ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಗ್ಗೆ ಎಕ್ಸಿಟ್ ಪೋಲ್‌ಗಳು ಏನನ್ನು ಸೂಚಿಸುತ್ತವೆ?

ರಾಜಕೀಯ ಪಕ್ಷಗಳು ನಡೆಸಿದ ಹೈ-ವೋಲ್ಟೇಜ್ ಪ್ರಚಾರದ ನಂತರ ಕರ್ನಾಟಕದ ಜನತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ 2,615 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಬುಧವಾರ ಮತದಾನ ಮಾಡಿದ್ದಾರೆ. ಮತದಾನ ಮುಗಿದಂತೆ ಇಂಡಿಯಾ ಟುಡೇ-ಮೈ ಆಕ್ಸಿಸ್ ಇಂಡಿಯಾ ಎಕ್ಸಿಟ್ ಪೋಲ್ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತದ ಭವಿಷ್ಯ ನುಡಿದಿದ್ದು, ದಕ್ಷಿಣ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಲಿಂಗಾಯತ ಮುಖಂಡ ಜಗದೀಶ್ ಶೆಟ್ಟರ್ ಅವರು ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಬಿಜೆಪಿಯಲ್ಲಿದ್ದಾಗ ಅವರು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಕ್ಷಣವೇ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದರು.

jagadish shettar

ಇದು ಬಿಜೆಪಿಗೆ ನಷ್ಟದ ಮುನ್ಸೂಚನೆಯಾಗಿದಿಯೇ? ಜಗದೀಶ್ ಶೆಟ್ಟರ್ ಅವರ ನಿರ್ಗಮನ ಕರ್ನಾಟಕದಲ್ಲಿ ಕೇಸರಿ ಪಕ್ಷದ ಭವಿಷ್ಯವನ್ನು ಘಾಸಿಗೊಳಿಸಿದೆಯೇ? ಎಂಬ ಪ್ರಶ್ನೆಗಳಿಗೆ ಕಳೆದ ದಿನ ಬಹಿರಂಗಗೊಂಡ ಎಕ್ಸಿಟ್ ಪೋಲ್‌ಗಳು ಏನು ಹೇಳುತ್ತವೆ ನೋಡೋಣ.

ಇಂಡಿಯಾ ಟುಡೇ-ಮೈ ಆಕ್ಸಿಸ್ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಜಗದೀಶ್ ಶೆಟ್ಟರ್ ಪಕ್ಷಾಂತರ ಮಾಡಿದರೂ ಬಿಜೆಪಿಯ ಲಿಂಗಾಯತ ಮತಗಳ ಮೇಲೆ ಪರಿಣಾಮ ಬೀರುವುದಿಲ್ಲ. ಲಿಂಗಾಯತರಲ್ಲಿ ಕೇಸರಿ ಪಕ್ಷವು ಕಳೆದ ಬಾರಿಯಂತೆಯೇ 64% ಮತಗಳನ್ನು ಪಡೆಯುವ ಸಾಧ್ಯತೆಯಿದೆ.

ವಾಸ್ತವವಾಗಿ ಸಮೀಕ್ಷೆಯ ಪ್ರಕಾರ, ಬಿಜೆಪಿಯ ಸ್ಪರ್ಧಿ ಮಹೇಶ್ ಟೆಂಗಿನಕಾಯಿ ಜೊತೆ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸೋಲನುಭವಿಸಬಹುದು. ಹೀಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಪ್ರತಿಷ್ಠೆಯ ಕದನ ಎಂದೇ ಪರಿಗಣಿತವಾಗಿರುವ ಈ ಕ್ಷೇತ್ರದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅದಾಗ್ಯೂ ಮೇ 13ರಂದು ಮತ ಎಣಿಕೆ ನಡೆಯಲಿದ್ದು, ಜಗದೀಶ್ ಶೆಟ್ಟರ್ ಅವರ ಬಿಜೆಪಿ ಎದುರಾಳಿ ಮಹೇಶ್ ಟೆಂಗಿನಕಾಯಿ ಭವಿಷ್ಯ ನಿರ್ಧಾರವಾಗಲಿದೆ.

jagadish shettar

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆಲುವು ಸಾಧಿಸುತ್ತಾರೆಯೇ ಅಥವಾ ಜನರು ಅವರಿಗೆ ನಿರ್ಗಮನದ ಬಾಗಿಲು ತೋರಿಸುತ್ತಾರೆಯೇ ಎಂದು ಕಾದು ನೋಡಬೇಕಿದೆ.

ಜಗದೀಶ್ ಶೆಟ್ಟರ್ ಬಗ್ಗೆ

ಆರು ಬಾರಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಅವರು 2012 ರಿಂದ 2013 ರ ನಡುವೆ 10 ತಿಂಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 1980 ರಲ್ಲಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು ಮತ್ತು ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಕರ್ನಾಟಕದ ವಿರೋಧ ಪಕ್ಷದ ನಾಯಕ ಸೇರಿದಂತೆ ವಿವಿಧ ಸ್ಥಾನಗಳನ್ನು ಅಲಂಕರಿಸಿದ್ದಾರೆ.

67 ವರ್ಷ ವಯಸ್ಸಿನ ಜಗದೀಶ್ ಶೆಟ್ಟರ್ ಲಿಂಗಾಯತ ಪ್ರಬಲ ವ್ಯಕ್ತಿ. ಕರ್ನಾಟಕ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸೇರಿದಂತೆ ವಿವಿಧ ಸಚಿವ ಸ್ಥಾನಗಳನ್ನು ಹೊಂದಿದ್ದರು.

ಎಕ್ಸಿಟ್ ಪೋಲ್‌ಗಳಲ್ಲಿ ಕಾಂಗ್ರೆಸ್‌ಗೆ ಬಹುಮತ

ಇಂಡಿಯಾ ಟುಡೇ ಎಕ್ಸಿಟ್ ಪೋಲ್ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ 122-140 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ದಕ್ಷಿಣ ರಾಜ್ಯದಲ್ಲಿ ಹೈವೋಲ್ಟೇಜ್ ಪ್ರಚಾರ ನಡೆಸಿದ ಬಿಜೆಪಿ 62-80 ಸ್ಥಾನಗಳೊಂದಿಗೆ ಎರಡನೇ ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ಸಮೀಕ್ಷೆ ತೋರಿಸಿದೆ.

ಜೆಡಿಎಸ್ ಮೂರನೇ ಸ್ಥಾನವನ್ನು ಗಳಿಸಿ ಕೇವಲ 20-25 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಇತರ ಪಕ್ಷಗಳು 0-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಕರ್ನಾಟಕ ವಿಧಾನಸಭೆಯು 224 ಸ್ಥಾನಗಳನ್ನು ಹೊಂದಿದೆ. ಒಂದು ಪಕ್ಷ ಅಥವಾ ಮೈತ್ರಿ ಸರ್ಕಾರ ರಚಿಸಲು ಮ್ಯಾಜಿಕ್ ಸಂಖ್ಯೆ 113 ಅನ್ನು ಹೊಂದಿರಬೇಕು. ಈ ಬಾರಿ ಮತದಾನ ಪ್ರಭು ಯಾರ ಕೈ ಹಿಡಿಯುತ್ತಾರೆನ್ನುವ ಕುತೂಹಲ ಚುನಾವಣೋತ್ತರ ಸಮೀಕ್ಷೆಗಳ ಬಳಿಕ ಇನ್ನೂ ಹೆಚ್ಚಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+