ಹದಿನೈದರ ಬಾಲಕನಿಂದ 5ರ ಬಾಲಕಿ ಮೇಲೆ ಅತ್ಯಾಚಾರ

By: ಒನ್ಇಂಡಿಯಾ ಪ್ರತಿನಿಧಿ
Subscribe to Oneindia Kannada

ಹೈದರಾಬಾದ್, ಫೆಬ್ರವರಿ 6: ಹದಿನೈದರ ಹರೆಯದ ಬಾಲಕನೊಬ್ಬ ಭಾನುವಾರ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮೊಯಿನಾಬಾದ್ ನಲ್ಲಿ ನೆರೆ ಮನೆಯಲ್ಲಿ ವಾಸವಿರುವ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಹೈದರಾಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿಯ ತಂದೆ ನೀಡಿದ ದೂರಿನ ಪ್ರಕಾರ, ಏಳನೇ ತರಗತಿ ಓದುತ್ತಿರುವ ಹದಿನೈದು ವರ್ಷದ ಬಾಲಕ ಭಾನುವಾರ ಮಧ್ಯಾಹ್ನ ಆತನ ಮನೆಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮೊಯಿನಾಬಾದ್ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಜಿ.ಶ್ರೀನಿವಾಸ್ ತಿಳಿಸಿದ್ದಾರೆ.[ಹದಿನೈದರ ಬಾಲೆಯನ್ನು ಹೊತ್ತೊಯ್ದು, ಅತ್ಯಾಚಾರವೆಸಗಿ, ಮಾರಿದ ದುರುಳರು]

15 Year Old Boy Arrested For Allegedly Raping 5 Year Old

ಬಾಲಕಿಯು ಈ ಕೃತ್ಯದ ಬಗ್ಗೆ ತನ್ನ ತಂದೆಗೆ ತಿಳಿಸಿದ್ದು, ಕಳೆದ ತಿಂಗಳು ಕೂಡ ಅದೇ ಬಾಲಕ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ವಿಚಾರಣೆಯನ್ನು ಮುಂದುವರಿಸಲಾಗಿದೆ.

ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುವುದಕ್ಕೆ ಅಮಾಯಕತೆ ಹಾಗೂ ಪ್ರತಿರೋಧ ತೋರುವುದಿಲ್ಲ ಎಂಬುದೇ ಕಾರಣ. ಆದ್ದರಿಂದ ಪೋಷಕರು ಬಹಳ ಎಚ್ಚರಿಕೆಯಿಂದ ಇರಬೇಕು. ಇಂಥ ಸಂಬಂಧಿಕರಿಂದಲೇ ಹೆಚ್ಚಿನ ದೌರ್ಜನ್ಯ ಪ್ರಕರಣಗಳು ನದೆಯುತ್ತವೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
A teenage boy on Sunday allegedly "raped" a 5-year-old girl, who stays in his neighbourhood at Moinabad in Hyderabad.
Please Wait while comments are loading...