ಕರ್ನೂಲ್‌ನಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು,4 ಶಾಲೆಗಳು ಬಂದ್

ಅಮರಾವತಿ, ಅಕ್ಟೋಬರ್ 21: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ 27 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವ ಕಾರಣ 4 ಶಾಲೆಗಳನ್ನು ಮುಚ್ಚಲಾಗಿದೆ.

9-10ನೇ ತರಗತಿ ಓದುತ್ತಿರುವ 27 ವಿದ್ಯಾರ್ಥಿಗಳಿಗೆ ಸೋಂಕು ತಗುಲಿತ್ತು. ಇತ್ತೀಚೆಗಷ್ಟೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗಿತ್ತು.ಹತ್ತು ದಿನಗಳ ಕಾಲ ಈ ಶಾಲೆಗಳನ್ನು ಮುಚ್ಚಿ ಸ್ಯಾನಿಟೈಸ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಕೊವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಖಾಸಗಿ ಶಾಲೆಗಳ ವಿರುದ್ಧ ಕರ್ನೂಲ್ ಶಿಕ್ಷಣಾಧಿಕಾರಿ ಕಿಡಿ ಕಾರಿದ್ದಾರೆ.ಈ 27 ವಿದ್ಯಾರ್ಥಿಗಳನ್ನು ಐಸೊಲೇಷನ್‌ನಲ್ಲಿರಿಸುವಂತೆ ಸೂಚಿಸಲಾಗಿದೆ. ಇದೀಗ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

27 School Students In Kurnool Test Positive For Coronavirus

ಆಂಧ್ರಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಇನ್ನೂ ತೆರೆದಿಲ್ಲ, ಕೇಂದ್ರ ಸರ್ಕಾರದ ಅನ್‌ಲಾಕ್ ನಿಯಮದಲ್ಲಿ ಶಾಲಾ, ಕಾಲೇಜುಗಳನ್ನು ತೆರೆಯಬಹುದು ಎಂದು ಹೇಳಲಾಗಿದೆ. ನವೆಂಬರ್ 2 ರಿಂದ ಶಾಲೆಗಳು ತೆರಯಲಿವೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 76 ಲಕ್ಷಕ್ಕೆ ಏರಿಕೆಯಾಗಿದೆ.ಇಂದು 54.044 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 717 ಮಂದಿ ಮೃತಪಟ್ಟಿದ್ದಾರೆ. 7,40,090 ಸಕ್ರಿಯ ಪ್ರಕರಣಗಳಿವೆ, 67,95,103 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 76,51,108 ಪ್ರಕರಣಗಳಿವೆ.

ಇದುವರೆಗೂ 1,15,914 ಮಂದಿ ಮೃತಪಟ್ಟಿದ್ದಾರೆ.ಭಾರತದಲ್ಲಿ ಕಳೆದೊಂದು ವಾರದಿಂದ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದೆ. ಭಾರತದಲ್ಲಿ ಮಂಗಳವಾರ 46,791 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 587 ಮಂದಿ ಮೃತಪಟ್ಟಿದ್ದರು.67,33,329 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+