ಲೋಕಸಭೆಗೆ ಸ್ಪರ್ಧಿಸುವುದಿಲ್ಲ, ರಾಜ್ಯ ರಾಜಕಾರಣದಲ್ಲೇ ಮುಂದುವರೆಯುವೆ: ಸಿದ್ದರಾಮಯ್ಯ
Recommended Video

Lok Sabha Elections : ಲೋಕಸಭೆಗೆ ಸ್ಪರ್ಧಿಸುವುದಿಲ್ಲ, ರಾಜ್ಯ ರಾಜಕಾರಣದಲ್ಲೇ ಮುಂದುವರೆಯುವೆ..!|Oneindia Kannada
ಹುಬ್ಬಳ್ಳಿ, ಫೆಬ್ರವರಿ 25: ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ, ರಾಜ್ಯ ರಾಜಕಾರಣದಲ್ಲೇ ಮುಂದುವರೆಯುವ ಆಸೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ರಾಜ್ಯ ರಾಜಕಾರಣದಲ್ಲೇ ಆಸೆ ಇದೆ, ಲೋಕಸಭೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನಾವು ಮೈತ್ರಿ ಮೂಲಕ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇವೆ, ಗೆಲ್ಲುವ ಕ್ಷೇತ್ರಗಳನ್ನು ಆಯಾ ಪಕ್ಷಗಳಿಗೆ ಬಿಟ್ಟುಕೊಡಲಾಗುತ್ತದೆ. ಈ ಬಗ್ಗೆ ಬಹುತೇಕ ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡುವ ವಿಶ್ವಾಸ ನನಗಿದೆ ಎಂದು ಹೇಳಿದರು.

ಪ್ರಧಾನಿಯಾಗಲು ಮಲ್ಲಿಕಾರ್ಜುನ ಖರ್ಗೆ ಸಮರ್ಥರು ಎನ್ನುವ ಹೇಳಿಕೆ ಬಗ್ಗೆ ಮಾತಣಾಡಿದ ಅವರು, ಅದು ಶಾಮನೂರು ಅವರ ಹೇಳಿಕೆ ಎಂದು ಹೇಳಿದರು. ಇನ್ನೇನು ಲೋಕಸಭಾ ಚುನಾವಣೆ ಸನ್ನಿಹಿತವಾಗಿದ್ದು, ಮಾರ್ಚ್‌ನಲ್ಲಿ ಚುನಾವಣಾ ದಿನಾಂಕ ನಿಗದಿಯಾಗಲಿದೆ.












Click it and Unblock the Notifications