ಯೋಗೀಶ್‌ ಗೌಡ ಕೊಲೆ ಕೇಸ್‌: ಮತ್ತೆ ಫೀಲ್ಡಿಗಿಳಿದ ಸಿಬಿಐ, ಮನೆಯಿಂದ ಇನ್ಸ್‌ಪೆಕ್ಟರ್‌ ಟಿಂಗರಿಕರ್ ಪರಾರಿ

ಧಾರವಾಡ, ಅಕ್ಟೋಬರ್‌ 08: ಧಾರವಾಡದಲ್ಲಿ ನಡೆದ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಹಿಂದಿನ ತನಿಖಾಧಿಕಾರಿಯಾಗಿದ್ದ ಇನ್ಸ್‌ಪೆಕ್ಟರ್‌ ಚೆನ್ನಕೇಶವ ಟಿಂಗರಿಕರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಮನೆಯಿಂದ ಚೆನ್ನಕೇಶವ ಟಿಂಗರಿಕರ್ ಮನೆಯಿಂದ ಪರಾರಿಯಾಗಿದ್ದಾರೆ.

ಧಾರವಾಡದ ಮಲಪ್ರಭಾ ನಗರದಲ್ಲಿರುವ ಚೆನ್ನಕೇಶವ ಟಿಂಗರಿಕರ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಚೆನ್ನಕೇಶವ ಅವರು ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

yogesh-gowda-murder-case

2016ರ ಜೂನ್ 15ರಂದು ಯೋಗೀಶ್‌ ಗೌಡ ಕೊಲೆ ನಡೆದಾಗ ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ಟಿಂಗರಿಕರ್, ವಿರುದ್ಧ ಸಾಕ್ಷಿ ನಾಶ ಹಾಗೂ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಬಳಿಕ ಧಾರವಾಡ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಟಿಂಗರಿಕರ್, ಎಫ್‌ಐಆರ್‌ಗೆ ತಡೆ ತರಲು ಯತ್ನಿಸಿದ್ದರು.

ತನ್ನ ವಿರುದ್ಧ ದಾಖಲಾದ ಎಫ್​ಐಆರ್‌ಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಕಳೆದ ವಾರ ಅರ್ಜಿ ವಜಾಗೊಳಿಸಿತ್ತು. ಅಲ್ಲದೆ, ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಟಿಂಗರಿಕರ್ ಅವರು ಗೈರಾಗಿದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.

yogesh-gowda-murder-case

ಕೋರ್ಟ್ ವಾರೆಂಟ್ ಜಾರಿ ಮಾಡಿದ ಬೆನ್ನಲ್ಲೇ ಚೆನ್ನಕೇಶವ ಟಿಂಗರಿಕರ್ ಅವರನ್ನು ಬಂಧಿಸಲು ಸಿಬಿಐ ಅಧಿಕಾರಿಗಳ ಟಿಂಗರಿಕರ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಟಿಂಕರಿಗರ್ ಮನೆಯಿಂದ ಪರಾರಿಯಾಗಿದ್ದಾರೆ.

ಟಿಂಗರಿಕರ್ ಬಂಧನಕ್ಕೆ ಪ್ಲಾನ್

ಟಿಂಗರಿಕರ್ ಮನೆಯಲ್ಲಿಯೇ ಕುಳಿತು ಟಿಂಗರಿಕರ್ ಬಂಧನಕ್ಕೆ ಸಿಬಿಐ ಅಧಿಕಾರಿಗಳು ಪ್ಲಾನ್ ಮಾಡುತ್ತಿದ್ದಾರೆ. ಟಿಂಗರಿಕರ್ ಮನೆ ಅಕ್ಕಪಕ್ಕದಲ್ಲೇ ಸಂಬಂಧಿಕರು ವಾಸಿಸುತ್ತಿದ್ದು, ಇವರನ್ನೆಲ್ಲ ಒಂದೇ‌ ಮನೆಯಲ್ಲಿ ಸೇರಿಸಿದ್ದಾರೆ. ಎಲ್ಲರನ್ನೂ ವಿಚಾರಣೆ ನಡೆಸಲಾಗುತ್ತಿದೆ. ಇದರ ಜೊತೆಗೆ ಸಂಬಂಧಿಕರ ಮನೆಗಳಿಗೂ ಭೇಟಿ ನೀಡಿ ಟಿಂಗರಿಕರ್‌ಗಾಗಿ ಹುಡುಕಾಟ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+