ಡಿ.21ರಂದು ಹುಬ್ಬಳ್ಳಿಗೆ ಯೋಗಿ ಆದಿತ್ಯನಾಥ್ ಆಗಮನ

ಹುಬ್ಬಳ್ಳಿ, ಡಿಸೆಂಬರ್ 15 : ಹುಬ್ಬಳ್ಳಿಯಲ್ಲಿ ನಡೆಯುವ ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆ ಉದ್ದೇಶಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಷಣ ಮಾಡಲಿದ್ದಾರೆ.

ಡಿಸೆಂಬರ್ 21ರ ಗುರುವಾರ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಹುಬ್ಬಳ್ಳಿ ಪೂರ್ವ, ಹುಬ್ಬಳ್ಳಿ ಪಶ್ಚಿಮ, ಹುಬ್ಬಳ್ಳಿ ಕೇಂದ್ರ ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಬೃಹತ್ ಸಮಾವೇಶ ನಡೆಸಲಾಗುತ್ತಿದೆ.

Yogi Adityanath to address Parivartan yatra in Hubballi on Dec 21

ಕೇಂದ್ರದ ನಾಯಕರು ಪರಿವರ್ತನಾ ಯಾತ್ರೆಗೆ ಆಗಮಿಸಲಿದ್ದಾರೆ ಎಂದು ಕರ್ನಾಟಕ ಬಿಜೆಪಿ ನಾಯಕರು ಹೇಳಿದ್ದರು. ಬೆಳಗಾವಿಯಲ್ಲಿ ನಡೆದ ಪರಿವರ್ತನಾ ಯಾತ್ರೆಗೆ ಛತ್ತೀಸ್‌ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಆಗಮಿಸಿದ್ದರು.

ಚಿತ್ರಗಳು: ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಲಿರುವ ಬಿಜೆಪಿಯ ಪರಿವರ್ತನಾ ಯಾತ್ರೆ

ಡಿ.21ರಂದು ಹುಬ್ಬಳ್ಳಿಯಲ್ಲಿ ನಡೆಯುವ ಸಮಾವೇಶಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ. ಡಿ.17ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ.

ಜನವರಿ 25 ರಂದು ಮೈಸೂರಿನಲ್ಲಿ ಬಿಜೆಪಿಯ ಪರಿವರ್ತನಾ ಸಮಾವೇಶ ನಡೆಯಲಿದೆ. ಜನವರಿ 28ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ನರೇಂದ್ರ ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+