ಕೆಎಸ್ಆರ್ ಟಿಸಿ ಬಸ್- ಟೆಂಪೋ ಮುಖಾಮುಖಿ: ಐವರು ದುರ್ಮರಣ
ಚಿತ್ತೂರು, (ಆಂಧ್ರ ಪ್ರದೇಶ), ಡಿಸೆಂಬರ್ 28 : ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ ಸಮೀಪ ಕೆಎಸ್ ಆರ್ ಟಿಸಿ ಬಸ್ ಹಾಗೂ ಟೆಂಪೋ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ ಸಮೀಪ ಬುಧವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದು, 11 ಜನರಿಗೆ ಗಾಯಗಳಾಗಿವೆ.

ತಿರುಪತಿಯಿಂದ ಮೈಸೂರಿನತ್ತ ವೇಗವಾಗಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಟೆಂಪೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟೆಂಪೋದಲ್ಲಿದ್ದ ಮಹಾರಾಷ್ಟ್ರದ ಮೂಲದ ಇಬ್ಬರು ಮಹಿಳೆಯರು ಸೇರಿ ಐವರು ಅಸುನೀಗಿದ್ದಾರೆ.
ಗಾಯಗೊಂಡಿರುವ 11 ಜನರನ್ನು ಚಿಕಿತ್ಸೆಗಾಗಿ ಚಿತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.












Click it and Unblock the Notifications