• search
  • Live TV
ಹೈದರಾಬಾದ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ತೆಲಂಗಾಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದ 17 ಜಿಲ್ಲೆಗಳ ಕೊರೊನಾ ವರದಿ

|
Google Oneindia Kannada News

ಹೈದ್ರಾಬಾದ್, ಏಪ್ರಿಲ್ 22: ತೆಲಂಗಾಣದಲ್ಲಿ ಇತ್ತೀಚಿನ ಕೊವಿಡ್-19 ಸೋಂಕಿನ ಬೆಳವಣಿಗೆ ಆತಂಕಕಾರಿಯಾಗಿದೆ. 33 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ರಾಜ್ಯಕ್ಕಿಂತ ಎರಡು ಪಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ತಪಾಸಣೆ ನಡೆಸಿದ ಶೇ.3.9ರಷ್ಟು ಜನರಿಗೆ ಸೋಂಕು ದೃಢಪಟ್ಟಿದೆ.

ರಾಜ್ಯದ ಶೇಕಡಾವಾರು ಪ್ರಮಾಣಕ್ಕಿಂತ 17 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣವು ಇಮ್ಮಡಿ ಆಗಿರುವುದು ಆಯಾ ಜಿಲ್ಲೆಗಳು ನೀಡಿರುವ ದತ್ತಾಂಶದಲ್ಲಿ ದೃಢಪಟ್ಟಿದೆ. ಇತ್ತೀಚಿನ ಜಿಲ್ಲಾವಾರು ಸೋಂಕಿತ ಪ್ರಕರಣಗಳ ವರದಿ ಪ್ರಕಾರ, ಏಪ್ರಿಲ್ 17ರಂದು 1,29,637 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 5093 ಮಂದಿಗೆ ಸೋಂಕು ಇರುವುದು ಗೊತ್ತಾಗಿದೆ. ಒಟ್ಟು ತಪಾಸಣೆಯ ಶೇ.3.90ರಷ್ಟು ಪ್ರಕರಣಗಳು ಪಾಸಿಟಿವ್ ಬಂದಿವೆ.

ಭಾರತದಲ್ಲಿ ಹೊಸ ಅಲೆಯ ಆತಂಕ: ಕೊರೊನಾ 3ನೇ ರೂಪಾಂತರ ತಳಿ!ಭಾರತದಲ್ಲಿ ಹೊಸ ಅಲೆಯ ಆತಂಕ: ಕೊರೊನಾ 3ನೇ ರೂಪಾಂತರ ತಳಿ!

ಇಡೀ ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ.3.90ರಷ್ಟಿದ್ದರೆ, ತೆಲಂಗಾಣದ 17 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣವು 3.90ಕ್ಕಿಂತ ಎರಡು ಪಟ್ಟು ಹೆಚ್ಚಾಗಿರುವುದು ಇತ್ತೀಚಿನ ಅಂಕಿ-ಅಂಶಗಳಲ್ಲಿ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ತೆಲಂಗಾಣದ 17 ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಳ:

ರಾಜ್ಯದ ಕಾಮರೆಡ್ಡಿ ಜಿಲ್ಲೆಯಲ್ಲಿ ತಪಾಸಣೆ ನಡೆಸಿದ 100 ಜನರಲ್ಲಿ ಶೇ.7.09ರಷ್ಟು ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಜಿಲ್ಲೆಯಲ್ಲಿ 3269 ಜನರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸಿದಾಗ 232 ಜನರಿಗೆ ಪಾಸಿಟಿವ್ ಬಂದಿರುವುದು ಗೊತ್ತಾಗಿದೆ. ರಾಜ್ಯದಲ್ಲಿ ಒಟ್ಟು ಪಾಸಿಟಿವಿಟಿ ಪ್ರಮಾಣ ಶೇ.3.90ರಷ್ಟಿದೆ. ಆದರೆ ಕಾಮರೆಡ್ಡಿ ಜಿಲ್ಲೆಯಲ್ಲಿ ಶೇ.7.09, ನಿರ್ಮಲ್ ಶೇ.6.3, ಮೇಡ್ಚಲ್ ಶೇ.6.2, ನಗರ್ ಕರ್ನೂಲ್ ಶೇ.6.1, ಯದಾದ್ರಿ ಶೇ.6.01, ಜಾಗತಿಯಲ್ ಶೇ.6.01ರಷ್ಟು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಜಿಲ್ಲೆಗಳಲ್ಲಿ ಪ್ರತಿನಿತ್ಯ 2,000 ದಿಂದ 7,000ದವರೆಗೂ ಜನರನ್ನು ಕೊವಿಡ್-19 ಸೋಂಕಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ.

English summary
17 District Reports Higher Than Telangana Coronavirus Positivity Rate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X