ಚಿತ್ತೂರು ಬಳಿ ಕಾರಿಗೆ ಬೆಂಕಿ: ಬೆಂಗಳೂರಿನ ಐವರು ಸಜೀವ ದಹನ
ಬೆಂಗಳೂರು, ಸೆಪ್ಟೆಂಬರ್ 14: ಚಿತ್ತೂರು ಬಳಿ ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ.
ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಕಾರು ಪಲ್ಟಿಯಾಗಿ ಹೊತ್ತಿಕೊಂಡಿದೆ. ಚಿತ್ತೂರಿನ ಪಲಮನೇರು ಮಂಡಲಂ ಬಳಿ ಈ ದುರ್ಘಟನೆ ನಡೆದಿದೆ.
ಕಾರಿನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಾಗ ಬೆಂಕಿ ಹೊತ್ತಿಕೊಂಡಿತ್ತು. ಕಾರಿನಿಂದ ಹೊರ ಬರಲಾಗದೆ ಐವರು ಸಜೀವ ದಹನವಾಗಿದ್ದರು. ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.

ಮೃತರನ್ನು ಬೆಂಗಳೂರಿನ ಜಾಹ್ನವಿ, ರಾಮ್, ಕಲಾ, ಸಾಯಿ ಆಶ್ರೀತ್ ಹಾಗೂ ಪವನ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಡ್ರೈವರ್ ವಿಷ್ಣು ಕಾರಿನೆ ಮೇಲೆ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಸ್ಕಿಡ್ ಆಗಿ ಪಲ್ಟಿ ಹೊಡೆದಿದೆ, ಕಾರು ಪಲ್ಟಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಒಳಗಿದ್ದವರು ಸುಟ್ಟು ಕರಕಲಾಗಿದ್ದಾರೆ.












Click it and Unblock the Notifications