ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಧ್ಯಮಗಳ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಮತ್ತೆ ಗರಂ

|
Google Oneindia Kannada News

ಹುಬ್ಬಳ್ಳಿ, ಮೇ 13 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೇಲೆ ಮತ್ತೊಮ್ಮೆ ಮುನಿಸಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಲು ಅವರು ನಿರಾಕರಿಸಿದರು.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಸೋಮವಾರ ಹುಬ್ಬಳ್ಳಿಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದರು. ವಿಮಾನ ನಿಲ್ದಾಣದಲ್ಲಿ ಸುದ್ದಿ ವಾಹಿಗಳ ಕ್ಯಾಮರಾಗಳನ್ನು ಕಂಡ ಅವರು ಮಾತನಾಡುವುದಿಲ್ಲ ಎಂದು ಕೈ ತೋರಿಸಿ ಅಲ್ಲಿಂದ ಹೊರಟು ಹೋದರು.

ಹಣಕ್ಕಾಗಿ ಬೆದರಿಕೆ, ಸುಳ್ಳು ಸುದ್ದಿ: ವರ್ಷದಲ್ಲಿ ರಾಜ್ಯದ 16 ಪತ್ರಕರ್ತರ ಬಂಧನಹಣಕ್ಕಾಗಿ ಬೆದರಿಕೆ, ಸುಳ್ಳು ಸುದ್ದಿ: ವರ್ಷದಲ್ಲಿ ರಾಜ್ಯದ 16 ಪತ್ರಕರ್ತರ ಬಂಧನ

ಮಾಧ್ಯಮದವರನ್ನು ಹತ್ತಿರ ಬಿಡದಂತೆ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಾವಲು ಪಡೆ ಸಿಬ್ಬಂದಿಗೂ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೆ.ಪಿ.ನಗರದ ನಿವಾಸದ ಬಳಿಯೂ ಮಾಧ್ಯಮಗಳನ್ನು ಪೊಲೀಸರು ತಡೆಯುತ್ತಿದ್ದಾರೆ.

Will not address media says Karnataka CM HD Kumaraswamy

ಮಂಡ್ಯ ಲೋಕಸಭಾ ಚುನಾವಣೆ ಸಮಯದಿಂದಲೂ ಮಾಧ್ಯಮಗಳ ವಿರುದ್ಧ ಕುಮಾರಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದರು.

ಪೊಲೀಸರನ್ನು ಬಳಸಿ ಮಾಧ್ಯಮ ನಿರ್ಬಂಧಕ್ಕೆ ಮುಂದಾದ ಮುಖ್ಯಮಂತ್ರಿಪೊಲೀಸರನ್ನು ಬಳಸಿ ಮಾಧ್ಯಮ ನಿರ್ಬಂಧಕ್ಕೆ ಮುಂದಾದ ಮುಖ್ಯಮಂತ್ರಿ

ಮೇ 23ರ ತನಕ ಮಾಧ್ಯಮಗಳ ಜೊತೆ ಮಾತನಾಡಬೇಡಿ ಎಂದು ಖ್ಯಾತ ಜ್ಯೋತಿಷಿಯೊಬ್ಬರು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಜ್ಯೋತಿಷಿಗಳನ್ನು ಕುಮಾರಸ್ವಾಮಿ ಬೆಂಗಳೂರಿನಲ್ಲಿ ಭೇಟಿಯಾಗಿದ್ದರು.

ಏಪ್ರಿಲ್ 28ರಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಲು ಕುಮಾರಸ್ವಾಮಿ ನಿರಾಕರಿಸಿದ್ದರು. 'ನಿಮ್ಮಲ್ಲಿನ ಚರ್ಚೆ, ಸುದ್ದಿಗಳಿಂದ ನಾನು ನಿಮಗೆ ಬಹಿಷ್ಕಾರ ಹಾಕಿದ್ದೇನೆ. ಅದೇನು ಸ್ಟೋರಿಯೋ, ಅದೇನು ಚರ್ಚೆ ಮಾಡುತ್ತೀರೋ ಮಾಡಿಕೊಳ್ಳಿ. ನಾನು ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನ ಮಾಡಿದ್ದೇನೆ' ಎಂದು ಹೇಳಿದ್ದರು.

English summary
Karnataka Chief Minister H.D.Kumaraswamy upset with media. He will not address media till May 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X