ಕನಕಪುರ ಬೆಂಗಳೂರಿಗೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯ ಏನಿದೆ..? - ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಅಕ್ಟೋಬರ್ 25: ಕನಕಪುರ ಬೆಂಗಳೂರು ಗ್ರಾಮೀಣದ ಒಂದು ಭಾಗ. ಬೆಂಗಳೂರು ಸಾಕಷ್ಟು ಬೆಳವಣಿಗೆ ಆಗಿದೆ. ನೂರಾರು ಹಳ್ಳಿಗಳು ಬೆಂಗಳೂರಿಗೆ ಸೇರುತ್ತಿವೆ ಇದಕ್ಕೆ ಕನಕಪುರ ಹೊರತಾಗಿಲ್ಲ. ಕನಕಪುರ ಬೆಂಗಳೂರು ನಗರಕ್ಕೆ ಸೇರಿದೆ ಎನ್ನುವುದರಲ್ಲಿ ಆಶ್ಚರ್ಯಪಡುವಂತಹ ವಿಚಾರ ಏನಿದೆ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಕನಕಪುರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಜಿಲ್ಲೆ ಬಗ್ಗೆ ಹೇಳಿಲ್ಲ.ಇದಕ್ಕೆ ವಿಶೇಷ ಕಾಮೆಂಟ್ ಮಾಡುವ ಅವಶ್ಯಕತೆ ಇಲ್ಲ. ತಮ್ಮ ಕ್ಷೇತ್ರದ ಬಗ್ಗೆ ಡಿಕೆಶಿ ಮಾತನಾಡಿದ್ದಾರೆ ಈ ರೀತಿ ಹೇಳಿಕೆ ಮುಖಾಂತರ ಅಭಿವೃದ್ಧಿಗೆ ಹೊತ್ತು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಎಲ್ಲವನ್ನೂ ರಾಜಕೀಯ ಮಾಡುವುದು ಶುರುವಾಗಿದೆ. ಇದನ್ನು ಬಿಟ್ಟು ಇಡೀ ವ್ಯವಸ್ಥೆಗೆ ಅನುಕೂಲ ಆಗುವುದನ್ನು ನೋಡಬೇಕು ಎಂದರು.

ಬಿಜೆಪಿಯಲ್ಲಿ ಯಾರು ಅಧ್ಯಕ್ಷರು ಎಂದು ಬಹಿರಂಗವಾಗಿ ಹೇಳಲಿ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬರೀ ಹೆಸರು ಕೇಳಿ ಬರುವುದೇ ಆಯಿತು. ಯಾರು ಅಧ್ಯಕ್ಷರು ಅಂತ ಬಹಿರಂಗವಾಗಿ ಹೇಳಲಿ. ದೆಹಲಿ ವರಿಷ್ಠರು ಒಂದು ಹೆಸರು ಬಿಟ್ಟು ಪ್ಲಸ್ ಮೈನ್ಸ್ ನೋಡಿ ಅದು ಫೇಲ್ ಆಯಿತು ಎಂದರೆ ಮತ್ತೆ ಬೇರೆ ಹೆಸರು ಬಿಡತ್ತಾರೆ ಎಂಸು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.
ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷ ಸ್ಥಾನದ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಇದು ಊಹಾಪೋಹ ಅಂತ ಹೇಳಿದ್ದಾರೆ. ಇದನ್ನು ಹೇಗೆ ಅಧಿಕೃತ ಎಂದು ಹೇಳಲಾಗುತ್ತದೆ. ಇದಕ್ಕೆ ಯಾವುದೇ ಅರ್ಥ ಇಲ್ಲ. ಒಂದು ರಾಷ್ಟ್ರೀಯ ಪಕ್ಷದ ವಿಫಲ ಆಗಬೇಕು ಎನ್ನುವ ಉದಾಹರಣೆಗೆ ಇದ್ದರೆ, ಇದಕ್ಕೆ ರಾಜ್ಯ ಬಿಜೆಪಿ ಪರಿಸ್ಥಿತಿಯೇ ಸಾಕ್ಷಿ ಎಂದರು.

ರಾಜ್ಯಾಧ್ಯಕ್ಷರನ್ನು, ವಿಪಕ್ಷ ನಾಯಕರನ್ನು ಆಯ್ಕೆ ಮಾಡದ ಶೋಚನೀಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕಿದೆ. ಇನ್ನು ಸಂಕ್ರಾಂತಿ ನಂತರ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಆಗುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಏನು ಆಗುವುದಿಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಗಟ್ಟಿಮುಟ್ಟಾಗಿ ಐದು ವರ್ಷ ಇರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
104 ಇದ್ದಾಗಾಲೇ ಏನು ಮಾಡಲು ಆಗಲಿಲ್ಲ. ಈಗ ಏನು ಮಾಡಲು ಸಾಧ್ಯ. ಆದರೆ ಸಂಕ್ರಾಂತಿ ನಂತರ ಅಲ್ಲೋಲ ಕಲ್ಲೋಲ ಆಗುತ್ತದೆ ಎಂದು ಆಶಾಭಾವನೆ ಮೂಡಿಸಿ ಕಾರ್ಯಕರ್ತರನ್ನು, ಪಕ್ಷ ಬಿಟ್ಟು ಹೋಗುತ್ತಿರುವ ನಾಯಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಲೇವಡಿ ಮಾಡಿದರು.












Click it and Unblock the Notifications