಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಭಾರತ ಮೈಲಿಗಲ್ಲು ಸಾಧಿಸಿದೆ.

140 ಕೋಟಿ ಜನರಿಗೆ ಉಚಿತ ಕೋವಿಡ್ ಲಸಿಕೆ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹಾಮಾರಿ ಕೊರನಾವನ್ನು ಎದುರಿಸಿದ್ದೇವೆ. ಆಶಾ ಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಕೊರೊನಾ ತಡೆಗಟ್ಟಲು ಮುಂದಾಗಿದ್ದರು. ಭಾರತದ 140 ಕೋಟಿ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಭಾರತ ಗುರುತಿಸಿಕೊಳ್ಳುತ್ತಿದೆ. ವಿವಿಧ ಕ್ರೀಡಾಕೂಟಗಳಲ್ಲಿ ಪದಕಗಳ ಬೇಟೆ ಆಡುತ್ತಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದ ಸಂವಿಧಾನದಿಂದ ಈ ಎಲ್ಲ ಶ್ರೇಷ್ಠ ಸಾಧನೆಗಳು ಆಗಿವೆ. ಸಾಮಾನ್ಯ ಗುಡ್ಡಗಾಡು ಪ್ರದೇಶದ ಮಹಿಳೆ ರಾಷ್ಟ್ರಾಧ್ಯಕ್ಷರಾಗಿದ್ದಾರೆ. ಚಹಾ ಮಾರುತ್ತಿದ್ದ ನರೇಂದ್ರ ಮೋದಿಯವರು ಪ್ರಧಾನಿ ಆಗಿದ್ದಾರೆ ಎಂಬುದು ಸಂವಿಧಾನದ ಕೊಡುಗೆಯಾಗಿದೆ. ದೇಶದಲ್ಲಿ ಬಡತನ, ನಿರುದ್ಯೋಗ, ಭಯೋತ್ಪಾದನೆ ಸೇರಿದಂತೆ ವಿವಿಧ ಸಮಸ್ಯೆಗಳು ಹೆಚ್ಚಾಗಿವೆ. ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ನಾವು ಪಾಲಿಸಬೇಕಿದೆ ಎಂದು ಪ್ರತಿಪಾದಿಸಿದರು.

ಕರ್ತವ್ಯ ಅರಿತು ಮತ ಚಲಾವಣೆ ಮಾಡಬೇಕು
ಕಳೆದ 30 ವರ್ಷಗಳಲ್ಲಿ ಹಲವು ಚುನಾವಣೆಗಳನ್ನು ಎದುರಿಸಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಪ್ರಜೆಗಳು ಕರ್ತವ್ಯ ಅರಿತು ಮತ ಚಲಾವಣೆ ಮಾಡಬೇಕು. ಮುಕ್ತ ಮನಸ್ಸಿನಿಂದ ಮತದಾನ ಮಾಡಬೇಕಿದೆ ಎಂದರು. ಮತಗಳು ವ್ಯಾಪಾರದ ಸರಕಾಗಬಾರದು. ಇಡೀ ಜಗತ್ತಿನಲ್ಲಿ ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರ ಮತ್ತೊಂದು ಇಲ್ಲ. ಬೇರೆ ಬೇರೆ ದೇಶಗಳಲ್ಲಿ ಅರಾಜಕತೆ ಭುಗಿಲೆದ್ದಿವೆ. ಚುನಾವಣಾ ನೀತಿ ಸಂಹಿತೆ ನಿಯಮಗಳನ್ನು ನಾವು ಪಾಲಿಸಬೇಕು. ಪತ್ರಿಕಾ ರಂಗ ಸಂವಿಧಾನದ ನಾಲ್ಕನೇ ಅಂಗವಾಗಿದೆ. ಪತ್ರಕರ್ತರು, ವೈದ್ಯರು, ವಕೀಲರು ಸೇರಿದಂತೆ ಇತರರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯನ್ನು ಅರಿತುಕೊಳ್ಳಬೇಕಿದೆ. ಹಣವನ್ನು ನ್ಯಾಯ ಮಾರ್ಗದಿಂದ ಗಳಿಸಬೇಕು. ನಮ್ಮಲ್ಲಿ ಮೊದಲು ಪರಿವರ್ತನೆ ಆಗಬೇಕು. ಸರ್ಕಾರದ ಸೌಲಭ್ಯಗಳು ಅರ್ಹರಿಗೆ ದೊರೆಯಬೇಕಾಗಿದೆ ಎಂದರು.
ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸಂವಿಧಾನದ 10ನೇ ಅನುಸೂಚಿಯಲ್ಲಿ ಸೇರಿಸಲಾಗಿದೆ. ಚುನಾವಣೆ ವ್ಯವಸ್ಥೆಯಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ. ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಸಲಾಯಿತು. ಆಧಾರ್ ಕಾರ್ಡ್ ಅನ್ನು ಚುನಾವಣಾ ಗುರುತಿನಿ ಚೀಟಿಗೆ ಜೋಡಣೆ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಸರಿ ಎನಿಸದಿದ್ದ ಪಕ್ಷದಲ್ಲಿ ನೋಟಾ ಆಯ್ಕೆ ಮಾಡಬಹುದು. ಚುನಾವಣಾ ಖರ್ಚು ವೆಚ್ಚಕ್ಕೆ ಮಿತಿ ಹಾಕಲಾಗಿದೆ. ಜನರು ಮೊದಲು ಸರಿಯಾದರೆ, ವ್ಯವಸ್ಥೆ ಸರಿಯಾಗುತ್ತದೆ. ಯುವಕರು ನನ್ನ ಮತ ಮಾರಾಟಕ್ಕಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಈ ಅಭಿಯಾನ ಜನಾಂದೋಲನದ ರೀತಿಯಲ್ಲಿ ಬೆಳೆಯಬೇಕು. ಭಾರತವು ಯುವ ದೇಶವಾಗಿದೆ. ಸಮಾಜದಲ್ಲಿನ ಹಿರಿಯರ ವರ್ಗದ ಮೌನ ಬೆಲೆ ತೆರಬೇಕಾಗಿದೆ. ಹಿರಿಯರು ಸಮಾಜದ ಆಗುಹೋಗುಗಳ ಬಗ್ಗೆ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ಹೊರಹಾಕಬೇಕು. ಚುನಾವಣಾ ಆಯೋಗ ವರ್ಷವೀಡಿ ಕಾರ್ಯಪ್ರವೃತ್ತವಾಗಬೇಕು. ಮತದಾರರನ್ನು ಜಾಗೃತಗೊಳಿಸಬೇಕಾಗಿದೆ. ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವ ಶಕ್ತಿಯನ್ನು ಹೊಂದಬೇಕು. ರಾಜಕೀಯ ಪಕ್ಷಗಳು ದೊಡ್ಡ ಜವಾಬ್ದಾರಿ ಅರಿತು ಹೆಜ್ಜೆಯಿಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ್ ಇಟ್ನಾಳ, ಶಾಸಕ ಅರವಿಂದ್ ಬೆಲ್ಲದ್, ಪಾಲಿಕೆ ಸದಸ್ಯೆ ರೂಪಾ ಶೆಟ್ಟಿ, ತಾಲೂಕು ಪಂಚಾಯತಿ ಇಒ ಗಂಗಾಧರ್ ಕಂದಕೂರ್ ಸೇರಿದಂತೆ ಮತ್ತಿತರರು ಇದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications