ಹುಬ್ಬಳ್ಳಿಯಲ್ಲಿ ಲೋಕಾರ್ಪಣೆಗೆ ಸಿದ್ಧವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರಂ, ಮಾಹಿತಿ ಇಲ್ಲಿದೆ
ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಉದ್ಘಾಟನೆಗೆ ಸಿದ್ಧವಾಗಿದೆ. ಹಾಗೆಯೇ ಇದು ಯಾವಗ ಉದ್ಘಾಟನೆ ಆಗಲಿದೆ ಮತ್ತು ಯಾರು ಉದ್ಘಾಟನೆ ಮಾಡಲಿದ್ದಾರೆ ಎನ್ನುವ ವಿವರವನ್ನು ತಿಳಿಯಿರಿ.
ಹುಬ್ಬಳ್ಳಿ, ಮಾರ್ಚ್, 09: ಮಾರ್ಚ್ 12ರಂದು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ಪ್ರಧಾನಿ ಮೋದಿಯವರ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಅಂದೇ ಹಲವು ಕಾರ್ಯಕ್ರಗಳಲ್ಲಿ ಭಾಗಿಯಾಗಲಿರುವ ಅವರು, ಹಾಗೆಯೇ ಹುಬ್ಬಳ್ಳಿಯ ಶ್ರೀ ಸಿದ್ಧರೂಢ ಸ್ವಾಮಿ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಅನ್ನು ಕೂಡ ಉದ್ಘಾಟನೆ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉದ್ಘಾಟನೆಗೆ ಸಿದ್ಧವಾದ ರೈಲ್ವೆ ಪ್ಲಾಟ್‌ಫಾರಂ
ಈ ರೈಲ್ವೆ ಪ್ಲಾಟ್‌ಪಾರ್ಮ್‌ನ ಅಭಿವೃದ್ಧಿ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣವಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ ಎನ್ನುವ ಮಾಹಿತಿ ವಿವಿಧ ಮೂಲಗಳಿಂದ ಲಭಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 12 ರಂದು ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಪ್ಲಾಟ್‌ಫಾರ್ಮ್ ಅನ್ನು ಲೋಕಾರ್ಪಣೆ ಮಾಡಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಪ್ರಲ್ಹಾದ್ ಜೋಶಿ ಹೇಳಿದ್ದೇನು?
ಪ್ರಧಾನಿ ಮೋದಿಯವರು ಐಐಟಿ-ಧಾರವಾಡದ ಶಾಶ್ವತ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದಾರೆ. ಇದೇ ವೇಳೆ ವಿಶ್ವದ ಅತಿ ಉದ್ದದ ಹುಬ್ಬಳ್ಳಿ ರೈಲ್ವೆ ಪ್ಲಾಟ್‌ಫಾರ್ಮ್ ಅವನ್ನು ಕೂಡ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ.
ಉದ್ಘಾಟನೆ ದಿನಾಂಕ ಮುಂದೂಡಿದ್ದು ಯಾಕೆ?
ಈ ಪ್ಲಾಟ್ ಫಾರ್ಮ್ ಎರಡು ವರ್ಷಗಳ ಹಿಂದೆಯೇ ಉದ್ಘಾಟನೆಗೆ ಸಿದ್ಧಗೊಂಡಿತ್ತು. ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ಲಾಟ್ ಉದ್ಘಾಟನೆ ಮಾಡಲಿದ್ದಾ ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಧಾನಿ ಮೋದಿವರು ಇದನ್ನು ಲೋಕಾರ್ಪಣೆ ಮಾಡಬೇಕೆಂದು ಬಯಸಿದ್ದರು.

ಪ್ರಧಾನಿ ಅವರಿಗೆ ಸಮಯ ಸಿಗದ ಕಾರಣ ಉದ್ಘಾಟನೆ ದಿನಾಂಕವನ್ನು ಮುಂದೆ ಹಾಕುತ್ತಲೇ ಬಂದಿದ್ದಾರೆ. ಇದೀಗ ಕೋನೆಗೂ ಲೋಕಾರ್ಪಣೆಗೆ ಕಾಲ ಕೂಡಿ ಬಂದಿದೆ.
ಪ್ಲಾಟ್‌ಫಾರಂ ಉದ್ದರ ವಿವರ
ಈ ಮೊದಲು 1ನೇ ಪ್ಲಾಟ್‌ಫಾರ್ಮ್ 550 ಮೀಟರ್ ಉದ್ದ ಇತ್ತು. ಇದನ್ನು ವಿಸ್ತರಿಸಿ 10 ಮೀಟರ್ ಅಗಲದೊಂದಿಗೆ 1505 ಮೀಟರ್‌ವರೆಗೆ ವಿಸ್ತರಣೆ ಮಾಡಲಾಗಿದೆ. ಇದು ವಿಶ್ವದಲ್ಲಿಯೇ ಅತಿ ಉದ್ದದ ಪ್ಲಾಟ್‌ಫಾರಂ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇದುವರೆಗೂ ಈಶಾನ್ಯ ರೈಲ್ವೆ ವಲಯದ ಗೋರಖ್‌ಪುರ ನಿಲ್ದಾಣದಲ್ಲಿರುವ 1366 ಮೀಟರ್ ಉದ್ದವಿರುವ ಪ್ಲಾಟ್‌ಫಾರಂ ಪ್ರಥಮ ಸ್ಥಾನವನ್ನು ಪಡೆದಿತ್ತು. ಇದೀಗ ಹುಬ್ಬಳ್ಳಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಪ್ಲಾಟ್‌ಫಾರಂ ಈ ಸ್ಥಾನವನ್ನು ಹಿಂದಿಕ್ಕಿ ಪ್ರಥಮ ಸ್ಥಾನವನ್ನು ಅಲಂಕರಿಸಿದೆ.












Click it and Unblock the Notifications